30.7 C
ಪುತ್ತೂರು, ಬೆಳ್ತಂಗಡಿ
September 27, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಕ್ಯಾಂಟಿನ್ ಒಳಗಡೆ ವೇಶ್ಯಾವಟಿಕೆ ದಂಧೆ ಪ್ರಕರಣ: ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ

ಬೆಳ್ತಂಗಡಿ: ಕ್ಯಾಂಟಿನ್ ಒಳಗಡೆ ವೇಶ್ಯಾವಟಿಕೆ ದಂಧೆ ನಡೆಸುತ್ತಿದ್ದ ಅಡ್ಡೆ ಮೇಲೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಓರ್ವ ಸಂತ್ರಸ್ತೆಯನ್ನು ರಕ್ಷಣೆ ಮಾಡಿ ಮೂವರನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದ ಪ್ರಕರಣ ಸಂಬಂಧ ಇಬ್ಬರು ಪ್ರಮುಖ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.ಮತ್ತೊಂದೆಡೆ ಕ್ಯಾಂಟಿನ್ ಒಳಗಡೆ ರಹಸ್ಯ ಕೊಠಡಿಯನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.

ಬೆಳ್ತಂಗಡಿ ನಗರದ ಕೆ.ಇ.ಬಿ ರಸ್ತೆಯಲ್ಲಿರುವ ಸುಂದರ್ ಶೆಟ್ಟಿ ಮಾಲೀಕತ್ವದ ಕ್ಯಾಂಟಿನ್ ನಲ್ಲಿ ವೇಶ್ಯಾವಟಿಕೆ ದಂಧೆ ನಡೆಸುತ್ತಿದ್ದ ಅಡ್ಡೆ ಮೇಲೆ ಬೆಳ್ತಂಗಡಿ ಪೊಲೀಸರು ಮೇ.10 ರಂದು ಸಂಜೆ 5 ಗಂಟೆಗೆ ದಾಳಿ ಮಾಡಿ ದಂಧೆ ನಡೆಸುತ್ತಿದ್ದ ಸುಂದರ್ ಶೆಟ್ಟಿ ಮತ್ತು ಉಸ್ಮಾನ್ ಎಂಬವರನ್ನು ಬಂಧಿಸಿದ್ದರು. ಮತ್ತೊರ್ವ ಗಿರಾಕಿ ಕಲ್ಲೇರಿಯ ಹೈದಾರ್ ಎಂಬಾತನನ್ನು ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆದುಕೊಂಡಿದ್ದಾರೆ.

ನ್ಯಾಯಾಂಗ ಬಂಧನ: ವೇಶ್ಯಾವಟಿಕೆ ನಡೆಸುತ್ತಿದ್ದ ಕ್ಯಾಂಟಿನ್ ಮಾಲೀಕ ಪಡಂಗಡಿ ಗ್ರಾಮದ ಪೊಯ್ಯೆಗುಡ್ಡೆ ನಿವಾಸಿ ಸುಂದರ್ ಶೆಟ್ಟಿ(55) ಮತ್ತು ಸ್ನೇಹಿತ ನಾವೂರು ಗ್ರಾಮದ ಹುಸ್ಮಾನ್(38) ಎಂಬವರನ್ನು ಬಂಧಿಸಿ ಮೇ.11 ರಂದು ರಾತ್ರಿ ಬೆಳ್ತಂಗಡಿ ನ್ಯಾಯಾಧೀಶರ ಮನೆಗೆ ಹಾಜರುಪಡಿಸಿ ಇಬ್ಬರಿಗೂ ನ್ಯಾಯಾಧೀಶರು ನ್ಯಾಯಾಂಗ ಬಂಧನ ವಿಧಿಸಲಾಗಿದೆ.ಮತ್ತೋರ್ವ ವೇಶ್ಯಾವಟಿಕೆ ಅಡ್ಡೆಗೆ ಗಿರಾಕಿಯಾಗಿ ಬಂದಿದ್ದ ಕಲ್ಲೇರಿ ನಿವಾಸಿ ಹೈದಾರ್ (45) ಎಂಬಾತನನ್ನು ವಶಕ್ಕೆ ಪಡೆದು ಬೆಳ್ತಂಗಡಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂತ್ರಸ್ತ ಮಹಿಳೆ ಸಾಂತ್ವನ ಕೇಂದ್ರಕ್ಕೆ: ವೇಶ್ಯಾವಟಿಕೆ ಪ್ರಕರಣದ ದಾಳಿ ವೇಳೆ ರಕ್ಷಣೆ ಮಾಡಲಾದ 29 ವರ್ಷದ ಮಹಿಳೆಯನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಪೊಲೀಸರು ಮೇ.11 ರಂದು ಹಾಜರುಪಡಿಸಿದ್ದು. ನ್ಯಾಯಾಲಯ ಮಂಗಳೂರಿನ ಮುಡಿಪುನಲ್ಲಿರುವ ಮಹಿಳಾ ಸ್ವಂತಾನ ಕೇಂದ್ರಕ್ಕೆ ಕಳುಹಿಸಿಕೊಡಲಾಗಿದೆ.

ಕ್ಯಾಂಟಿನ್ ನಲ್ಲಿ ರಹಸ್ಯ ಕೊಠಡಿ ಪತ್ತೆ: ಪವನ್ ಕ್ಯಾಂಟಿನ್ ಒಳಗಡೆ ಅಡುಗೆ ಕೋಣೆಯಲ್ಲಿ ರಹಸ್ಯ ಕೊಠಡಿಯನ್ನು ಸುಂದರ್ ಶೆಟ್ಟಿ ನಿರ್ಮಿಸಿದ್ದಾರೆ. ಪೊಲೀಸ್ ದಾಳಿ ವೇಳೆ ಸಂತ್ರಸ್ತ ಮಹಿಳೆ ಇದೆ ರಹಸ್ಯ ಕೊಠಡಿಯಲ್ಲಿ ಅಡಗಿ ಕುಳಿತಿದ್ದರು ಇದನ್ನು ಬೆಳ್ತಂಗಡಿ ಸಬ್ ಇನ್ಸ್‌ಪೆಕ್ಟರ್ ಸಿಕಂದರ್ ಪಾಷ ಪತ್ತೆ ಹಚ್ಚಿ ಪ್ರಕರಣ ಬೆಳಕಿಗೆ ತಂದಿದ್ದಾರೆ.

Related posts

ಮುಳಿಯ ಕೃಷ್ಣವೇಷ ಸ್ಪರ್ಧೆಯಲ್ಲಿ ಸ್ಮಯ ಎಸ್. ಕೋಟ್ಯಾನ್‌ಗೆ ಪ್ರಥಮ

Suddi Udaya

ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ರವರಿಗೆ ಬೆಳ್ತಂಗಡಿ ಬಿಜೆಪಿ ಮಂಡಲದಿಂದ ಸ್ವಾಗತ

Suddi Udaya

ಆಳ್ವಾಸ್ ಕಾಲೇಜಿನಲ್ಲಿ ಶಿಕ್ಷಕ -ರಕ್ಷಕ ಸಂಘದ ವಾರ್ಷಿಕ ಸಭೆ

Suddi Udaya

ವಿ.ಹಿಂ.ಪ. ಬಜರಂಗದಳ ಚಾರ್ಮಾಡಿ ಘಟಕದ ವತಿಯಿಂದ ಸ್ಥಾಪನ ದಿನಾಚರಣೆ

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ಸೆಂಟ್ ಅಲ್ಫೋನ್ಸ ಎಸ್ ಎಂ ವೈ ಎಂ ಪ್ರಾಯೋಜಿತ ಅಲ್ಫಾ ಪ್ರಿಮಿಯರ್ ಲೀಗ್

Suddi Udaya
error: Content is protected !!