24.8 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ದೈವ, ಶ್ರೀ ಕೊಡಮಣಿತ್ತಾಯ, ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನ- ಶ್ರೀ ಬ್ರಹ್ಮ ಬೈದರ್ಕಳ ಗರಡಿ ಪೊಸರಡ್ಕ ಕ್ಷೇತ್ರದ ಬ್ರಹ್ಮಕುಂಭಾಭಿಷೇಕ: ಉಮಾಮಹೇಶ್ವರ ದೇವಸ್ಥಾನದಿಂದ ಪೊಸರಡ್ಕ ಕ್ಷೇತ್ರಕ್ಕೆ ಭವ್ಯ ಶೋಭಾಯಾತ್ರೆ

ಮರೋಡಿ: ಮರೋಡಿ ಪೊಸರಡ್ಕ ಶ್ರೀ ದೈವ, ಶ್ರೀ ಕೊಡಮಣಿತ್ತಾಯ, ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನ ಮತ್ತು ಬ್ರಹ್ಮಬೈದರ್ಕಳ ಗರಡಿಯಲ್ಲಿ ಎ.28ರಿಂದ ಮೇ 1ರವರೆಗೆ ನಡೆಯಲಿರುವ ಪುನ‌ರ್ ಪ್ರತಿಷ್ಠಾ ಬ್ರಹ್ಮಕುಂಭಾಭಿಷೇಕದ ಹಿನ್ನೆಲೆಯಲ್ಲಿ ಏ.28 ರಂದು ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಿಂದ ಪೊಸರಡ್ಕ ಕ್ಷೇತ್ರಕ್ಕೆ ಭವ್ಯ ಶೋಭಾಯಾತ್ರೆ ಮೂಲಕ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ ನಡೆಯಿತು.ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ದೇವೇಂದ್ರ ಹೆಗ್ಡೆ ಕೊಕ್ರಾಡಿ ಅವರು ಹೊರೆಕಾಣಿಕೆಯ ಭವ್ಯ ಶೋಭಾಯಾತ್ರೆಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಪೆರಾಡಿ ಸಿಎ ಬ್ಯಾಂಕ್ ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಣ, ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಕಾರ್ಯದರ್ಶಿ ಜಯಂತ್ ಕೋಟ್ಯಾನ್, ಆಡಳಿತ ಸಮಿತಿ ಅಧ್ಯಕ್ಷ ಜಯವರ್ಮ ಬುಣ್ಣು,ಗೌರವ ಅಧ್ಯಕ್ಷರಾದ ರಾಜೇಂದ್ರ ಬಳ್ಳಾಳ್,ಹೇಮರಾಜ್ ಕೆ,ಬ್ರಹ್ಮಕುಂಭಾಭಿಷೇಕ ಸಮಿತಿ ಅಧ್ಯಕ್ಷ ರಕ್ಷಿತ್ ಶಿವರಾಮ್,ಕಾರ್ಯಾಧ್ಯಕ್ಷರಾದ ಎಂ.ಎಸ್ ಪೂಜಾರಿ,ನಾರಾಯಣ ಪೂಜಾರಿ,ಶೀತಲ್ ಜೈನ್,ಆಡಳಿತ ಸಮಿತಿ ಪ್ರ ಕಾರ್ಯದರ್ಶಿ ಆದಿತ್ಯ ಪಿ.ಕೆ ಹಾಗೂ ಸಮಿತಿ ಸದಸ್ಯರಾದ ರವೀಂದ್ರ ಪೂಜಾರಿ ನಾಪ,ರಮೇಶ್ ಬಲಂತ್ಯರೊಟ್ಟು, ಜಿನೇಂದ್ರ ಜೈನ್ ಹರಂಬೆಟ್ಟು ಗುತ್ತು,ಸುದರ್ಶನ್ ಜೈನ್ ಪಾಂಡಿಬೆಟ್ಟು ಗುತ್ತು,ಪ್ರಮುಖರಾದ ಶುಭರಾಜ್ ಹೆಗ್ಡೆ,ಯಶೋಧರ ಬಂಗೇರ ಮತ್ತು ಊರ ಪ್ರಮುಖರು,ಭಕ್ತರು,ಊರವರು ಉಪಸ್ಥಿತರಿದ್ದರು.

ವಿವಿಧ ಕಡೆಗಳಿಂದ ಆಗಮಿಸಿದ ಹೊರೆಕಾಣಿಕೆ ಹೊತ್ತೊಯ್ದ ವಾಹನಗಳು ಮರೋಡಿ ದೇವಸ್ಥಾನದಿಂದ ಹೊರಟು ಸಾವಿರಾರು ಭಕ್ತರ ಸಮ್ಮುಖದಲ್ಲಿ ಚೆಂಡೆ, ಕುಣಿತ ಭಜನೆ, ಬ್ಯಾಂಡ್ ವಾದಕಗಳ ಮೂಲಕ ಶ್ರೀ ಕ್ಷೇತ್ರಕ್ಕೆ ಸಾಗಿಬಂತು.

Related posts

ಉಜಿರೆ ಎಸ್.ಡಿ.ಎಂ ಮಹಿಳಾ ಐ.ಟಿ.ಐ ಕಾಲೇಜಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ ಹಾಗೂ ಭಿತ್ತಿ ಪತ್ರಿಕೆ ಅನಾವರಣ

Suddi Udaya

ಮೊಗ್ರು: ಶ್ರೀ ಕ್ಷೇತ್ರ ಮುಗೇರಡ್ಕ ದೈವಸ್ಥಾನ ವತಿಯಿಂದ ಅಂಗನವಾಡಿ ಕೇಂದ್ರಕ್ಕೆ ಗೋದ್ರೇಜ್ ಮತ್ತು ಕುರ್ಚಿ ಕೊಡುಗೆ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ 27ನೇ ಆಲಂಕಾರು ಶಾಖೆ ಉದ್ಘಾಟನೆ

Suddi Udaya

ಕೊಯ್ಯೂರು ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಮರೋಡಿ:ಹರಂಬೆಟ್ಟು ಗುತ್ತು ಮನೆಯಲ್ಲಿ “ಧರ್ಮ ನೇಮೋತ್ಸವ”

Suddi Udaya

ಹೊಸಂಗಡಿ ನಿವಾಸಿ ಶ್ರೀಮತಿ ಮೀನಾಕ್ಷಿ ನಿಧನ

Suddi Udaya
error: Content is protected !!