27.1 C
ಪುತ್ತೂರು, ಬೆಳ್ತಂಗಡಿ
September 27, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಕ್ಯಾಂಟಿನ್ ಒಳಗಡೆ ವೇಶ್ಯಾವಟಿಕೆ ದಂಧೆ ಬಯಲು ; ಬೆಳ್ತಂಗಡಿ ಪೊಲೀಸರಿಂದ ದಾಳಿ: ಪ್ರಕರಣ ದಾಖಲು

ಬೆಳ್ತಂಗಡಿ: ಅಕ್ರಮವಾಗಿ ನಿರ್ಮಾಣ ಮಾಡಿದ ಕ್ಯಾಂಟಿನ್ ಒಳಗಡೆ ಅಕ್ರಮವಾಗಿ ವೇಶ್ಯಾವಟಿಕೆ ದಂಧೆ ಮೇಲೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿದ್ದಾರೆ. ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ ಕೆ.ಇ.ಬಿ ಕಚೇರಿ ಪಕ್ಕದಲ್ಲಿ ಪಡಂಗಡಿ ಗ್ರಾಮದ ಪೊಯ್ಯಗುಡ್ಡೆ ನಿವಾಸಿ ಸುಂದರ್ ಶೆಟ್ಟಿ ಎಂಬವರು ಕಳೆದ 20 ವರ್ಷಗಳಿಂದ ಕ್ಯಾಂಟಿನ್ ನಡೆಸುತ್ತಿದ್ದರು. ಈ ಕ್ಯಾಂಟಿನ್ ಭಾನುವಾರ ಮಾತ್ರ ರಜೆ ಇದ್ದು, ಈ ಸಮಯದಲ್ಲಿ ಕ್ಯಾಂಟಿನ್ ಮಾಲೀಕ ಸುಂದರ್ ಶೆಟ್ಟಿ ಕ್ಯಾಂಟಿನ್ ಒಳಗಡೆ ಬೆಡ್ ರೂಂ, ಶೌಚಾಲಯ ವ್ಯವಸ್ಥೆ ಮಾಡಿಕೊಂಡು ಮಹಿಳೆಯನ್ನು ಕರೆದುಕೊಂಡು ಬಂದು ಹಣ ಮಾಡುವ ಉದ್ದೇಶದಿಂದ ಗಿರಾಕಿಗಳನ್ನು ಕರೆಸಿ ವೇಶ್ಯಾವಟಿಕೆ ದಂಧೆ ನಡೆಸುತ್ತಿದ್ದರು.

ಈ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಮೇ.10 ರಂದು ಸಂಜೆ 5 ಗಂಟೆಗೆ ಕ್ಯಾಂಟಿನ್ ಮೇಲೆ ದಾಳಿ ಮಾಡಿದಾಗ ವೇಶ್ಯಾವಟಿಕೆ ಪ್ರಕರಣ ಬೆಳಕಿಗೆ ಬಂದಿದೆ. ಕ್ಯಾಂಟಿನ್ ಒಳಗಡೆ ಮಾಲೀಕ ಸುಂದರ್ ಶೆಟ್ಟಿ(55), ಗಿರಾಕಿಗಳಾದ ಬೆಳ್ತಂಗಡಿ ತಾಲೂಕಿನ ನಾವೂರು ನಿವಾಸಿ ಚಾಲಕ ವೃತ್ತಿ ಮಾಡುವ ಹುಸ್ಮಾನ್(38), ಬೆಳ್ತಂಗಡಿ ತಾಲೂಕಿನ ತಣ್ಣೀರುಪಂತದ ಗ್ರಾಮದ ಕಲ್ಲೇರಿ ನಿವಾಸಿ ಹೈದಾರ್(45) ಮೂವರನ್ನು ಬಂಧಿಸಿದ್ದಾರೆ.

29 ವರ್ಷದ ಓರ್ವ ಸಂತ್ರಸ್ತ ಮಹಿಳೆಯನ್ನು ರಕ್ಷಣೆ ಮಾಡಲಾಗಿದೆ. ದಾಳಿ ವೇಳೆ ಮೊಬೈಲ್ ಫೋನ್, 5 ಸಾವಿರ ಹಣ, ನಿರೋಧ್ ಗಳು ಪತ್ತೆಯಾಗಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿನಿ.ಸಿ.ಕೆ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ.ಬಿ.ಎಸ್ ನೇತೃತ್ವದ ಬೆಳ್ತಂಗಡಿ ಸಬ್ ಇನ್ಸ್‌ಪೆಕ್ಟರ್ ಸಿಕಂದರ್ ಪಾಷ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Related posts

ಹಿರಿಯ ದಲಿತ ಮುಖಂಡ ಎಂ.ದೇವದಾಸ್ ನಿಧನಕ್ಕೆ ಬೆಳ್ತಂಗಡಿ ದಲಿತ ಸಂಘರ್ಷ ಸಮಿತಿಯಿಂದ ಸಂತಾಪ

Suddi Udaya

ತೆಂಕಕಾರಂದೂರು: ಕಾರು ಹಾಗೂ ಬೈಕ್ ನಡುವೆ ಅಪಘಾತ

Suddi Udaya

ಅಳದಂಗಡಿ: ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಆರ್ ಚುನಾವಣಾ ಪ್ರಚಾರ ಸಭೆ

Suddi Udaya

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾದ ಮಂಜುನಾಥ ಜಿ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಕಣಿಯೂರು: ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವರ ಬ್ರಹ್ಮಕಲಶೋತ್ಸವದ ಸಮಿತಿ ಪುನರ್ ರಚನೆ

Suddi Udaya

ರಾಜ್ಯೋತ್ಸವ ಪ್ರಶಸ್ತಿಗೆ ಸಹಕರಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರಿಗೆ ಬಳಂಜ ಬಿಲ್ಲವ ಸಂಘದಿಂದ ಗೌರವಾರ್ಪಣೆ

Suddi Udaya
error: Content is protected !!