September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳ್ಳತನ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿದ ವಾರಂಟ್ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಕಳ್ಳತನ ಪ್ರಕರಣ ಕಲಂ, 454,380,511 ಜೊತೆಗೆ 34 ಐಪಿಸಿಯಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿದ ವಾರಂಟ್ ಆರೋಪಿ ನೆಲ್ಯಾಡಿಯ ಶಾಜಿ ಮಗ ಸತೀಶ್ @ ಸ್ಕೋರ್ಪಿಯಾ ಸತೀಶ್(35) ಎಂಬಾತನನ್ನು ಬೆಳ್ತಂಗಡಿ ಪೊಲೀಸ್ ಉಪ ವಿಭಾಗದ ಡಿವೈಎಸ್ಪಿ ರೋಹಿಣಿ ಸಿ ಕೆ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ.ಬಿ.ಎಸ್ ನೇತೃತ್ವದ ಧರ್ಮಸ್ಥಳ ಸಬ್ ಇನ್ಸ್‌ಪೆಕ್ಟರ್ ಸಮರ್ಥ್, ಬೆಳ್ತಂಗಡಿ ಸಬ್ ಇನ್ಸ್‌ಪೆಕ್ಟರ್ ಸಿಕಂದರ್ ಪಾಷ ರವರ ತಂಡದ ಸಿಬ್ಬಂದಿ ಧರ್ಮಸ್ಥಳ ಠಾಣೆಯ ವೃಷಭ, ಚರಣ್ ರಾಜ್, ಬೆಳ್ತಂಗಡಿ ಠಾಣೆಯ ಸಿಬ್ಬಂದಿ ಮುನಿಯ ನಾಯ್ಕ ರವರು ನೆಲ್ಯಾಡಿ ಎಂಬಲ್ಲಿಂದ ಮೇ.4 ಬಂಧಿಸಿ ಸಿಬ್ಬಂದಿ ಶಶಿಕುಮಾರ್ ಮತ್ತು ಚರಣ್ ರಾಜ್ ರವರ ಮುಖೇನ ಬೆಳ್ತಂಗಡಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಈತನ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ, ವೇಣೂರು ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ, ಪುತ್ತೂರು ನಗರ ಠಾಣೆಯಲ್ಲಿ ಒಂದು ಪ್ರಕರಣ, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುತ್ತದೆ.

Related posts

ಕೊಕ್ರಾಡಿ ಹೇರ್ದಂಡಿ ಬಾಕ್ಯಾರು ಗರಡಿಗೆ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ,

Suddi Udaya

ಇಂದಬೆಟ್ಟು: ಶ್ರೀ ವೀರಭದ್ರ ದೇವಸ್ಥಾನ ಲಿಂಗತ್ಯಾರು ಶ್ರದ್ದಾ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಹರೀಶ್ ಪೂಂಜ ಗೆಲುವು: ಬಂದಾರು ಗ್ರಾಮದ ಬೈಪಾಡಿ,ಮೈರೋಳ್ತಡ್ಕ, ಪಾಣೆಕಲ್ಲು ವಾರ್ಡ್ ಗಳಲ್ಲಿ ಸಂಭ್ರಮಾಚರಣೆ

Suddi Udaya

ಕೊಡಗು ವಿವಿ ಸಿಂಡಿಕೇಟ್ ಸೆನೆಟ್ ಸದಸ್ಯರಾಗಿ ಕೆ.ಎನ್.ಜನಾರ್ಧನರವರ ನೇಮಕ: ಸಿರಿ ಸಂಸ್ಥೆಯಲ್ಲಿ ವಿಶೇಷ ಅಭಿನಂದನಾ ಕಾರ್ಯಕ್ರಮ

Suddi Udaya

ನಾಲ್ಕೂರು ತೋಟದಪಲ್ಕೆ ನಾರಾಯಣ ಪೂಜಾರಿ ನಿಧನ

Suddi Udaya

ಗಾಂಜಾ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮದಡ್ಕ ರಫೀಕ್ ರನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya
error: Content is protected !!