30.7 C
ಪುತ್ತೂರು, ಬೆಳ್ತಂಗಡಿ
September 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಮೇ 14-22: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ

ಶಿಶಿಲ: ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಮೇ 14ರಂದು ಪ್ರಾರಂಭಗೊಂಡು ಮೇ 22 ರವರೆಗೆ ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಜರಗಲಿದೆ.

ಮೇ 18ರಂದು ದೇವರ ದರ್ಶನ ಬಲಿ, ಬಟ್ಟಲು ಕಾಣಿಕೆ, ಮೇ ೧೯ರಂದು ರಾತ್ರಿ ಮಹಾರಥೋತ್ಸವ, ಮೇ 21ರಂದು ಪೂರ್ವಾಹ್ನ ಕುಮಾರಗುಡ್ಡೆಯಲ್ಲಿ ರುದ್ರಾಭಿಷೇಕ, ಕುಮಾರಾದಿ ದೈವಗಳಿಗೆ ನೇಮ, ರಾತ್ರಿ ಗೋಪುರದ ಬಾಗಿಲಲ್ಲಿ ಚಕ್ರವರ್ತಿ ಕೊಡಮಣಿತ್ತಾಯ ಹಾಗೂ ಪರಿವಾರ ದೈವಗಳಿಗೆ ನೇಮ, ವರ್ಷಾವಧಿ ಕಟ್ಟೆಯ ಬಳಿ ದೈವಗಳ ನೇಮ ಜರುಗಲಿದೆ.

ಸಾಂಸ್ಕೃತಿಕ ಕಾರ್ಯಕ್ರಮಗಳು: ಮೇ 17 ರಂದು ಸಂಜೆ ನೃತ್ಯಭೂಷಿಣಿ ಕಲಾ ಶಾಲೆ ಶಿಶಿಲ ಇದರ ವಿದ್ಯಾರ್ಥಿಗಳಿಂದ ಭರತನಾಟ್ಯ. ಮೇ 18ರಂದು ಸಂಜೆ ಶ್ರೀ ದುರ್ಗಾಪರಮೇಶ್ವರೀ ಯಕ್ಷಗಾನ ಕಲಾಕೇಂದ್ರ ಶಿಶಿಲ ಇದರ ವಿದ್ಯಾರ್ಥಿಗಳ ರಂಗಪ್ರವೇಶ ಮತ್ತು ಶ್ರೀ ಶಿಶಿಲೇಶ್ವರ ಮಹಿಳಾ ಮತ್ತು ಮಕ್ಕಳ ಯಕ್ಷಕಲಾ ಸಂಘ ಶಿಶಿಲ ಇವರಿಂದ ವೀರಮಣಿ ಕಾಳಗ ಯಕ್ಷಗಾನ ಪ್ರಸಂಗ ಜರುಗಲಿದೆ.

Related posts

ಜ.31-ಫೆ.4: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಮಂತ್ರಿಮಂಡಲ ರಚನೆ

Suddi Udaya

ಕಾಜೂರು ಉರೂಸ್‌ ಸಮಾಪ್ತಿ : ಸಾವಿರಾರು ಮಂದಿಗೆ ಅನ್ನದಾನ

Suddi Udaya

ಕಲ್ಮಂಜ ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ದಿನಾಚರಣೆ

Suddi Udaya

ಬಾರ್ಯ ಗ್ರಾ.ಪಂ. ವ್ಯಾಪ್ತಿಯಲ್ಲಿ ಶಿಕ್ಷಣ ಸಂವಹನ ಕಾರ್ಯಕ್ರಮ

Suddi Udaya

ಮರೋಡಿ: ವಿಕಸಿತ ಭಾರತ ಸಂಕಲ್ಪ ಯಾತ್ರೆ-ಸಾಧಕರಿಗೆ ಗೌರವಾರ್ಪಣೆ

Suddi Udaya
error: Content is protected !!