31.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು : ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶಗಳಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತದ ಬಂಡವಾಳ ವೆಚ್ಚ ಅನುದಾನದಡಿ ರೂ.5 ಕೋಟಿ ಅನುದಾನ ಮಂಜೂರಾಗಿದೆ ಎಂದು ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ.

ಬೆಳಾಲು ಗ್ರಾಮಸ್ಥರ ಬಹುಕಾಲದ ಬೇಡಿಕೆಯಂತೆ ಈ ಪ್ರದೇಶದಲ್ಲಿ ಸೇತುವೆ ನಿರ್ಮಾಣದ ಅಗತ್ಯತೆ ಕುರಿತು ಸರ್ಕಾರದ ಗಮನಕ್ಕೆ ತರಲಾಗಿದ್ದು, ಲೋಕೋಪಯೋಗಿ ಇಲಾಖೆ ಮುಖಾಂತರ ಕಾಮಗಾರಿ ಅನುಷ್ಟಾನಗೊಳಿಸಲು ಅಗತ್ಯ ಪ್ರಸ್ತಾವನೆಯನ್ನು ಸಲ್ಲಿಸಲಾಗಿತ್ತು. ಅದರಂತೆ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತದಿಂದ ಅನುದಾನ ಬಿಡುಗಡೆಗೊಂಡಿದೆ.

ಈ ಕಾಮಗಾರಿಯಿಂದ ಸ್ಥಳೀಯ ಸಾರ್ವಜನಿಕರಿಗೆ ಸುಗಮ ಹಾಗೂ ಸುರಕ್ಷಿತ ಸಂಚಾರ ವ್ಯವಸ್ಥೆ ಕಲ್ಪಿಸಲಾಗುವುದರ ಜೊತೆಗೆ ಗ್ರಾಮೀಣ ಭಾಗದ ಅಭಿವೃದ್ಧಿಗೆ ಹೆಚ್ಚಿನ ಉತ್ತೇಜನ ದೊರೆಯಲಿದೆ.

ಈ ಮಹತ್ವದ ಕಾಮಗಾರಿಗೆ ಅನುದಾನ ಮಂಜೂರು ಮಾಡಿದ ರಾಜ್ಯ ಸರ್ಕಾರಕ್ಕೆ ಹಾಗೂ ಲೋಕೋಪಯೋಗಿ ಇಲಾಖೆ ಸಚಿವರಿಗೆ ಶಾಸಕ ಹರೀಶ್ ಪೂಂಜ ಅವರು ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

Related posts

ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ವೇಣೂರು: ಕರಿಮಣೇಲು ಕಾರ್ಯಕ್ಷೇತ್ರದಲ್ಲಿ ಪೌಷ್ಟಿಕ ಆಹಾರ ಮತ್ತು ಆಟಿಡ್ ಒಂಜಿ ದಿನ ಕಾರ್ಯಕ್ರಮ

Suddi Udaya

ಲಾಯಿಲ ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ

Suddi Udaya

ಫೆ 14, 15: ಮುಗೇರಡ್ಕ ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ ರಜತ ಸಂಭ್ರಮದ ಪ್ರಯುಕ್ತ ರಜತ ಪಥ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾವೂರು: ನಮನ ಟ್ರೇಡರ್‍ಸ್ ಶುಭಾರಂಭ

Suddi Udaya

ನ. 23: ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಶಿಲಾನ್ಯಾಸ ಕಾರ್ಯಕ್ರಮ

Suddi Udaya
error: Content is protected !!