September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಾರತೀಯ ರೆಡ್ ಕ್ರಾಸ್ ಸೊಸೈಟಿಯಿಂದ ರಾಮಣ್ಣ ಗೌಡ ರವರಿಗೆ ವಾಟರ್ ಬೆಡ್ ಹಸ್ತಾಂತರ

ಬೆಳ್ತಂಗಡಿ: ಕಳೆದ 20 ವರ್ಷಗಳಿಂದ ಹಾಸಿಗೆ ಹಿಡಿದಿರುವ ರಾಮಣ್ಣ ಗೌಡ ರವರಿಗೆ ಭಾರತೀಯ ರೆಡ್ ಕ್ರಾಸ್ ಸೊಸೈಟಿ ವತಿಯಿಂದ ವಾಟರ್ ಬೆಡ್ ಹಸ್ತಾಂತರಿಸಲಾಯಿತು.

ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ಪೋಷಕರಾದ ಎನ್.ಜಿ ಮೋಹನ್ , ರವೀಂದ್ರನಾಥ್ ಉಚ್ಚಿಲ್ ರವರ ಪ್ರಾಯೋಜಕತ್ವದಲ್ಲಿ ಬೆಳ್ತಂಗಡಿ ರೆಡ್ ಕ್ರಾಸ್ ಸೊಸೈಟಿಯ ಅಧ್ಯಕ್ಷ ಹರಿದಾಸ್ ಎಸ್.ಎಂ , ಪದಾಧಿಕಾರಿಗಳಾದ ನ್ಯಾಯವಾದಿ ಸುಕನ್ಯಾ ಹರಿದಾಸ್ , ಶಿಕ್ಷಕಿ ಪರಿಮಳ , ನ್ಯಾಯವಾದಿ ಮನೋಹರ್ ರಾವ್ ನಿಡ್ಲೆ , ಉಪನ್ಯಾಸಕ ಸುಜೀತ್ ರಾವ್ ಉಜಿರೆ ರವರು ರಾಮಣ್ಣ ಗೌಡರವರಿಗೆ ವಾಟರ್ ಬೆಡ್ ಹಸ್ತಾಂತರಿಸಿದರು.

ಬೆಳ್ತಂಗಡಿ ರೆಡ್ ಕ್ರಾಸ್ ಸೊಸೈಟಿಯು ಕಳೆದ ಹಲವಾರು ವರ್ಷಗಳಿಂದ ವಿವಿಧ ವೈದ್ಯಕೀಯ ಶಿಬಿರಗಳನ್ನು , ತರಬೇತಿಗಳನ್ನು , ಕಾರ್ಯಕ್ರಮಗಳನ್ನು , ರಕ್ತದಾನ ಶಿಬಿರಗಳನ್ನು ನಿರಂತರವಾಗಿ ಹಮ್ಮಿಕೊಂಡಿರುವುದಲ್ಲದೆ , ವೈದ್ಯಕೀಯ ಪರಿಕರಗಳು , ಉಪಕರಣಗಳನ್ನು ಅರ್ಹರಿಗೆ ವಿತರಣೆ ಮಾಡುವ ಮೂಲಕ ಇಡೀ ಜಿಲ್ಲೆಯಲ್ಲೇ ಅತ್ಯುತ್ತಮ ಕಾರ್ಯಕ್ರಮ ಸಂಘಟಿಸುತ್ತಿದೆ.

Related posts

ಭಾರೀ ಗಾಳಿ ಮಳೆ: ಪಡಂಗಡಿ ವ್ಯಾಪ್ತಿಯಲ್ಲಿ ಮನೆ ಮೇಲೆ ಹಾಗೂ ರಸ್ತೆಗೆ ಬಿದ್ದ ಮರ : ಅಪಾರ ಹಾನಿ

Suddi Udaya

ಶಿಕ್ಷಕಿ ಮಾಲತಿ ಶಿಶಿಲ ರವರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆ

Suddi Udaya

ತಣ್ಣೀರುಪಂತ: 7ನೇ ತರಗತಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಪಡಂಗಡಿ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಇಂದಬೆಟ್ಟು: ಕಜೆ ಶಾಂತಿನಗರ ಹಾಲು ಉತ್ಪಾದಕರ ಸಹಕಾರ ಸಂಘ-ಅಧ್ಯಕ್ಷರಾಗಿ ಉಮೇಶ್ ಗೌಡ, ಉಪಾಧ್ಯಕ್ಷರಾಗಿ ಪ್ರೇಮಲತಾ

Suddi Udaya

ಅಂಡಿಂಜೆ: ಗಾಂದೋಟ್ಯ ನಿವಾಸಿ ಲಲಿತ ನಿಧನ

Suddi Udaya
error: Content is protected !!