26.1 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಗೇರುಕಟ್ಟೆ ಶ್ರೀಧರ ಮುಗೇರ ಸಂಶಯಾಸ್ಪದ ಸಾವಿನ ಪ್ರಕರಣದ ಸಮಗ್ರ ತನಿಖೆ ನಡೆಸಬೇಕು ಪ.ಜಾತಿ, ಪಂಗಡ ಕುಂದುಕೊರತೆ ಸಭೆಯಲ್ಲಿ ದಲಿತ ಮುಖಂಡರ ಒತ್ತಾಯ

ಬೆಳ್ತಂಗಡಿ: ಕಳಿಯ ಗ್ರಾಮದ ಗೇರುಕಟ್ಟೆ ಸಮೀಪ ಶ್ರೀಧರ ಮುಗೇರ ಎಂಬಾತನ ಸಂಶಯಾಸ್ಪದ ರೀತಿಯಲ್ಲಿ ಕೆರೆಯಲ್ಲಿ ಶವ ಸಿಕ್ಕ ಪ್ರಕರಣ ನಡೆದು ವರ್ಷ ಕಳೆದರೂ ಇನ್ನೂ ಸರಿಯಾದ ತನಿಖೆ ನಡೆದಿಲ್ಲ. ತಕ್ಷಣ ಆರೋಪಿಗಳನ್ನು ಪತ್ತೆ ಹಚ್ಚಬೇಕು ಎಂಬ ವಿಚಾರ ಸೋಮವಾರ ಬೆಳ್ತಂಗಡಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಪರಿಶಿಷ್ಟ ಜಾತಿ, ಪಂಗಡದ ಕುಂದುಕೊರತೆ ಸಭೆಯಲ್ಲಿ ಪ್ರಸ್ತಾಪವಾಯಿತು.

ದಲಿತ ಮುಖಂಡ ಸಂಜೀವ ಆರ್.ಕೇಳಿದ ಈ ಪ್ರಶ್ನೆಗೆ ಡಿವೈಎಸ್ಪಿ ರೋಹಿಣಿ ಸಿ.ಕೆ.ಉತ್ತರಿಸಿ ಆತ ಬಳಸಿದ ಮೊಬೈಲ್ ಫೋನ್ ಮಾಹಿತಿ ಸಂಗ್ರಹವಾಗುತ್ತಿದ್ದು, ಅದರ ವರದಿ ಇನ್ನು ಬಂದಿಲ್ಲ. ಪ್ರಕರಣದ ತನಿಖೆ ಮುಂದುವರಿದಿದೆ ಎಂದು ತಿಳಿಸಿದರು.
ಬೆಳಾಲಿನಲ್ಲಿ ಕಳೆದ ಜುಲೈ ತಿಂಗಳಲ್ಲಿ ವೀಣಾ ಎಂಬಾಕೆಯ ಶವ ಮನೆಯ ಬಾವಿಯಲ್ಲಿ ಪತ್ತೆಯಾದ ಪ್ರಕರಣವು ಸೂಕ್ತ ರೀತಿಯಲ್ಲಿ ತನಿಖೆಯಾಗಬೇಕು ಎಂದು ಸೇಸಪ್ಪ ನಲ್ಕೆ ಅಳದಂಗಡಿ ಒತ್ತಾಯಿಸಿದರು. ಪ್ರಕರಣದ ತನಿಖೆ ನಡೆಯುತ್ತಿರುವ ಬಗ್ಗೆ ಮತ್ತು ಘಟನೆಯ ನಂತರ ಮಗುವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೂಲಕ ಪುತ್ತೂರು ವಿವೇಕಾನಂದ ಆಶ್ರಮಕ್ಕೆ ಸೇರಿಸಲಾಗಿತ್ತು. ಇದೀಗ ಮಗುವಿನ ಅಜ್ಜ ನಾಗೇಶ್ ಅವರು ಕಾನೂನು ಪ್ರಕಾರ ಮಗುವನ್ನು ಪಡೆದುಕೊಂಡಿದ್ದಾರೆ ಎಂದು ಧರ್ಮಸ್ಥಳ ಪಿಎಸ್‌ಐ ಸಮರ್ಥ ಆರ್ ಗಾಣಿಗೇರ್ ಸಭೆಗೆ ತಿಳಿಸಿದರು.

ತಾಲೂಕಿನಲ್ಲಿ ಗಾಂಜಾ ಮಾದಕ ದ್ರವ್ಯಗಳ, ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಶಾಲಾ-ಕಾಲೇಜು ಪರಿಸರಕ್ಕೂ ಗಾಂಜಾ ವಾಸನೆ ಹರಡಿರುವುದು ಖಂಡನೀಯ.ಗಾಂಜಾ ಪೂರೈಕೆದಾರರನ್ನು ಪತ್ತೆ ಹಚ್ಚುವಂತೆ ಬಿ.ಕೆ ವಸಂತ ಆಗ್ರಹಿಸಿದರು.
ಲಾಯಿಲ ದರ್ಪಿಂಜೆ ಸೇತುವೆಯಲ್ಲಿ ಮದ್ಯಪಾನ ಮಾಡುತ್ತಾ ಮಜಾ ಮಾಡುವ ಗುಂಪು ಸಾರ್ವಜನಿಕರ ಶಾಂತಿಭಂಗಕ್ಕೆ ಕಾರಣವಾಗುವುದಲ್ಲದೆ, ವಾಹನ ಸಂಚಾರಕ್ಕೂ ಅಡ್ಡಿಯಾಗುತ್ತಿರುವ ಕುರಿತು ಶೇಖರ ಲಾಯಿಲ ಸಭೆಯ ಗಮನಕ್ಕೆ ತಂದರು. ಅಂಥವರನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳುವ ಕುರಿತು ಭರವಸೆ ನೀಡಲಾಯಿತು.

ಸಿ. ಕೆ.ಚಂದ್ರಕಲಾ ಮಾತನಾಡುತ್ತಾ ಯುವಜನರು ದುಷ್ಚಟಗಳಿಗೆ ಬಲಿಯಾಗಿ ದಾರಿ ತಪ್ಪುತ್ತಿದ್ದಾರೆ. ಉಜಿರೆಯಲ್ಲಿ ಯುವಕನೊಬ್ಬ ತಂದೆಯನ್ನೇ ಕೊಲೆ ಮಾಡಲು ಯತ್ನಿಸಿದ ಘಟನೆ ಅತ್ಯಂತ ಅಪಾಯಕಾರಿ. ಪೋಲಿಸ್ ಇಲಾಖೆ ದಲಿತ ಕಾಲನಿಗಳಿಗೆ ಭೇಟಿ ನೀಡಿ ಕಾನೂನು ಮಾಹಿತಿ ನೀಡಬೇಕು ಎಂದರು. ಮೊದಲಿಗೆ ಡಿವೈಎಸ್ಪಿ ಕಚೇರಿಯ ಮಹಿಳಾ ಹೆಡ್ ಕಾನ್ಸ್‌ಟೇಬಲ್ ಸವಿತಾ ಶೆಟ್ಟಿ ಸ್ವಾಗತಿಸಿ ಧರ್ಮಸ್ಥಳ ಪೊಲೀಸ್ ಠಾಣೆಯ ಪಿಎಸ್ ಐ ಸಮರ್ಥ್ ಆರ್ . ಗಾಣಿಗೇರ್ ವಂದಿಸಿದರು

Related posts

ಅಳದಂಗಡಿ: ಸತತ ಪರಿಶ್ರಮವಿದ್ದರೆ ಅಸಾಧ್ಯವಾದ್ದದ್ದು ಯಾವುದು ಇಲ್ಲ: ಸಿ. ಎ. ನಿರೀಕ್ಷಾ ಎನ್

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ ಕಾಲೇಜಿಗೆ ಫ್ಯಾನ್ ಕೊಡುಗೆ

Suddi Udaya

ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ 29ನೇ ಪದವಿ ಪ್ರದಾನ ಸಮಾರಂಭ

Suddi Udaya

ತುಳುವ ಮಹಾಸಭೆ ಬೆಳ್ತಂಗಡಿ ತಾಲೂಕು ಸಂಚಾಲಕರಾಗಿ ಡಾ. ದಿವ ಕೊಕ್ಕಡ ಆಯ್ಕೆ

Suddi Udaya

ಉಜಿರೆ ಬೆನಕ ಹೆಲ್ತ್ ಸೆಂಟರ್ ವತಿಯಿಂದ ನಿವೃತ್ತ ಯೋಧ ಡಾ. ಗೋಪಾಲಕೃಷ್ಣ ಕಾಂಚೋಡುರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ವತಿಯಿಂದ ರಕ್ತದಾನ ಶಿಬಿರ

Suddi Udaya
error: Content is protected !!