26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಇಂದಬೆಟ್ಟು: ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ ಮತ್ತು ಪ್ರತಿಷ್ಠಾ ಮಹೋತ್ಸವ: ಹೊರೆಕಾಣಿಕೆ ಸಮರ್ಪಣೆ, ಧ್ವಜಾರೋಹಣ

ಇಂದಬೆಟ್ಟು: ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ ಮತ್ತು ಪ್ರತಿಷ್ಠಾ ಮಹೋತ್ಸವ ಮೇ 5ರಂದು ಪ್ರಾರಂಭಗೊಂಡು ಮೇ 9ರ ವರೆಗೆ ನೀಲೇಶ್ವರ ಬ್ರಹ್ಮಶ್ರೀ ವೇ. ಮೂ. ಆಲಂಬಾಡಿ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಹಾಗೂ ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್‌ಕೃಷ್ಣ ಪಡ್ವೆಟ್ನಾಯ ರವರ ಮಾರ್ಗದರ್ಶನದಲ್ಲಿ ನಡೆಯಲಿದೆ.

ಮೇ 5 ರಂದು ಸಂಜೆ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ತಂತ್ರಿಗಳ ಆಗಮನ, ಪ್ರಾರ್ಥನೆ ತೋರಣ ಮುಹೂರ್ತ, ಧ್ವಜಾರೋಹಣ ನಡೆಯಿತು.

ರಾತ್ರಿ ಇಂದಬೆಟ್ಟು ಶ್ರೀ ಅರ್ಧನಾರೀಶ್ವರ ಭಜನಾ ತಂಡದಿಂದ ಭಜನೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ನಂತರ ದೇವನಾರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ವೈಭವ ವಿಜೃಂಭನೆಯಿಂದ ನಡೆಯಿತು.

ಈ ಸಂದರ್ಭದಲ್ಲಿ ನಾವೂರು ಆರೋಗ್ಯ ಕ್ಲಿನಿಕ್‌ನ ಡಾ| ಪ್ರದೀಪ್ ಎ, ಪ್ರಧಾನ ಅರ್ಚಕ ವೇ. ಮೂ. ಆನಂದ ಭಟ್, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎನ್. ಲಕ್ಷ್ಮಣ ಗೌಡ, ಸಮಿತಿ ಸದಸ್ಯರಾದ ನಾರಾಯಣ ಟಿ. ನೇತ್ರಾವತಿ ನಗರ, ಶ್ರೀಮತಿ ತನುಜಾ ಶೇಖರ್ ನಾವೂರು, ಸರೋಜ ಆನಂದ ಗೌಡ, ಬೆದ್ರಬೆಟ್ಟು, ವಿಠಲ ಶೆಟ್ಟಿ ಕನ್ಯಾಡಿ 1, ಜಯರಾಮ ಕೆ. ಬಂಗಾಡಿ. ಅಶ್ವತ್ ರಾಜ್ ಕಲ್ಲಾಜೆ, ದಿನೇಶ್ ಪ್ರಭು ಹಡೀಲು ನಾವೂರು ಹಾಗೂ ಊರ ಪರವೂರ ಭಕ್ತರು ಉಪಸ್ಥಿತರಿದ್ದರು.

Related posts

ಕೊಯ್ಯೂರು ಪ್ರೌಢಶಾಲಾ ರಜತ ಮಹೋತ್ಸವ: ಗುರುವಂದನಾ ಹಾಗೂ ಪ್ರತಿಭಾ ಪುರಸ್ಕಾರ

Suddi Udaya

ಕುತ್ಲೂರು ಗುರುನಾರಾಯಣ ಸೇವಾ ಸಂಘ ದ ಅಧ್ಯಕ್ಷರಾಗಿ ಕೇಶವ ಪೂಜಾರಿ ಆಯ್ಕೆ

Suddi Udaya

ಕೊರಿಂಜ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ಅರ್ಧಏಕಾಹ ಭಜನಾ ಕಾರ್ಯಕ್ರಮ

Suddi Udaya

ಮಡಂತ್ಯಾರು: ಹೊಂಡಗಳಿಂದ ಹದಗೆಟ್ಟ ರಸ್ತೆ: ಬಿಎಂಎಸ್ ರಿಕ್ಷಾ ಚಾಲಕರಿಂದ ಹೊಂಡ ಮುಚ್ಚುವ ಕಾರ್ಯ

Suddi Udaya

ಬಳಂಜ:ಕಾರಣಿಕದ ಬೊಳ್ಳಜ್ಜ ಧ್ವನಿ ಸುರುಳಿ ಬಿಡುಗಡೆ

Suddi Udaya

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ದನ್ ರವರಿಗೆ ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

Suddi Udaya
error: Content is protected !!