24.6 C
ಪುತ್ತೂರು, ಬೆಳ್ತಂಗಡಿ
June 21, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆ

ಬೆಳ್ತಂಗಡಿ: ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆಯು ಸಮಿತಿಯ ಅಧ್ಯಕ್ಷ ಪದ್ಮನಾಭ ಸಾಲ್ಯಾನ್ ರವರ ಅಧ್ಯಕ್ಷತೆಯಲ್ಲಿ ಪಂಚ ಗ್ಯಾರಂಟಿ ಯೋಜನೆ ಸದಸ್ಯ ಕಾರ್ಯದರ್ಶಿ ಹಾಗೂ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್ ಎನ್. ಇವರ ಉಪಸ್ಥಿತಿಯಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತಿಯ ಗ್ಯಾರಂಟಿ ಅನುಷ್ಟಾನ ಸಮಿತಿ ಕಛೇರಿಯಲ್ಲಿ ನಡೆಯಿತು.


ಗೃಹಜ್ಯೋತಿ ಯೋಜನೆಯಡಿ ಉಜಿರೆ ಉಪವಿಭಾಗದಲ್ಲಿ 2026ರ ಮಾರ್ಚ್-2026 ತಿಂಗಳಲ್ಲಿ 27170 ಕುಟುಂಬಗಳಿಗೆ 1,37,00,245/- ರೂ, ಬೆಳ್ತಂಗಡಿ ಉಪವಿಭಾಗದಲ್ಲಿ 2026ರ ಮಾರ್ಚ್ ತಿಂಗಳಲ್ಲಿ 44958 ಕುಟುಂಬಗಳಿಗೆ 2‌,67,58,297/-ರೂ ಸಹಾಯಧನ ದೊರತಿದ್ದು ತಾಲೂಕಿಗೆ ಈವರೆಗೆ 1,20,86,50,956/- ರೂ ಸಹಾಯಧನ ದೊರೆತಿರುವುದಾಗಿ ಮೆಸ್ಕಾಂ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರು ತಿಳಿಸಿದರು.


ಗೃಹಲಕ್ಷ್ಮೀ ಯೋಜನೆಯಡಿ ಪ್ರಕೃತ 59120 ಫಲಾನುಭವಿಗಳಿದ್ದು ಆಗಸ್ಟ್-2023‌ ರಿಂದ ಫೆಬ್ರವರಿ-2026 ರವರೆಗೆ 315,94,82,000/-ರೂ ಸಹಾಯಧನ ದೊರೆತಿರುವುದಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಇವರು ಸಭೆಗೆ ಮಾಹಿತಿ ನೀಡಿದರು.


ಅನ್ನಭಾಗ್ಯ ಯೋಜನೆಯಡಿ ೮೨೭ ಪಡಿತರ ಚೀಟಿಗಳನ್ನು ಎ.ಪಿ.ಎಲ್ ಆಗಿ ಪರಿವರ್ತಿಸಲಾಗಿರುತ್ತದೆ. ೧೫೫೭ ಪಡಿತರ ಚೀಟಿಗಳನ್ನು ಬಿ.ಪಿ.ಎಲ್ ಆಗಿ ಮುಂದುವರಿಸಲಾಗಿದೆ ಎಂದು ಆಹಾರ ನಿರೀಕ್ಷಕರು ಸಭೆಗೆ ವಿವರ ನೀಡಿದರು.
ಯುವನಿಧಿ ಯೋಜನೆಯಡಿ ಬೆಳ್ತಂಗಡಿ ತಾಲೂಕಿನ ೯೪೧ ಅಭ್ಯರ್ಥಿಗಳಿಗೆ ೨೦೨೫ರ ನವೆಂಬರ್ ತಿಂಗಳಲ್ಲಿ ೧೩,೮೯,೦೦೦ರೂ.ಗಳನ್ನು ಡಿ.ಬಿ.ಟಿ ಮೂಲಕ ಸಹಾಯಧನವನ್ನು ವಿತರಿಸಲಾಗಿದ್ದು ಎಂದು ಶ್ರೀಮತಿ ಮಂಜೂಷರವರು ತಿಳಿಸಿದರು.


ಶಕ್ತಿ ಯೋಜನೆಯಡಿ ಧರ್ಮಸ್ಥಳ ಘಟಕದ ಬಸ್ಸುಗಳ ಮೂಲಕ ೨೦೨೬ರ ಏಪ್ರಿಲ್ ತಿಂಗಳಲ್ಲಿ ೭೩೨೯೦೨ ಮಹಿಳಾ ಪ್ರಯಾಣಿಕರು ಯೋಜನೆಯ ಸವಲತ್ತನ್ನು ಪಡೆದಿದ್ದಾರೆ ಎಂದು ಧರ್ಮಸ್ಥಳ ಘಟಕದ ಮೇಲ್ವಿಚಾಲಕರು ಸಭೆಗೆ ಮಾಹಿತಿ ನೀಡಿದರು. ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಜಿಲ್ಲಾ ಸಮಿತಿಯ ಉಪಾಧ್ಯಕ್ಷ ಶೇಖರ್ ಕುಕ್ಕೇಡಿ, ತಾಲೂಕು ಅನುಷ್ಟಾನ ಸಮಿತಿಯ ಸದಸ್ಯರಾದ ಶ್ರೀಮತಿ ಮೆರಿಟಾ ಪಿಂಟೋ, ವೀರಪ್ಪ ಮೊಯ್ಲಿ, ವಾಸುದೇವ ರಾವ್, ವಿಜಯಗೌಡ ಬೆಳಾಲು, ಶರೀಫ್ ಸಬರಬೈಲ್, ಕೆ.ನೇಮಿರಾಜ್ ಕಿಲ್ಲೂರು, ಶ್ರೀಮತಿ ವಂದನಾ, ಶ್ರೀಪತಿ ಉಪಾಧ್ಯಾಯ, ಅಬ್ದುಲ್ ಸಲಾಂ ಹಾಗೂ ನೋಡೆಲ್ ಅಧಿಕಾರಿಯಾದ ಹೆರಾಲ್ಡ್ ಸ್ವಿಕ್ವೇರಾ ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಧ.ಮಂ. ಸ್ವಾಯತ್ತ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥ ಹಾಗೂ ಕಲಾನಿಕಾಯದ ಡೀನ್ ಡಾ. ಶ್ರೀಧರ ಭಟ್ಟ ರವರಿಗೆ ಪ್ರಾಧ್ಯಾಪಕರಾಗಿ ವೃತ್ತಿ ಪದೋನ್ನತಿ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಹಾಗೂ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ತೆಕ್ಕಾರು ಪ್ರಾ.ಕೃ.ಪ. ಸ. ಸಂಘದ ಉಪಾಧ್ಯಕ್ಷ ನಾಭಿರಾಜ್ ಹೆಗ್ಡೆ ನಿಧನ

Suddi Udaya

ಬೈಕ್ ಅಪಘಾತದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್

Suddi Udaya

ಚಾರ್ಮಾಡಿ : ನಾಗಬ್ರಹ್ಮ, ನಾಗಯಕ್ಷಿಣಿ ಹಾಗೂ ಶಿರಾಡಿ ದೈವ, ರುದ್ರಾಂಡಿ ದೈವ ಹಾಗೂ ಪರಿವಾರ ದೈವಗಳ ನೇಮೋತ್ಸವ: ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ಧರ್ಮಸ್ಥಳ ಡಿ ಹರ್ಷೇಂದ್ರ ಕುಮಾರ್ ರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದ ಕನ್ಯಾಡಿ ಗಣೇಶೋತ್ಸವ ಸಮಿತಿ

Suddi Udaya
error: Content is protected !!