September 24, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿನಿಧನಬೆಳ್ತಂಗಡಿವರದಿ

ಧರ್ಮಸ್ಥಳದಲ್ಲಿ ಅಸ್ವಸ್ಥಗೊಂಡಿದ್ದ ಅಪರಿಚಿತ ವ್ಯಕ್ತಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವು

ಧರ್ಮಸ್ಥಳ: ಧರ್ಮಸ್ಥಳ ಗ್ರಾಮದ ಧರ್ಮಸ್ಥಳ-ಪಟ್ರಮೆ ರಸ್ತೆಯ ಬದಿಯಲ್ಲಿ ನೇತ್ರಾವತಿ ವಸತಿಗೃಹದ ಸಮೀಪ ಸುಮಾರು 60-65 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿ ಮೇ.6 ರಂದು ಬೆಳಿಗ್ಗೆ 7:50 ಗಂಟೆ ಸುಮಾರಿಗೆ ಯಾವುದೋ ಕಾಯಿಲೆಯಿಂದ ಅಸ್ವಸ್ಥಗೊಂಡವರನ್ನು 108 ಅಂಬ್ಯುಲೆನ್ಸ್ ಮೂಲಕ ಚಿಕಿತ್ಸೆಯ ಬಗ್ಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕಳುಹಿಸಿ ನಂತರ ಹೆಚ್ಚಿನ ಚಿಕಿತ್ಸೆ ಬಗ್ಗೆ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿರುವ ಅಪರಿಚಿತ ಗಂಡಸು ಮೇ.8 ರಂದು ಬೆಳಿಗ್ಗೆ 07:56 ಗಂಟೆಗೆ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುತ್ತಾರೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೃತದೇಹದ ಎತ್ತರ 5.9 ಅಡಿ, ದೃಢಕಾಯ ಶರೀರ, ಗೋಧಿ ಮೈಬಣ್ಣ, ದುಂಡು ಮುಖ, ಮುಖದಲ್ಲಿ ಬಿಳಿ ನೆರೆತ ಗಡ್ಡ-ಮೀಸೆ, ತಲೆಯಲ್ಲಿ ಬಿಳಿ ನೆರೆತ ಕೂದಲು, ಎದೆಯ ಬಳಿ ಕಪ್ಪು ಎಳ್ಳು ಮಚ್ಚೆ ಗುರುತು ಮತ್ತು ಮೃತದೇಹದ ಮೈಮೇಲೆ ಆಸ್ಪತ್ರೆಯ ಬಾಬ್ತು ಡೈಫರ್, ಮತ್ತು ಕೊರಳಿನಲ್ಲಿ ಲೋಹದ ತಾಯಿತಾ ವನ್ನು ಪೊಣಿಸಿದ ಕಪ್ಪು ದಾರ ಧರಿಸಿರುತ್ತಾರೆ. ಮೃತ ವ್ಯಕ್ತಿಯ ವಾರೀಸುದಾರರು/ ಸಂಬಂಧಿಕರು ಪತ್ತೆಯಾದಲ್ಲಿ ಧರ್ಮಸ್ಥಳ ಪೊಲೀಸು ಠಾಣೆ 08256 277253, E-Mail ID [email protected] PSI DHARMASTHALA: 7795424204, 8277986449. CPI BELTHANGADY: 9480805336, Dist Control: 0824-2220500, ಇದ್ದರೆ ಈ ಕೆಳಕಂಡ ದೂರವಾಣಿಗೆ ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Related posts

ಗುರುವಾಯನಕೆರೆ ನಾಗರಿಕ ಸೇವಾ ಟ್ರಸ್ಟ್ ಉಪಾಧ್ಯಕ್ಷ ಕೆ. ಸೋಮ ವಿಧಿವಶ

Suddi Udaya

ಎಸ್‌ವೈಎಸ್ ಬೆಳ್ತಂಗಡಿ ಝೋನ್ ವತಿಯಿಂದ ಶರೀಫ್ ಪರಪ್ಪು ಕುಟುಂಬಕ್ಕೆ ಸಾಂತ್ವನ ಫಂಡ್ ಹಸ್ತಾಂತರ

Suddi Udaya

ಉತ್ತಮ ಶಾಸಕ ಪ್ರಶಸ್ತಿ ಪಡೆದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರಿಗೆ ಇಂದಬೆಟ್ಟು ಕಾರ್ಯಕರ್ತರಿಂದ ಗೌರವಾರ್ಪಣೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿನಲ್ಲಿ ಶಿಕ್ಷಕ-ರಕ್ಷಕ ಸಭೆ

Suddi Udaya

ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಯಲ್ಲಿ ಪೋಷಕರ ಸಮಾವೇಶ

Suddi Udaya

ಅತ್ಯಂತ ಅಪರೂಪದ ಕುಂಭಮೇಳದಲ್ಲಿ ಪವಿತ್ರ ಸ್ಥಾನಗೈದ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya
error: Content is protected !!