September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಜ್ಯ ಮಟ್ಟದ ಪ್ರಕೃತಿ ಚಿಕಿತ್ಸೆ,ಯೋಗ ಹಾಗೂ ಪೌಷ್ಠಿಕ ಆಹಾರ ಮಾಹಿತಿ ಶಿಬಿರದ ಸಮಾರೋಪ

ಉಜಿರೆ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಬೆಳ್ತಂಗಡಿ ಸ್ಥಳೀಯ ಸಂಸ್ಥೆ ಹಾಗೂ ಎಸ್ ಡಿ ಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಉಜಿರೆ ಬೆಳ್ತಂಗಡಿ ಇವರ ಸಹಭಾಗಿತ್ವದಲ್ಲಿ ಮೇ 4 ರಿಂದ ಪ್ರಾರಂಭಗೊಂಡು ಮೇ8 ರಂದು ಸಮಾರೋಪ ಸಮಾರಂಭ ನಡೆಯಿತು.

ವೇದಿಕೆಯಲ್ಲಿ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸತೀಶ್ಚಂದ್ರ ಎಸ್., ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ತುಕಾರಾಮ್ ಬಿ, ಎಸ್.ಡಿ.ಎಂ ಸಿಎನ್.ವೈ ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರಶಾಂತ್ ಶೆಟ್ಟಿ, ಶಿಬಿರ ನಿರ್ದೇಶಕರಾದ ಡಾ.ರವಿ ಎಂ ಎನ್, ಬೆಳ್ತಂಗಡಿ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಪ್ರಮೀಳಾ, ರಾಜ್ಯ ಸಹಾಯಕ ಸಂಘಟನಾ ಆಯುಕ್ತರಾದ ಭರತ್ ರಾಜ್ ಕೆ, ಶಾಂತಿವನದ ಮುಖ್ಯ ವೈದ್ಯಾಧಿಕಾರಿ ಶಿವಪ್ರಸಾದ್ ಶೆಟ್ಟಿ, ನ್ಯೂಟ್ರಿಷನ್ ವಿಭಾಗದ ಮುಖ್ಯಸ್ಥೆ ಗೀತಾ ಬಿ ಶೆಟ್ಟಿ ಉಪಸ್ಥಿತರಿದ್ದರು.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಇದರ ವತಿಯಿಂದ ಎಸ್ ಡಿ ಎಂ ಸಿಎನ್ ವೈ ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರಶಾಂತ್ ಶೆಟ್ಟಿ ಅವರನ್ನು ಗೌರವಿಸಲಾಯಿತು. ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಾದ ಪ್ರಥಮ್, ದೀಕ್ಷಾ, ರೋಷನ್, ಲಕ್ಷ್ಮೀ ಹಾಗೂ ಸ್ಕೌಟ್ಸ್ ಮಾಸ್ಟರ್ ರವಿ ಕುಮಾರ್, ಗೈಡ್ಸ್ ವಿಭಾಗದ ಆರತಿ ಅವರು ಶಿಬಿರದ ಅನಿಸಿಕೆಯನ್ನು ವ್ಯಕ್ತಪಡಿಸಿದರು.

ಡಾ. ಅನನ್ಯ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಬೆಳ್ತಂಗಡಿ ಯಲ್ಲಿ ಡಾ| ರಂಜನ್ ಕುಮಾರ್ ಅವರ ಅನುಗ್ರಹ ಕ್ಲಿನಿಕ್ ಶುಭಾರಂಭ     

Suddi Udaya

ಕುತ್ಲೂರು: ಈಶ್ವರಪ್ಪ ಆಚಾರ್ಯ ನಿಧನ

Suddi Udaya

ಮಾಜಿ ಶಾಸಕ ವಸಂತ ಬಂಗೇರರ ನಿಧನಕ್ಕೆ ಬೆಳ್ತಂಗಡಿ ಮಾಜಿ ಸೈನಿಕರ ಸಂಘದಿಂದ ಸಂತಾಪ

Suddi Udaya

ಜು.5: ಉಪ್ಪಿನಂಗಡಿ – ಕುಪ್ಪೆಟ್ಟಿ ಸಂಚಾರಕ್ಕೆ ಯೋಗ್ಯವಿಲ್ಲದೆ ನರಕ ಯಾತನೆ ಅನುಭವಿಸುತ್ತಿರುವ ಸಮಸ್ಯೆ ಬಗ್ಗೆ : ಬಿಜೆಪಿ ಕಣಿಯೂರು ಮಹಾಶಕ್ತಿ ಕೇಂದ್ರ ವತಿಯಿಂದ ಪ್ರತಿಭಟನೆ

Suddi Udaya

ಹೆದ್ದಾರಿ ಅವಾಂತರ ಕೈಗಾರಿಕಾ ವಸಾಹತಿನ ಉದ್ಯಮಿಗಳ ಪ್ರತಿಭಟನೆ: ತಾ.ಪಂಕಾರ್ಯನಿರ್ವಹಣಾಧಿಕಾರಿ ಭೇಟಿ

Suddi Udaya

ಮರೋಡಿ: ಸಾರ್ವಜನಿಕ ಸೇವೆಗಾಗಿ ದಾನಿಗಳಿಂದ ₹ 8 ಲಕ್ಷ ವೆಚ್ಚದಲ್ಲಿ ಆಂಬುಲೆನ್ಸ್‌ ವಾಹನ ಲೋಕಾರ್ಪಣೆ

Suddi Udaya
error: Content is protected !!