September 24, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಬೈಕ್ ಹಾಗೂ ಸ್ವಿಫ್ಟ್ ಕಾರು ನಡುವೆ ಭೀಕರ ಅಪಘಾತ : ಬೈಕ್‌ ಸವಾರ ಸಾವು

ಬೆಳ್ತಂಗಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೋಳಿತ್ತೊಟ್ಟು ಜಂಕ್ಷನ್‌ನಲ್ಲಿ ಬೈಕ್ ಹಾಗೂ ಸ್ವಿಫ್ಟ್ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮೇ 10ರಂದು ನಡೆದಿದೆ.

ಕೊಕ್ಕಡದಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಬೈಕ್ ಹಾಗೂ ಉಪ್ಪಿನಂಗಡಿಯಿಂದ ಶಿರಾಡಿ ಕಡೆಗೆ ಸಾಗುತ್ತಿದ್ದ ಸ್ವಿಫ್ಟ್ ಕಾರಿನ ನಡುವೆ ಗೋಳಿತ್ತೊಟ್ಟು ಜಂಕ್ಷನ್‌ನಲ್ಲಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಬೈಕ್‌ ಸವಾರ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮೃತಪಟ್ಟವರನ್ನು ಅರಸಿನಮಕ್ಕಿ ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸರಫಾ ಸದಾನಂದ ಆಚಾರ್ (55) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಬೈಕ್‌ನಲ್ಲಿದ್ದ ಅವರ ಪತ್ನಿ ಉಷಾ ಆಚಾರ್ಯ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ. ಪುತ್ತೂರು ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Related posts

ನಿಡ್ಲೆ ಗ್ರಾ.ಪಂ. ವ್ಯಾಪ್ತಿಯ ‘ನಮ್ಮ ನಡೆ ಮತಗಟ್ಟೆಯ ಕಡೆ’ ಕಾರ್ಯಕ್ರಮದ ಅಂಗವಾಗಿ ಧ್ವಜಾರೋಹಣ

Suddi Udaya

ಉತ್ತರಖಾಂಡ್ ಕೇದಾರನಾಥ ದೇವಸ್ಥಾನದಲ್ಲಿ ಶಾಸಕ ಹರೀಶ್ ಪೂಂಜ

Suddi Udaya

ಬಿಜೆಪಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾಗಿ ಪ್ರಮೋದ್ ಗೌಡ ದಿಡುಪೆ ಆಯ್ಕೆ

Suddi Udaya

ಜು.13: ಬೆಳ್ತಂಗಡಿ ಮಾತೃಶ್ರೀ ಟೆಕ್ಸ್‌ಟೈಲ್ಸ್‌ನಲ್ಲಿ ಆಷಾಡ (ಆಟಿ) ಸೇಲ್: 10% ಫ್ಲ್ಯಾಟ್, 50-50 ಪ್ರತಿ ಖರೀದಿಯ ಮೇಲೆ ಡಿಸ್ಕೌಂಟ್

Suddi Udaya

ಶ್ರೀರತ್ನಾತ್ರಯ ಜೈನ ಸಂಘ ದಿಂದ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ರಿಗೆ ಮನವಿ: ಜೈನ ಧರ್ಮೀಯರಿಗೆ ಪ್ರತ್ಯೇಕ ನಿಗಮ ರಚನೆ ಸಚಿವರ ಭರವಸೆ

Suddi Udaya

ಗೇರುಕಟ್ಟೆ ಫ್ರೆಂಡ್ಸ್ ಮತ್ತು ಗಲ್ಫ್ ಗೈಸ್ ವತಿಯಿಂದ ಜಿ.ಪಿ.ಎಲ್ – 2024 ಕ್ರಿಕೆಟ್ ಪಂದ್ಯಾಟ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya
error: Content is protected !!