27.1 C
ಪುತ್ತೂರು, ಬೆಳ್ತಂಗಡಿ
September 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮೇ 17: ಉಜಿರೆಯಲ್ಲಿ 5ನೇ ವರ್ಷದ ಸಂಭ್ರಮದ ಕೇರಳ ಸಾಂಪ್ರದಾಯಿಕ ವಿಷುಕಣಿ ಆಚರಣೆ: ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಕೇರಳ ಭಾಷಿಗರ ಅನೇಕ ಕುಟಯಂಬಗಳು ಬೆಳ್ತಂಗಡಿಯಲ್ಲಿ ವಾಸಿಸುತ್ತಿದ್ದು ತವರು ರಾಜ್ಯದ ಭಾವನೆಯಲ್ಲಿರುವ ಎಂಬ ಕಲ್ಪನೆಯೊಂದಿಗೆ ಕಳೆದ ನಾಲ್ಕು ವರ್ಷಗಳ ಕಾಲ ವಿಷುಕಣಿ ಹಬ್ಬ ಅತ್ಯಂತ ಯಶಸ್ವಿಯಾಗಿ ತಾಲೂಕಿನಲ್ಲಿ ನಡೆಯುತ್ತಾ ಬಂದಿದೆ. ಕೇರಳದ ಸಾಂಪ್ರಾದಾಯಿಕ ವಿಷುಕಣಿ ಸಂಸ್ಕಾರ ಸಂಸ್ಕತಿಯನ್ನು ಪ್ರತಿಬಿಂಬಿಸುವ ಹಬ್ಬ ಇದಾಗಿದ್ದು 5ನೇ ವರ್ಷದ ವಿಷುಕಣಿ ಆಚರಣೆ ಮೇ. 17 ರಂದು ಉಜಿರೆಯ ಕೃಷ್ಣಾನುಗ್ರಹ ಸಭಾಭವನದಲ್ಲಿ ನಡೆಯಲಿದ್ದು ಹಬ್ಬದ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.

ಅವರು ಮೇ. 12ರಂದು ಬೆಳ್ತಂಗಡಿ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಕಳೆದ ಒಂದು ತಿಂಗಳಿನಿಂದ ಆಚರಣೆಯ ರೂಪುರೇಷಗಳು ಸಿದ್ಧಗೊಂಡು ಪೂರ್ವ ತಯಾರಿ ನಡೆಸಲಾಗುತ್ತಿದೆ.

ಬೆಳ್ತಂಗಡಿಯಲ್ಲಿ ಧರ್ಮಸ್ಥಳ, ಉಜಿರೆ, ಲಾಯಿಲ ಜಿ.ಪಂ. ವ್ಯಾಪ್ತಿಯಲ್ಲಿ ಅಧಿಕ ಕೇರಳ ಭಾಷಿಗರು ವಾಸವಿದ್ದಾರೆ. ಕಾರ್ಯಕ್ರಮದಲ್ಲಿ ವಿಶೇಷವಾಗಿ ಕೇರಳ ಚೆಂಡೆ ಪ್ರದರ್ಶನ, ಪೂಕಳಂ, ಕೇರಳ ಹಾಗೂ ಅಂತಾರಾಜ್ಯ ಕಲಾವಿದರಿಂದ ಸಾಂಸ್ಕೃತಿಕ ವೈವಿಧ್ಯ, ಕೇರಳದ ಸಾಂಪ್ರದಾಯಿಕ ಶೈಲಿಯ 32 ಬಗೆಯ ಉಟೋಪಚಾರ ಇರಲಿದೆ. ಈ ಬಾರಿ ಐದನೇ ವರ್ಷದ ಆಚರಣೆ ನಡೆಯುತ್ತಿರುವುದರಿಂದ ಮೂರು ಸಾವಿರ ಜನ ಸೇರುವ ನಿರೀಕ್ಷೆ ಇದೆ ಎಂದು ಶಾಸಕರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬೆಳ್ತಂಗಡಿ ವಿಷು ಕಣಿ ಆಚರಣಾ ಸಮಿತಿಯ ಪದಾಧಿಕಾರಿಗಳಾದ ಪ್ರಸಾದ್, ನೈಮಿಷಾ, ಅನಿಲ್ ಕುಮಾರ್ ಹಾಗೂ ದೀವಿನೇಶ್ ಉಪಸ್ಥಿತರಿದ್ದರು.

Related posts

ಕಲ್ಮಂಜ ಬೆರ್ಕೆಯಲ್ಲಿ ಕೃಷಿ ತೋಟಕ್ಕೆ ಆನೆ ದಾಳಿ: ಅಪಾರ ಪ್ರಮಾಣ ಕೃಷಿ ನಾಶ

Suddi Udaya

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯ ಅಂಗನವಾಡಿ, ಶಾಲೆಗಳಿಗೆ ಸಾವಯವ ಗೊಬ್ಬರ ವಿತರಣೆ

Suddi Udaya

ವಿದ್ಯಾರ್ಥಿನಿಗೆ ಅವಾಚ್ಯ ಶಬ್ದಗಳಿಂದ ನಿಂದನೆ : ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆ: ಅಲ್-ಅಮೀನ್ ಯಂಗ್-ಮೆನ್ಸ್ ಹಳೆಪೇಟೆ ಇದರ ವತಿಯಿಂದ ಸುನ್ನತ್ (ಮುಂಜಿ) ಕಾರ್ಯಕ್ರಮ

Suddi Udaya

ಪೆರೋಡಿತ್ತಾಯಕಟ್ಟೆ ಸ. ಉ. ಪ್ರಾ. ಶಾಲಾ ಮೂವರು ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಬಳಂಜದಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya
error: Content is protected !!