26.5 C
ಪುತ್ತೂರು, ಬೆಳ್ತಂಗಡಿ
September 20, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಐಸ್ ಹಾಕಿ ಸ್ಪರ್ಧೆ: ಕುತ್ಲೂರಿನ ಉದಯೋನ್ಮುಖ ಸ್ಕೇಟರ್ ನಿಷ್ಕ್ ಹರೀಶ್ ಸಾಲಿಯನ್ ರಾಷ್ಟ್ರಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಕುತ್ಲೂರು ಗ್ರಾಮದ ಸಮೃದ್ಧಿ ಮನೆಯ ಉದಯೋನ್ಮುಖ ಸ್ಕೇಟರ್ ನಿಷ್ಕ್ ಹರೀಶ್ ಸಾಲಿಯನ್ ಅವರು ಐಸ್ ಹಾಕಿ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಸ್ಟಾಫ್ಟ್‌ವೇರ್‌ ಎಂಜಿನಿಯರ್‌ ಹರೀಶ್ ಡಾಕಯ್ಯ ಮತ್ತು ಬಿನಾಕಾ ಹರೀಶ್ ದಂಪತಿಯ ಪುತ್ರ.

11 ವರ್ಷದ ನಿಷ್ಕ್ ಅವರು ಏಪ್ರಿಲ್ 20ರಿಂದ 29ರವರೆಗೆ ಡೆಹ್ರಾಡೂನ್‌ನಲ್ಲಿ ನಡೆದ 10 ದಿನಗಳ ಐಸ್ ಹಾಕಿ ರಾಜ್ಯ ಶಿಬಿರದಲ್ಲಿ ಭಾಗವಹಿಸಿ, ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ತಂಡ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಈ ಸಾಧನೆಯ ಹಿನ್ನೆಲೆಯಲ್ಲಿ ಅವರು ರಾಷ್ಟ್ರಮಟ್ಟದ ಟೂರ್ನಿಗೆ ಆಯ್ಕೆಯಾಗಿದ್ದಾರೆ.

ಜೂನ್ ತಿಂಗಳ ಕೊನೆಯ ವಾರದಲ್ಲಿ ಡೆಹ್ರಾಡೂನ್‌ನಲ್ಲೇ ನಡೆಯಲಿರುವ ರಾಷ್ಟ್ರೀಯ ಐಸ್ ಹಾಕಿ ಟೂರ್ನಿಯಲ್ಲಿ 14 ವರ್ಷದೊಳಗಿನವರ ಕರ್ನಾಟಕ ತಂಡವನ್ನು ಅವರು ಪ್ರತಿನಿಧಿಸಲಿದ್ದಾರೆ.

ಪ್ರಸ್ತುತ ಬೆಂಗಳೂರಿನ ಅಕ್ಷಯನಗರದಲ್ಲಿ ವಾಸವಾಗಿರುವ ನಿಷ್ಕ್ ಅವರು ಎಲೆಕ್ಟ್ರಾನಿಕ್ ಸಿಟಿಯ ಡೆಲ್ಲಿ ಪಬ್ಲಿಕ್ ಸ್ಕೂಲ್‌ನಲ್ಲಿ 6ನೇ ತರಗತಿ ವ್ಯಾಸಂಗ ಮಾಡುತ್ತಿದ್ದಾರೆ. ಸ್ಕೇಟಿಂಗ್ ಕೋಚ್ ಶೈಖ್ ಅಬ್ದುಲ್ ಮತ್ತು ಇನ್‌ಲೈನ್ ಹಾಕಿ ಕೋಚ್ ಅಶ್ವಿನ್ ಅವರ ಮಾರ್ಗದರ್ಶನದಲ್ಲಿ ಅವರು ತರಬೇತಿ ಪಡೆದಿದ್ದಾರೆ.

ನಿಷ್ಕ್ ಅವರ ಈ ಸಾಧನೆ ಕುತ್ಲೂರು ಗ್ರಾಮಕ್ಕೆ ಹೆಮ್ಮೆ ತಂದುಕೊಟ್ಟಿದೆ. ಅವರು ಪ್ರಗತಿಪರ ಕೃಷಿಕ ಸಮೃದ್ಧಿ ಡಾಕಯ್ಯ ಪೂಜಾರಿ ಅವರ ಮೊಮ್ಮಗನಾಗಿದ್ದಾರೆ.

Related posts

ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ಸುಜನ್ ಸಿ. ಭಂಡಾರಿ ರವರಿಗೆ ಅಳದಂಗಡಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ವತಿಯಿಂದ ಸನ್ಮಾನ

Suddi Udaya

ಕಳೆಂಜ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಠಬಂದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಭಜನಾ ಮಂಗಲೋತ್ಸವ ಹಾಗೂ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಕೇಳ್ತಾಜೆ ಉಮರುಲ್ ಫಾರೂಕ್ ಜುಮಾ ಮಸ್ಜಿದ್ ಮತ್ತು ಸಿರಾಜುಲ್ ಹುದಾ ಮದರಸದಲ್ಲಿ ಬಕ್ರೀದ್ ಆಚರಣೆ

Suddi Udaya

ಅಶ್ರಫ್ ಆಲಿಕುಂಞಿ (ಅಚ್ಚು) ಮುಂಡಾಜೆ ಅವರಿಗೆ ಲಯನ್ಸ್ ಜಿಲ್ಲಾ “ಗೋಲ್ಡನ್ ಅಸಿಸ್ಟೆಂಟ್ ಡಿಸ್ಟ್ರಿಕ್ಟ್ ಕಾರ್ಡಿನೇಟರ್” ಪುರಸ್ಕಾರ

Suddi Udaya

ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ “ಪೆರ್ಲ ಬೈಪಾಡಿ ಊರುದ ಭಕ್ತಿದ ಎಸಲ್” ತುಳು ಆಡಿಯೋ & ವಿಡಿಯೋ ಆಲ್ಬಮ್ ಬಿಡುಗಡೆ

Suddi Udaya
error: Content is protected !!