28.1 C
ಪುತ್ತೂರು, ಬೆಳ್ತಂಗಡಿ
September 15, 2026
ನಿಧನಪೊಲೀಸ್ಪ್ರಮುಖ ಸುದ್ದಿಸಮಸ್ಯೆ

ಬೆಳಾಲು: ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

ಬೆಳ್ತಂಗಡಿ: ಪ್ರೇಮ ಪ್ರಕರಣದಲ್ಲಿ ಭಯಗೊಂಡು ಇಲಿಪಾಷಣ ತೆಗೆದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಘಟನೆ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಮಾಯದ ಬಾಳೆಮಂಡಿಕಲ್ಲು ನಿವಾಸಿ ದಿನೇಶ್ ನಾಯ್ಕ್ ಮತ್ತು ರೇವತಿ ದಂಪತಿಗಳ ಎರಡನೇ ಪುತ್ರಿ ರಮ (19) ಎಂಬಾಕೆ ಕಳೆದ ಎ.25 ರಂದು ರಾತ್ರಿ ಮನೆಯಲ್ಲಿ ಇಲಿಪಾಷಣ ತೆಗೆದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಳು. ಬಳಿಕ ಮಂಗಳೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತಿತ್ತು, ಆದ್ರೆ ಚಿಕಿತ್ಸೆ ಫಲಿಸದೆ ರಮ ಎ.29 ರಂದು ರಾತ್ರಿ 12 ಗಂಟೆಗೆ ಸಾವನ್ನಪ್ಪಿದ್ದಾಳೆ.

ರಮ ವಾಮದಪದವು ಕಾಲೇಜ್ ನಲ್ಲಿ ಎರಡನೇ ವರ್ಷದ ಪದವಿ ವಿದ್ಯಾರ್ಥಿನಿಯಾಗಿದ್ದಳು. ಯುವಕನೊಬ್ಬನ ಜೊತೆ ಪ್ರೀತಿ ಮಾಡುತ್ತಿದ್ದಳು. ಈ ವಿಚಾರ ಎರಡು ಮನೆಯವರಿಗೂ ತಿಳಿದು ಒಪ್ಪಿಗೆ ಸೂಚಿಸಿದ್ದರು. ರಮಾ ತಂದೆ ಕಾಲೇಜ್ ಮುಗಿಯುವ ಒಂದು ವರ್ಷದ ಬಳಿಕ ಮದುವೆ ಮಾಡಿಕೊಡುವುದಾಗಿ ತಿಳಿಸಿದ್ದರು. ಆದ್ರೆ ರಮಾ ಮುಂದಕ್ಕೆ ತಂದೆ ಮದುವೆ ಮಾಡದೆ ಇದ್ರೆ ಎಂದು ಭಯಗೊಂಡು ಇಲಿಪಾಷಣ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಎ.30 ರಂದು ಆತ್ಮಹತ್ಯೆ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.

Related posts

ಬೆಳ್ತಂಗಡಿ ವಕೀಲರ ಭವನದಲ್ಲಿ ಸಂವಿಧಾನ ದಿನ ಆಚರಣೆ

Suddi Udaya

ಸಂಬೋಳ್ಯದ ಸುಮಂತ್ ಸಾವಿನ ಬಗ್ಗೆ ವದಂತಿಗಳಿಗೆ ಕಿವಿಗೊಡಬೇಡಿ: ದ.ಕ. ಜಿಲ್ಲಾ ಎಸ್ಪಿ ಡಾ.ಅರುಣ್ ಕೆ ಪತ್ರಿಕಾ ಹೇಳಿಕೆ

Suddi Udaya

ಕುವೆಟ್ಟು ಗ್ರಾ.ಪಂ ಸದಸ್ಯೆ ಮೋಹಿನಿ ಅಸೌಖ್ಯದಿಂದ ನಿಧನ

Suddi Udaya

ಊಟಕ್ಕಿಲ್ಲದ ಉಪ್ಪಿನಕಾಯಿಯಂತಿರುವ ಬಳಂಜದ ಮೊಬೈಲ್ ಟವರ್: ಬಳಂಜ- ನಾಲ್ಕೂರಿನಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಗ್ರಾಹಕರು

Suddi Udaya

2017ರ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳನ್ನು 2016ಕ್ಕಿಂತ ಮೊದಲು ನೇಮಕಾತಿಯಾದವರಿಗೆ ಪೂರ್ವಾನ್ವಯಗೊಳಿಸಬಾರದು: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ಸಚಿವ ಮಧು ಬಂಗಾರಪ್ಪ ರವರಿಗೆ ಮನವಿ

Suddi Udaya

ಮಚ್ಚಿನ: ನೂತನ ವಿದ್ಯುತ್ ಕಂಬ ಅಳವಡಿಕೆ : ಸುದ್ದಿ ಉದಯ ಫಲಶ್ರುತಿ

Suddi Udaya
error: Content is protected !!