25.2 C
ಪುತ್ತೂರು, ಬೆಳ್ತಂಗಡಿ
October 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಚಾಲನೆ: ಶಾಸಕ ಹರೀಶ್ ಪೂಂಜ

ಪುರಿಯ–ಮಾಲಾಡಿ–ಪುಂಜಾಲ ಕಟ್ಟೆ–ಮಡಂತ್ಯಾರು–ಕುಕ್ಕೇಡಿ ಭಾಗದ ಸಾರ್ವಜನಿಕರ ದೀರ್ಘಕಾಲದ ಬೇಡಿಕೆಯಾಗಿದ್ದ ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಅಧಿಕೃತವಾಗಿ ಚಾಲನೆ ನೀಡಲಾಯಿತು.

ಈ ಮಹತ್ವದ ಕಾಮಗಾರಿಗಾಗಿ ರೂ.50.00 ಲಕ್ಷ ಅನುದಾನವನ್ನು ಬಿಡುಗಡೆಗೊಳಿಸಲಾಗಿದ್ದು, ಮಂಗಳೂರು ಕಾವೂರು ಮೂಲದ ಮುಗೆರೋಡಿ ಕನ್ಸ್ಟ್ರಕ್ಷನ್ ಸಂಸ್ಥೆಯವರು ಕಾಮಗಾರಿಯನ್ನು ಕೈಗೆತ್ತಿಕೊಂಡಿದ್ದಾರೆ.

ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ಮೇಲ್ವಿಚಾರಣೆಯಲ್ಲಿ ಕಾಮಗಾರಿಯನ್ನು ಗುಣಮಟ್ಟದೊಂದಿಗೆ ಹಾಗೂ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕ ಶ್ರೀ ಹರೀಶ್ ಪೂಂಜ ಅವರು, “ಜನರ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ನಾನು ಬದ್ಧನಾಗಿದ್ದೇನೆ. ಈ ರಸ್ತೆ ಕಾಮಗಾರಿಯಿಂದ ಈ ಭಾಗದ ಸಾರ್ವಜನಿಕರಿಗೆ ಸುಗಮ ಸಂಚಾರ ವ್ಯವಸ್ಥೆ ಲಭಿಸಿ, ದೈನಂದಿನ ಜೀವನಕ್ಕೆ ಹೆಚ್ಚಿನ ಅನುಕೂಲವಾಗಲಿದೆ” ಎಂದು ತಿಳಿಸಿದ್ದಾರೆ.

ಇದೇ ವೇಳೆ ಕಾಮಗಾರಿಗೆ ಸಾರ್ವಜನಿಕರು ಸಹಕಾರ ನೀಡುವಂತೆ ಅವರು ವಿನಂತಿಸಿದರು

Related posts

ಹಿರಿಯ ಪತ್ರಕರ್ತ ಮನೋಹರ ಪ್ರಸಾದ್‌ರವರ ನಿಧನಕ್ಕೆ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಬಿಲ್ಲವ ಸಂಘ ಬೇಹರಿನ್ ಅಧ್ಯಕ್ಷ ಹರೀಶ್ ಪೂಜಾರಿ

Suddi Udaya

ಗುರಿಪಳ್ಳ ಶಾಲಾ ಹಳೆ ವಿದ್ಯಾರ್ಥಿಯಿಂದ ಅಪೂರ್ವ ಕೊಡುಗೆ

Suddi Udaya

ಆ.15: ನಾಲ್ಕೂರು ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿಯಿಂದ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮ ಹಾಗೂ ವಿವಿಧ ಆಟೋಟ ಸ್ಪರ್ಧೆಗಳು

Suddi Udaya

ಆಶಾ ಯಂಗ್ ಸ್ಟಾರ್ ಕ್ಲಬ್ ಕಾರ್ಯಕಾರಿ ಸಮಿತಿ ಸಭೆ

Suddi Udaya

ಗುರುವಾಯನಕೆರೆಯ ‘ಕೆರೆ’ ಗೆ ಲೋಕಾಯುಕ್ತ ನ್ಯಾಯಾಮೂರ್ತಿ ಭೇಟಿ, ಪರಿಶೀಲನೆ

Suddi Udaya
error: Content is protected !!