September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಹೇಶ್‌ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಬೆಳ್ತಂಗಡಿ: ಯಕ್ಷಗಾನ ಕಲಾವಿದರು ಮತ್ತು ಅವರ ಪಾಲಕರಿಗೆ ಅವಹೇಳನ ಹಾಗೂ ಬೆದರಿಕೆ ಹಾಕಿರುವ ಕುರಿತು ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ಮಹೇಶ್‌ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಮಂಗಳೂರಿನ ಆರನೇ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದಲ್ಲಿ ವಜಾಗೊಂಡಿದೆ.

ಯಕ್ಷಗಾನ ಕಲಾವಿದ ಪ್ರಜ್ವಲ್ ಕುಮಾರ್ ಜತೆ ಮೊಬೈಲ್‌ನಲ್ಲಿ ಮಾತನಾಡುವ ವೇಳೆ ಮಹೇಶ್‌ ಶೆಟ್ಟಿ ತಿಮರೋಡಿ, ಯಕ್ಷಗಾನ ಕಲಾವಿದ ದಿನೇಶ್ ಕೋಡಪದವು ಹಾಗೂ ಅವರ ತಾಯಿಯ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದರು. ಈ ಬಗ್ಗೆ ದಿನೇಶ್ ಅವರ ತಾಯಿ ಲೀಲಾವತಿ ಶೆಟ್ಟಿಗಾರ್ ಪುತ್ತೂರು ಮಹಿಳಾ ಠಾಣೆಗೆ ದೂರು ನೀಡಿದ್ದರು. ಕಲಾವಿದರಾದ ಸುಂದರ ರೈ, ಪ್ರಜ್ವಲ್ ಕುಮಾರ್ ಅವರಿಗೂ ಬೈದಿರುವ ಬಗ್ಗೆ ದೂರಿನಲ್ಲಿ ಉಲ್ಲೇಖಿಸಲಾಗಿತ್ತು. ಸರ್ಕಾರಿ ಅಭಿಯೋಜಕ ಮೋಹನ್ ಕುಮಾ‌ರ್ ಬಿ. ವಾದ ಮಂಡಿಸಿದ್ದರು.

Related posts

ರಾಷ್ಟ್ರೀಯ ಸಬ್ ಜ್ಯೂನಿಯರ್ ವಾಲಿಬಾಲ್ ಪಂದ್ಯಾಟಕ್ಕೆ ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿ ಶ್ರೇಯಸ್ ಎಸ್ ಆಯ್ಕೆ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ವತಿಯಿಂದ ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ ಮತ್ತು ಅರ್ಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣಾ

Suddi Udaya

ಮದ್ದಡ್ಕ: ಕಾರಿನೊಳಗೆ ಸಿಲುಕಿಕೊಂಡ ಮಗು: ಪ್ರಾಣಾಪಾಯದಿಂದ ಪಾರು

Suddi Udaya

ಶಿರ್ಲಾಲು ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಜಾತ್ರಾ ಸಮಿತಿ ರಚನೆ

Suddi Udaya

ಮರೋಡಿ: ಜ.27 ರಂದು ಅಂಬ್ಯುಲೆನ್ಸ್ ಲೋಕಾರ್ಪಣೆ

Suddi Udaya

ಅನ್ನಭಾಗ್ಯಕ್ಕೆ ಅಕ್ಕಿ ನೀಡದ ಕೇಂದ್ರ ಸರಕಾರದ ವಿರುದ್ಧ ಅನ್ನದ ತಟ್ಟೆ ಬಡಿದು ಬ್ಲಾಕ್ ಕಾಂಗ್ರೆಸ್‌ನಿಂದ ಪ್ರತಿಭಟನೆ

Suddi Udaya
error: Content is protected !!