25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಸೂಪರ್ 30 – ಪ್ರವೇಶ ಪರೀಕ್ಷೆ

ಬೆಳ್ತಂಗಡಿ:ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ವಿದ್ಯಾ ಸಾಗರ ಕ್ಯಾಂಪಸ್ ನಲ್ಲಿ ಸೂಪರ್ 30 ಪರೀಕ್ಷೆಯು ಮೇ 6ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.

5 ನೇ ತರಗತಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ 6 ನೇ ತರಗತಿಯ ಪ್ರವೇಶಕ್ಕೆ ,6 ನೇ ತರಗತಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ 7 ನೆಯ ತರಗತಿಗೆ, ಹಾಗೂ 7 ನೆಯ ತರಗತಿ ಉತ್ತೀರ್ಣರಾದವರಿಗೆ 8 ನೆಯ ತರಗತಿಗೆ ಉಚಿತ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಸೂಪರ್ 30 ಪರೀಕ್ಷೆ ನಡೆಸಲಾಗುತ್ತಿದೆ.

ಇಂಗ್ಲಿಷ್, ಮ್ಯಾಥ್ಸ್, ಹಾಗೂ ಸೈನ್ಸ್ ವಿಷಯಗಳಲ್ಲಿ ಮಲ್ಟಿಪಲ್ ಚಾಯಿಸ್ ಇರುವ ಈ ಪರೀಕ್ಷೆಯಲ್ಲಿ ಗ್ರಾಮೀಣ ವಲಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೆರವಾಗುವ ಯೋಚನೆಯಿದೆ. ಯಾವುದೇ ಶಾಲೆಯಲ್ಲಿ ಓದಿರುವ ವಿದ್ಯಾರ್ಥಿಯಾಗಿರಲಿ ಸೂಪರ್ 30 ಪರೀಕ್ಷೆ ಬರೆದು ಉತ್ತಮ ಸಾಧನೆ ತೋರಿದಲ್ಲಿ ಅವರಿಗೆ ಮುಂದೆ ಗುರುವಾಯನಕೆರೆಯ ಎಕ್ಸೆಲ್ ಟೆಕ್ನೋ ಸ್ಕೂಲ್ ನ ಸಿಬಿಎಸ್ ಇ ಪಠ್ಯ ಕ್ರಮದಡಿಯಲ್ಲಿ ಉಚಿತ ಶಿಕ್ಷಣ ನೀಡಲಾಗುತ್ತದೆ. ಹಾಗೂ ಉಚಿತ ನೀಟ್ ಮತ್ತು ಜೆ ಇ ಇ ಕೋಚಿಂಗ್ ನೀಡಲಾಗುತ್ತದೆ.

ಎಕ್ಸೆಲ್ ಬೆಳಕು ಫೌಂಡೇಶನ್ ನ ಉಚಿತ ಶಿಕ್ಷಣ ಯೋಜನೆಯಡಿಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಟೀಚಿಂಗ್ ಹಾಗೂ ಕೋಚಿಂಗ್ ನೀಡುತ್ತಾ ಬರಲಾಗಿದೆ. ಅದರ ಮುಂದುವರೆದ ಭಾಗವಾಗಿ ಸೂಪರ್ 30 ಪರೀಕ್ಷೆ ನಡೆಸಲಾಗುತ್ತಿದೆ. ಆಸಕ್ತ ವಿದ್ಯಾರ್ಥಿಗಳು ಕ್ಲಪ್ತ ಸಮಯಕ್ಕೆ ಹಾಜರಾಗಿ, ಯೋಜನೆಯ ಸದುಪಯೋಗ ಪಡೆದು ಕೊಳ್ಳಲು ವಿನಂತಿಸಲಾಗಿದೆ. ಹೆಚ್ಚಿನ ವಿವರಗಳಿಗೆ 8867242769/ 9880899769 ಸಂಪರ್ಕಿಸಲು ವಿನಂತಿಸಲಾಗಿದೆ.

Related posts

ಬೆಳ್ತಂಗಡಿ: ಪರಿಶಿಷ್ಟ ಜಾತಿ/ ಪಂಗಡಗಳ ಕುಂದುಕೊರತೆಗಳ ಸಭೆ

Suddi Udaya

ನ.13: ಬೆಳ್ತಂಗಡಿಯಲ್ಲಿ ಬಿಜೆಪಿ ಯುವ ಮೋರ್ಚಾದಿಂದ ದೀಪಾವಳಿ ದೋಸೆ ಹಬ್ಬ ಕಾರ್ಯಕ್ರಮ

Suddi Udaya

ಉಜಿರೆಯಲ್ಲಿ ಕಮ್ಯೂನಿಟಿ ಸೆಂಟರ್ ಉದ್ಘಾಟನೆ

Suddi Udaya

ಕಾಶಿಪಟ್ಣ ಕೇಳ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸ್ವಾಗತ ಗೋಪುರ ಲೋಕಾರ್ಪಣೆ ರೂ. 25ಲಕ್ಷ ಅನುದಾನ ನೀಡಿ ಸಹಕರಿಸಿದ ಶಾಸಕ ಹರೀಶ್ ಪೂಂಜರವರಿಗೆ ಸನ್ಮಾನ

Suddi Udaya

ತಾಲೂಕು ಮಟ್ಟದ ಚದುರಂಗ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮತ್ತು ಸುಳ್ಳು ವದಂತಿ ಖಂಡಿಸಿ “ನಮ್ಮ ನಡೆ ಧರ್ಮಸ್ಥಳದ ಕಡೆ” : ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ನೇತೃತ್ವದಲ್ಲಿ “ಧರ್ಮಸ್ಥಳ ಚಲೊ ಅಭಿಯಾನ”ಧಮ೯ಸ್ಥಳಕ್ಕೆ 400 ಕಾರುಗಳಲ್ಲಿ ಬಂದ ಎರಡು ಸಾವಿರ ಭಕ್ತರು

Suddi Udaya
error: Content is protected !!