September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಎಂ. ಐಟಿಐ ವೇಣೂರಿನಲ್ಲಿ ಬೃಹತ್ ಕ್ಯಾಂಪಸ್ ಸಂದರ್ಶನ

ವೇಣೂರು: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿಐಯಲ್ಲಿ 2026ನೇ ಸಾಲಿನ ವಿದ್ಯಾರ್ಥಿಗಳಿಗಾಗಿ ಪ್ರಖ್ಯಾತ ಟೊಯೋಟಾ ಕಿರ್ಲೋಸ್ಕರ್ ಆಟೋ ಪಾರ್ಟ್ಸ್, ಬೆಂಗಳೂರು ಸಂಸ್ಥೆಯಿಂದ ಕ್ಯಾಂಪಸ್ ಸಂದರ್ಶನವನ್ನು ಆಯೋಜಿಸಲಾಯಿತು.


ಕಂಪೆನಿಯ ಮಾನವ ಸಂಪನ್ಮೂಲ ವ್ಯವಸ್ಥಾಪಕ ಹರಿಪ್ರಸಾದ್ ರೈ ಕೆ. ಅವರ ನೇತೃತ್ವದಲ್ಲಿ ಸಂದರ್ಶನ ಪ್ರಕ್ರಿಯೆ ನಡೆಯಿತು. ದಕ್ಷಿಣ ಕನ್ನಡ ಜಿಲ್ಲೆಯ ಐಟಿಐಗಳಿಂದ ವಿವಿಧ ವೃತ್ತಿಗಳಲ್ಲಿ ತರಬೇತಿ ಪಡೆಯುತ್ತಿರುವ ಒಟ್ಟು 248 ವಿದ್ಯಾರ್ಥಿಗಳು ಕ್ಯಾಂಪಸ್ ಸಂದರ್ಶನದಲ್ಲಿ ಭಾಗವಹಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಹರಿಪ್ರಸಾದ್ ರೈ ಕೆ. ಅವರು, ಕೈಗಾರಿಕಾ ಕ್ಷೇತ್ರದಲ್ಲಿ ತಾಂತ್ರಿಕ ಕೌಶಲ್ಯ ಹೊಂದಿರುವ ಐಟಿಐ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶಗಳಿದ್ದು, ಶಿಸ್ತು, ಸಮಯಪಾಲನೆ ಮತ್ತು ಪ್ರಾಯೋಗಿಕ ಜ್ಞಾನವು ಉದ್ಯೋಗ ಕ್ಷೇತ್ರದಲ್ಲಿ ಯಶಸ್ಸು ತರುವ ಪ್ರಮುಖ ಅಂಶಗಳಾಗಿವೆ ಎಂದು ತಿಳಿಸಿದರು.ವೇಣೂರಿನ ಎಸ್.ಡಿ.ಎಂ. ಐಟಿಐಯಲ್ಲಿ ನೀಡಲಾಗುತ್ತಿರುವ ಗುಣಮಟ್ಟದ ತರಬೇತಿ ಹಾಗೂ ಆಧುನಿಕ ಸೌಲಭ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡುತ್ತಿರುವುದು ಸಂತಸದ ವಿಷಯವಾಗಿದೆ ಎಂದರು.


ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಚಾರ್ಯರಾದ ವಿಶ್ವೇಶ್ವರ ಪ್ರಸಾದ್ ಕೆ. ಆರ್. ಉಪಸ್ಥಿತರಿದ್ದರು. ನೇಮಕಾತಿ ಅಧಿಕಾರಿ ಶ್ರೇಯಸ್ ಜೈನ್ ಸಂಘಟಿಸಿ, ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿಗಳು ಸಂದರ್ಶನ ಪ್ರಕ್ರಿಯೆಗೆ ಸಹಕರಿಸಿದರು.

Related posts

ಗುರುವಾಯನಕೆರೆ : ಪಿಎಂ ಕುಸುಮ್ -ಸಿ ಯೋಜನೆಯಡಿ ಸೋಲಾರ್ ಪಾರ್ಕ್ ನಿರ್ಮಾಣಕ್ಕೆ ಯೋಜನೆ

Suddi Udaya

ನಿವೃತ್ತ ಬ್ಯಾಂಕ್ ಉದ್ಯೋಗಿ‌ ಅಮ್ಮು ಕುಮಾರ್ ಹೃದಯಾಘಾತದಿಂದ ನಿಧನ

Suddi Udaya

ಬಳಂಜ ಬದಿನಡೆ ಕ್ಷೇತ್ರದಲ್ಲಿ ಬ್ರಹ್ಮಕಲಶ ಪೂರ್ವಭಾವಿಯಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮ: ಶಾಸಕ ಹರೀಶ್ ಪೂಂಜಾ ಭೇಟಿ

Suddi Udaya

ಮಚ್ಚಿನ: ವೀರಮ್ಮ ನಿಧನ

Suddi Udaya

ಉಜಿರೆ : ಎಸ್.ಡಿ.ಎಂ. ಬಿ. ವೋಕ್ ವಿಭಾಗದ ವತಿಯಿಂದ ರಾಜ್ಯ ಮಟ್ಟದ ಅಂತರ್ ಕಾಲೇಜು ಫೆಸ್ಟ್ ‘ಬಿ. ವೋಕ್ ಉತ್ಸವ

Suddi Udaya

ಕಾರಿಂಜ ಶ್ರೀ ವನ ಶಾಸ್ತಾರ , ಶ್ರೀ ವೀರಭದ್ರ ದೇವಸ್ಥಾನದ ಜೀರ್ಣೊದ್ದಾರ ಸಮಿತಿ ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ವತಿಯಿಂದ ಶಾಸಕ ಹರೀಶ್ ಪೂಂಜರ ಭೇಟಿ

Suddi Udaya
error: Content is protected !!