September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ: ಡಾ| ಬಿ.ಆರ್ ಅಂಬೇಡ್ಕರ್ ರವರ 135ನೇ ಜನ್ಮ ದಿನಾಚರಣೆ ಮತ್ತು ವಿಶ್ವ ಕಾರ್ಮಿಕ ದಿನಾಚರಣೆ

ಬೆಳ್ತಂಗಡಿ: ಪಟ್ಟಣ ಮತ್ತು ಗ್ರಾಮ ಪಂಚಾಯತ್ ಪೌರ ಕಾರ್ಮಿಕರ ಸಂಘ ದ.ಕ. ಜಿಲ್ಲೆ ಇದರ ವತಿಯಿಂದ ಭಾರತ ರತ್ನ ಸಂವಿಧಾನ ಶಿಲ್ಪಿ ಡಾ| ಬಿ.ಆರ್ ಅಂಬೇಡ್ಕರ್ ರವರ 135ನೇ ಜನ್ಮ ದಿನಾಚರಣೆ ಮತ್ತು ವಿಶ್ವ ಕಾರ್ಮಿಕ ದಿನಾಚರಣೆಯು ಮೇ 1ರಂದು ಬೆಳ್ತಂಗಡಿ ಶ್ರೀ ನಾರಾಯಣಗುರು ಸಭಾಭವನದಲ್ಲಿ ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಟ್ಟಣ ಮತ್ತು ಗ್ರಾಮ ಪಂಚಾಯತ್ ಪೌರ ಕಾರ್ಮಿಕರ ಸಂಘದ ಜಿಲ್ಲಾ ಅಧ್ಯಕ್ಷ ಸುರೇಶ್ ಸುದೆಮುಗೇರು ವಹಿಸಿದ್ದರು. ಪೌರ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ದೀಪ ಪ್ರಜ್ವಲನೆಗೊಳಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

ಮುಖ್ಯ ಅಥಿತಿಗಳಾಗಿ ಜಿಲ್ಲಾ ಪೌರ ಕಾರ್ಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ಆನಂದ ಎಸ್.ಪಿ., ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಶೇಖರ್ ಕುಕ್ಕೇಡಿ, ಬಿ.ಕೆ. ವಸಂತ, ಸಂ. ಸಂಚಾಲಕರು ದಸಂಸ (ಅಂಬೇಡ್ಕರ್ ವಾದ) ಮೈಸೂರು ವಿಭಾಗ, ರಮೇಶ್ ಆರ್, ಸಂಚಾಲಕರು ದಸಂಸ (ಅಂಬೇಡ್ಕರ್ ವಾದ), ಬೆಳ್ತಂಗಡಿ ತಾಲೂಕು ಘಟಕ, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ರಾಜೇಶ್ ಕೆ., ಗ್ರಾಮ ಪಂಚಾಯತ್ ಪೌರ ಕಾರ್ಮಿಕರ ಸಂಘ ದ ಅಧ್ಯಕ್ಷೆ ರೇಣುಕಾ, ಪ್ರೇಮ್ ಬಲ್ಲಾಳ್ ಬಾಗ್, ದಲಿತ ಸಂಘಟಕ ರಘು ಧರ್ಮ ಸೇನಾ ಉಪಸ್ಥಿತರಿದ್ದರು.

2025-26ನೇ ಸಾಲಿನ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ಪೌರ ಕಾರ್ಮಿಕರ ಮಕ್ಕಳನ್ನು ಸನ್ಮಾನಿಸಲಾಯಿತು. ಶೇಖರ್ ಲಾಯಿಲ ನಿರೂಪಿಸಿದರು. ಶಿವಕುಮಾರ್ ಸ್ವಾಗತಿಸಿದರು.

Related posts

ಲಾಯಿಲ ನಡುಗುಡ್ಡೆ ಪ್ರದೇಶದ ಮರದ ಕಾಲುಸಂಕ ಮತ್ತು ಸವಣಾಲು ಹಿತ್ತಿಲಪೇಲ ನದಿಗೆ ಸೇತುವೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ನ್ಯಾಯಾಲಯಕ್ಕೆ ವಿಸ್ತೃತ ವರದಿ ಸಲ್ಲಿಕೆ

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿರುವ ಫಲಾನುಭವಿಗಳಿಗೆ ಜಾಗತಿಕ ವನ್ಯಜೀವಿ ಸಂರಕ್ಷಣಾ ಸಂಘದಿಂದ ಚಾಲಾನ ಪರವಾನಿಗೆ ಹಾಗೂ ತೋಟಗಾರಿಕಾ ಬೆಳೆಗಳ ಸಸಿ ವಿತರಣೆ

Suddi Udaya

ನಾವೂರು ಗ್ರಾ.ಪಂ ನೂತನ ಕಟ್ಟಡ ಪ್ರಜಾ ಸೌಧ ಹಾಗೂ ವಿವಿಧ ಕಾಮಗಾರಿಗಳ ಶಿಲಾನ್ಯಾಸ -ಉದ್ಘಾಟನೆ

Suddi Udaya

ಮತ ಚಲಾಯಿಸಿದ ಧರ್ಮಸ್ಥಳ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್. ಜನಾರ್ದನ್

Suddi Udaya

ವೇಣೂರು: ಪೆರಿಂಜೆ ನಿವಾಸಿ ಪಿ.ಎ.ಇಬ್ರಾಹಿಂ ನಿಧನ

Suddi Udaya

ಉಜಿರೆ: ನೆನಪಿನ ಅಂಗಳ ಕಾರ್ಯಕ್ರಮದಲ್ಲಿ ಮನೋರಮ ಭಟ್ ರವರಿಗೆ ಸನ್ಮಾನ

Suddi Udaya
error: Content is protected !!