23.4 C
ಪುತ್ತೂರು, ಬೆಳ್ತಂಗಡಿ
August 5, 2026
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಬೆಳಾಲು: ಸ್ಕೂಟರ್‌ಗೆ ಕ್ರೇನ್ ಡಿಕ್ಕಿ ಹೊಡೆದು ಅಪಘಾತ-ಬಳಂಜ ಕಾಪಿನಡ್ಕ ನಿವಾಸಿ ಜಯ ಮೇಸ್ತ್ರೀ ಸ್ಥಳದಲ್ಲೇ ಸಾವು

ಬೆಳ್ತಂಗಡಿ : ಕ್ರೇನ್ ವಾಹನ ದ್ವಿಚಕ್ರ ವಾಹನದ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ದುರ್ಮರಣ ಹೊಂದಿದ ಘಟನೆ ಮೇ 5ರಂದು ಬೆಳ್ತಂಗಡಿ ತಾಲೂಕಿನ ಬೆಳಾಲು ಪೇಟೆಯಲ್ಲಿ ಸಂಭವಿಸಿದೆ.

ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾಮದ ಬಳಂಜ ನಿವಾಸಿ ಜಯನ್ ಮೇಸ್ತ್ರೀ (57ವ) ಈ ದುರ್ಘಟನೆಯಲ್ಲಿ ಸ್ಥಳದಲ್ಲೇ ಮೃತಪಟ್ಟರಾಗಿದ್ದಾರೆ.

ಇವರು ಬೆಳಾಲು ಗ್ರಾಮದ ಬಳಿ ಬಾಡಿಗೆ ಮನೆಯಲ್ಲಿ ವಾಸವಾಗಿ ರಬ್ಬರ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದರು. ಬೆಳಾಲು ಪೇಟೆಗೆ ಬಂದು ತಮ್ಮ ಸ್ಕೂಟರ್‌ನಲ್ಲಿ ಹೋಗುತ್ತಿದ್ದ ವೇಳೆ ಹಿಂಭಾಗಕ್ಕೆ ಕ್ರೇನ್ ವಾಹನ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ.

ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಕಿಶೋರ್ ಕುಮಾರ್ ಪಿ ತಂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಮೃತದೇಹವನ್ನು ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಅಪಘಾತ ಪ್ರಕರಣ ದಾಖಲಾಗಿದೆ.

Related posts

ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ” ವಿದ್ಯಾರ್ಥಿ ಸಂಘದ ಚುನಾವಣೆ “

Suddi Udaya

ಕನ್ಯಾಡಿ ಯಕ್ಷಭಾರತಿಯಿಂದ ಮೋಹನ ಬೈಪಾಡಿತ್ತಾಯ ಉಜಿರೆ ಅವರಿಗೆ ಗುರುವಂದನೆ

Suddi Udaya

ಕೊಯ್ಯುರು : ಅಯೋಧ್ಯೆ ಶ್ರೀ ಬಾಲರಾಮ ಪ್ರತಿಷ್ಠಾಪನೆ ಪ್ರಯುಕ್ತ ಸ್ವಚ್ಚತಾ ಕಾರ್ಯಕ್ರಮ

Suddi Udaya

ಮಲೆಂಗಲ್ಲು ಬ್ರಹ್ಮಕಲಶೋತ್ಸವ-ಧಾರ್ಮಿಕ ಸಭಾ ಕಾರ್ಯಕ್ರಮ: ಶ್ರದ್ಧಾ ಭಕ್ತಿಯಿಂದ ಭಗವಂತನನ್ನು ಆರಾಧಿಸಿ – ಶ್ರೀ ಡಾ.ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರು

Suddi Udaya

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಜನಾ ಪುಸ್ತಕ ಬಿಡುಗಡೆ

Suddi Udaya

ಉಜಿರೆ ಭಾರತ್ ಕೋ ಆಪರೇಟಿವ್ ಬ್ಯಾಂಕ್ ಶಾಖೆಯ ಹತ್ತನೇ ವರ್ಷದ ಆಚರಣೆ

Suddi Udaya
error: Content is protected !!