28.1 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಚಾರ್ಮಾಡಿ ಘಾಟ್‌ನಲ್ಲಿ ಕಾಣಿಸಿಕೊಂಡ ಕಾಡಾನೆ

ಬೆಳ್ತಂಗಡಿ: ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಒಂಟಿ ಕಾಡಾನೆಯ ಹಾವಳಿ ಹೆಚ್ಚಾಗಿದ್ದು, ಏ.30ರಂದು ರಾತ್ರಿ ವೇಳೆ ಘಾಟಿ ರಸ್ತೆಯಲ್ಲಿ ಕಾಡಾನೆ ಸಂಚರಿಸುತ್ತಿದ್ದ ಹಿನ್ನೆಲೆಯಲ್ಲಿ ಸ್ವಲ್ಪ ಕಾಲ ಸಂಚಾರಕ್ಕೆ ತೊಡಕು ಉಂಟಾಗಿ ರಸ್ತೆಯಲ್ಲಿ ವಾಹನಗಳು ಸಾಲು ಗಟ್ಟಿ ನಿಂತಿದ್ದವು.

ಏ.30ರಂದು ರಾತ್ರಿ ವೇಳೆ ಚಾರ್ಮಾಡಿ ಘಾಟಿ ರಸ್ತೆಯ ಆರನೇ ತಿರುವಿನಲ್ಲಿ ಕಾಡಾನೆ ಸಂಚರಿಸುತ್ತಿತ್ತು. ಇದನ್ನು ಗಮನಿಸಿದ ವಾಹನ ಸವಾರರು ಇತರ ವಾಹನಗಳಿಗೆ ನಿಲ್ಲುವಂತೆ ಸೂಚನೆ ನೀಡಿದ್ದರು. ಘಾಟಿ ರಸ್ತೆಯಲ್ಲಿ ಮೊಬೈಲ್ ನೆಟ್ವರ್ಕ್ ಸಿಗದ ಹಿನ್ನೆಲೆಯಲ್ಲಿ ವಾಹನ ಸವಾರರು ಚೆಕ್ ಪೋಸ್ಟ್‌ನಲ್ಲಿ ಆನೆ ಸಂಚರಿಸುತ್ತಿರುವ ವಿಷಯ ತಿಳಿಸಿದರು. ಬಳಿಕ ಅರಣ್ಯ ಇಲಾಖೆ ಸಿಬ್ಬಂದಿ ಬಂದು, ಯಾರೂ ತೆರಳದಂತೆ ಸೂಚನೆ ನೀಡಿದರು. ಕಾಡಾನೆ ಆರನೇ ತಿರುವಿನಿಂದ ಒಂಬತ್ತನೇ ತಿರುವಿನತ್ತ ಹೋಗಿ ಬಳಿಕ ಬಾಂಜಾರು ಕಾಡಿನತ್ತ ತೆರಳಿದೆ ಎಂದು ಅರಣ್ಯ ಇಲಾಖೆ ಸಿಬಂದಿ ಮಾಹಿತಿ ನೀಡಿದ್ದಾರೆ. ಇದೇ ಒಂಟಿ ಕಾಡಾನೆ ಬುಧವಾರವೂ ಚಾರ್ಮಾಡಿ ಘಾಟರಸ್ತೆಯಲ್ಲಿ ತಿರುಗಾಡುತ್ತಿತ್ತು ಎಂದು ಜನರು ತಿಳಿಸಿದ್ದಾರೆ.

Related posts

ಮದ್ದಡ್ಕ ಹೆಲ್ಪ್ ಲೈನ್ ವತಿಯಿಂದ ಇಫ್ತಾರ್ ಕೂಟ: ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ಶುಭಾರಂಭ

Suddi Udaya

ಸಂಪೂರ್ಣ ಹದಗೆಟ್ಟ ಉಪ್ಪಿನಂಗಡಿ- ಗುರುವಾಯನಕೆರೆ ರಸ್ತೆ: ಅನುದಾನ ಬಿಡುಗಡೆಗೊಳಿಸುವಂತೆ ಸಚಿವರಿಗೆ ಶಾಸಕ ಹರೀಶ್ ಪೂಂಜ ಮನವಿ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಅಳದಂಗಡಿ: ಮಾತೃ ಪೂಜನ, ಮಾತೃ ಧ್ಯಾನ, ಮಾತೃ ಭೋಜನ ಕಾರ್ಯಕ್ರಮ

Suddi Udaya

ತಾಲೂಕು ಹಬ್ಬಗಳ ಆಚರಣೆ ಸಮಿತಿಯಿಂದ ಡಾ|| ಬಿ.ಆರ್.ಅಂಬೇಡ್ಕರ್ ಜನ್ಮದಿನಾಚರಣೆ

Suddi Udaya
error: Content is protected !!