30.7 C
ಪುತ್ತೂರು, ಬೆಳ್ತಂಗಡಿ
September 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ನಿರ್ಲಕ್ಷ್ಯ: ಆಸ್ಪತ್ರೆಗೆ ದಾಖಲಾಗಿದ್ದ ರೋಗಿ ಸಾವು

ಬೆಳ್ತಂಗಡಿ: ಒಂದಲ್ಲ ಒಂದು ಸಮಸ್ಯೆಗಳಿಂದ ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಯ ನಿರ್ಲಕ್ಷ್ಯ ಮಾತ್ರ ಇನ್ನೂ ಕಡಿಮೆಯಾಗಿಲ್ಲ. ಇದೀಗ ಆಸ್ಪತ್ರೆಯ ನಿರ್ಲಕ್ಷ್ಯದಿಂದ ರೋಗಿಯೊಬ್ಬ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ.

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಸರಕಾರಿ ಆಸ್ಪತ್ರೆಗೆ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಪೆಲತ್ತಾಜೆ ನಿವಾಸಿ ಅಚ್ಚುತ್ತ (42ವ) ಎಂಬವರು ಹೊಟ್ಟೆನೋವು ಎಂದು ಮೇ10 ರಂದು ಮಧ್ಯಾಹ್ನ ದಾಖಲಾಗಿದ್ದರು.‌ ಇವರು ಮೇ11 ರಂದು ಬೆಳಗ್ಗೆ 5 ಗಂಟೆಗೆ ಸುಮಾರಿಗೆ ಆಸ್ಪತ್ರೆಯಿಂದ ಯಾರಿಗೂ ಹೇಳದೆ ಹೊರಗಡೆ ಹೋಗುವಾಗ ಹಿಂಭಾಗದ ಡಯಾಲಿಸಿಸ್ ಬಳಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

ಈ ಘಟನೆ ಆಸ್ಪತ್ರೆಯ ವೈದ್ಯರ‌ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಡಿ ಗ್ರೂಪ್ ನೌಕರರು ಸರಿಯಾಗಿ ಕರ್ತವ್ಯ ನಿರ್ವಹಿಸದೆ ರೋಗಿ ಹೊರಹೋಗುವಂತೆ ಮಾಡಿ ಸಾವಿಗೆ ಕಾರಣ ಎಂದು ಸಾರ್ವಜನಿಕರು ಆರೋಪ ಮಾಡುತ್ತಿದ್ದಾರೆ. ಮೃತ ವ್ಯಕ್ತಿಯ ಕುಟುಂಬ ಬಡತನದಲ್ಲಿದ್ದು ಪತ್ನಿ  ಕೂಲಿ ಕೆಲಸ ಮಾಡುತ್ತಿದ್ದು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Related posts

ಎಸ್‌ಡಿಎಂ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಉದಯೋನ್ಮುಖ ಪ್ರತಿಭೆ ಬಹುಮಾನ

Suddi Udaya

ಆರೋಗ್ಯ ರಕ್ಷಕರಿಗೆ ರಕ್ಷೆ ಕಟ್ಟುವ ಮೂಲಕ ವಿಭಿನ್ನವಾಗಿ ರಕ್ಷಾಬಂಧನ ಆಚರಿಸಿದ ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು

Suddi Udaya

ಬೆಳ್ತಂಗಡಿ : ಪಾರ್ಕಿಂಗ್ ಮಾಡಿದ್ದ ಬೈಕ್ ಕಳ್ಳತನ

Suddi Udaya

ಎಸ್.ಡಿ.ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ : ಅಂತರ್ ಕಾಲೇಜು ಮತ್ತು ರಾಜ್ಯ ಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಚಾಲನೆ

Suddi Udaya

ಬಂದಾರು: ಮನೆ ಮೇಲೆ ಕುಸಿದು ಬಿದ್ದ ಧರೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya
error: Content is protected !!