September 24, 2026
ತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಕುದುರೆಮುಖ ರಾಷ್ಟ್ರೀಯ ಉದ್ಯಾನವನ: ಸ್ವಯಂ ಪ್ರೇರಿತ ಪುನರ್ವಸತಿಗೆ ಒಲವು ಹೊಂದಿರುವ ಕುಟುಂಬಗಳು ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಅರಣ್ಯ ಸಚಿವರ ಭೇಟಿ

ಬೆಳ್ತಂಗಡಿ: ಮಲವಂತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ವಾಸವಾಗಿರುವ 9 ಕುಟುಂಗಳು ಸ್ವಯಂ ಪ್ರೇರಿತ ಪುನರ್ವಸತಿಗೆ ಒಲವು ಹೊಂದಿದ್ದು, ಈಗಾಗಲೇ ಕಡತಗಳು ಸಿದ್ಧಪಡಿಸಿ ಅಂದಾಜು ಮೊತ್ತವನ್ನು ಸರ್ಕಾರಕ್ಕೆ ಸಲ್ಲಿಸಿರುತ್ತಾರೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರ ಸಮಕ್ಷಮದಲ್ಲಿ ಮುಕ್ತಾಯದ ಹಂತಕ್ಕೆ ಬಂದಿರುತ್ತದೆ. ಈ ಬಗ್ಗೆ
ಸ್ವಯಂ ಪ್ರೇರಿತ ಪುನರ್ವಸತಿಗೆ ಒಲವು ಹೊಂದಿರುವ ಕುಟುಂಬಗಳು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ಅವರನ್ನು ಭೇಟಿ ಮಾಡಿ ಮಲವಂತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ವಾಸವಾಗಿರುವ 9 ಕುಟುಂಭಗಳ ಪುನರ್ವಸತಿಗೆ ಅಂದಾಜು ಮೊತ್ತ 10 ಕೋಟಿ ರೂಪಾಯಿ ಅನುದಾನವನ್ನು ಮಂಜೂರುಗೊಳಿಸುವಂತೆ ಮನವಿಯನ್ನು ಸಲ್ಲಿಸಲಾಯಿತು. ಮನವಿಗೆ ಸಚಿವರು ಪೂರಕವಾಗಿ ಸ್ಪಂದಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಶಾಲೆಟ್ ಪಿಂಟೊ,
ಮಲವಂತಿಗೆ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಕೆ.ಯು. ಮೊಹಮ್ಮದ್, ಫಲಾನುಭವಿಗಳಾದ ಸಂತೋಷ್ ಗೌಡ, ನಾರಾಯಣ
ಮಲೆಕುಡಿಯ, ಬಾಲಕೃಷ್ಣ ಮಲೆಕುಡಿಯ, ಹರೀಶ್ ಮಲೆಕುಡಿಯ, ಪುರಂದರ ಗೌಡ ಉಪಸ್ಥಿತರಿದ್ದರು.

Related posts

ಸೌತಡ್ಕ : ಗೇರು ಪ್ಲಾಂಟೇಶನ್ ನಲ್ಲಿ ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷ

Suddi Udaya

ಪಟ್ರಮೆ: ವಿಷ್ಣುಮೂರ್ತಿ ದೇವಸ್ಥಾನದ ಹಿಂಭಾಗದ ತಡೆಗೋಡೆ ಕುಸಿತ

Suddi Udaya

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ : ಜಿ.ಎ.ಎಸ್. ಕಂಬದಲ್ಲಿ ಢಮರ್ ಶಬ್ದ

Suddi Udaya

ಎಸ್.ಕೆ.ಪಿ.ಎ ಬೆಳ್ತಂಗಡಿ ವಲಯದ ವತಿಯಿಂದ ನಿವೃತ್ತ ಯೋಧ ಅಶೋಕ ಕುಮಾರ್ ಅವರಿಗೆ ಗೌರವ

Suddi Udaya

ನಾರಾವಿ ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಿವಿಧ ರೋಗಗಳ ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಮಚ್ಚಿನ–ಬಳ್ಳಮಂಜದಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ನೂತನ ಶಾಖೆ ಉದ್ಘಾಟನೆ

Suddi Udaya
error: Content is protected !!