30.8 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇ 9: ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ-ಶಾಸಕ ಹರೀಶ್ ಪೂಂಜರಿಂದ ಅಭಿಮಾನೋತ್ಸವದ ಭಿತ್ತಿ ಚಿತ್ರ ಬಿಡುಗಡೆ

ಬೆಳ್ತಂಗಡಿ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಬೆಳ್ತಂಗಡಿ ತಾಲೂಕಿಗೆ ಭೇಟಿ ನೀಡಿ ಅಭಿವೃದ್ಧಿಗೆ ಶಕ್ತಿ ತುಂಬಿದ್ದಾರೆ. ಸಾವಿರಾರು ಕೋಟಿ ರೂ. ಅನುದಾನ ಒದಗಿಸಿದ ಕಾಮಧೇನು ಮುಖ್ಯಮಂತ್ರಿ ಯುಡಿಯೂರಪ್ಪನವರು.ಅಭಿಮಾನೋತ್ಸವ ಕಾರ್ಯಕ್ರಮಕ್ಕೆ ತಾಲೂಕಿನಿಂದ 2500 ಮಂದಿ ಭಾಗವಹಿಸಲಿದ್ದಾರೆ. ಆಗಮಿಸುವರಿಗೆ ಬಸ್ ವ್ಯವಸ್ಥೆ ಮಾಡಲಾಗುವುದು, ಅಭಿಮಾನೋತ್ಸವದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿ ವಿವಿಧ ಗಣ್ಯರು ಹಾಗೂ ನಾಡಿನ ಸ್ವಾಮೀಜಿಗಳು ಸೇರಿದ್ದಂತೆ ಲಕ್ಷ ಮಂದಿ ಜನರು ಭಾಗವಹಿಸುವರು ಎಂದು ಶಾಸಕ ಹರೀಶ್ ಪೂಂಜ ವಿವರಿಸಿದರು.

ಅವರು ಮೇ 2 ರಂದು ಗುರುವಾಯನಕೆರೆ ನಮ್ಮ ಮನೆ ಹವ್ಯಕ ಸಭಾಭವನದಲ್ಲಿ ಮೇ 9ರಂದು ಚಿತ್ರದುರ್ಗದಲ್ಲಿ ನಡೆಯುವ ಮಾಜಿ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ೫೦ ವರ್ಷಗಳ ರಾಜಕೀಯ ಜೀವನದ ಅಭಿಮಾನೋತ್ಸವದ ಭಿತ್ತಿ ಚಿತ್ರ ಬಿಡುಗಡೆಗೊಳಿಸಿ ಮಾಧ್ಯಮದೊಂದಿಗೆ ಮಾತನಾಡಿದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯತೀಶ್ , ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿಗಳಾದ ಜಯನಂದ ಗೌಡ ಮತ್ತು ಪ್ರಶಾಂತ್ ಪಾರೆಂಕಿ, ಪ್ರಮುಖರಾದ ವಸಂತಿ ಮಚ್ಚಿನ, ಸೀತರಾಮ ಬೆಳಾಲು ಸಹಿತ ಪಕ್ಷದ ಮುಖಂಡರುಗಳು ಉಪಸ್ಥಿತರಿದ್ದರು.

Related posts

ಬಂದಾರು: 9ನೇ ತರಗತಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಮುಂಡಾಜೆ: ಭಾರಿ ಮಳೆಗೆ ಕುಸಿದ ಮೋರಿ: ಗುಂಡ ದೈವಸ್ಥಾನದ ಸಂಪರ್ಕ ಕಡಿತ

Suddi Udaya

ಕಲ್ಮಂಜ: ಅಹಲ್ಯಾ ಯಾನೆ ರಮಾ ಚಿಪ್ಲೂಣ್ಕರ್ ನಿಧನ

Suddi Udaya

ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡಿದ ಚಂದ್ರಹಾಸ್ ಬಳಂಜ

Suddi Udaya

ಕಾವಳಕಟ್ಟೆ ವಲಯ ಬಂಟರ ಸಂಘದಿಂದ ಸಮಾಜಮುಖಿ ಚಿಂತನಾ ಕಾರ್ಯಕ್ರಮ

Suddi Udaya

ಮುಂಡಾಜೆ: ರೋವರ್ಸ್ ಮತ್ತು ರೇಂಜರ್ಸ್ ಘಟಕದ ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಮಾರಂಭ

Suddi Udaya
error: Content is protected !!