23.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇ 15: ಉಜಿರೆ ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ವಿಟಿಯು ವಲಯ ಮತ್ತು ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟ

ಉಜಿರೆ,ದಿ.ಮೇ.13 : ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಅಂತರ್ ಕಾಲೇಜುಗಳ ವಲಯ ಮತ್ತು ರಾಜ್ಯ ಮಟ್ಟದ ಪುರುಷರ ಕಬ್ಬಡ್ಡಿ ಪಂದ್ಯಾವಳಿಯನ್ನು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ಆಶ್ರಯದಲ್ಲಿ ಎಸ್.ಡಿ.ಎಂ ಸ್ವಾಯತ್ತ ಕಾಲೇಜಿನ ಇಂದ್ರಪ್ರಸ್ಥ ಒಳಾಂಗಣದಲ್ಲಿ ಆಯೋಜಿಸಲಾಗಿದೆ.

ಮೇ 15ರಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಂಗಳೂರು ವಲಯದ ಅಂತರ್ ಕಾಲೇಜುಗಳ ಪಂದ್ಯಾಟ ಗಳು ನಡೆಯಲಿವೆ. ಈ ದಿನ ವಲಯದ ಸುಮಾರು 14 ಅಂತರ್ ಕಾಲೇಜುಗಳ ತಂಡವು ಸ್ಪರ್ಧಿಸಲಿದೆ. ಪಂದ್ಯಾವಳಿಯ ಉದ್ಘಾಟನಾ ಕಾರ್ಯಕ್ರಮ ಇಂದ್ರಪ್ರಸ್ಥ ಸಭಾಂಗಣದಲ್ಲಿ ನಡೆಯಲಿದೆ. ಉದ್ಘಾಟನಾ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಎಸ್.ಡಿ.ಎಂ ಸ್ವಾಯತ್ತ ಕಾಲೇಜಿನ ವಿದ್ಯಾರ್ಥಿ, ಪ್ರೊ ಕಬ್ಬಡ್ಡಿ ಖ್ಯಾತಿಯ ರಾಷ್ಟ್ರೀಯ ಕಬಡ್ಡಿ ಆಟಗಾರ ಗಗನ್ ಗೌಡ ಪಾಲ್ಗೋಳ್ಳಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ಅಶೋಕ್ ಕುಮಾರ್ ಟಿ ವಹಿಸಲಿದ್ದಾರೆ.

ಮೇ 18,19 ರಂದು ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟ :

ಎಸ್.ಡಿ.ಎಂ ಸ್ವಾಯತ್ತ ಕಾಲೇಜಿನ ಇದೇ ಇಂದ್ರಪ್ರಸ್ಥ ಸಭಾಂಗಣದಲ್ಲಿ ಮೇ 18 ಮತ್ತು 19 ರಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಅಂತರ್ ವಲಯಗಳ ರಾಜ್ಯ ಮಟ್ಟದ ಪುರುಷರ ಕಬಡ್ಡಿ ಪಂದ್ಯಾವಳಿಗಳು ನಡೆಯಲಿವೆ. ಈ ದಿನ ರಾಜ್ಯದ ಬೆಂಗಳೂರು, ಬೆಳಗಾವಿ, ಕಲಬುರ್ಗಿ,ಬಳ್ಳಾರಿ ಸೇರಿದಂತೆ ವಿವಿಧ ಜಿಲ್ಲೆಗಳ ಸುಮಾರು 16 ತಂಡಗಳು ಸೆಣಸಾಡಲಿವೆ.

ಈ ದಿನದ ಪಂದ್ಯಾವಳಿಗಳ ಉದ್ಘಾಟನಾ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಅಂತಾರಾಷ್ಟ್ರೀಯ ಕಬ್ಬಡ್ಡಿ ತರಬೇತುದಾರರಾದ ರವೀಂದ್ರ ಶೆಟ್ಟಿ ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಗೌರವ ಉಪಸ್ಥಿತಿಯಲ್ಲಿ ಬೆಳ್ತಂಗಡಿ ವಿಭಾಗದ ಡೆಪ್ಯುಟಿ ರೇಂಜ್ ಅರಣ್ಯ ಅಧಿಕಾರಿ ರಂಜಿತ್ ಕುಮಾರ್ ಎಸ್ ಭಾಗಿಯಾಗಲಿದ್ದಾರೆ. ಈ ದಿನದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್ ವಹಿಸಲಿದ್ದಾರೆ.

ಎಂದು ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಅಶೋಕ್ ಕುಮಾರ್ ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಮತ್ತು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಪ್ರಭಾಕರ್ ಉಪಸ್ಥಿತರಿದ್ದರು.

Related posts

ಕಿನ್ನಿಗೋಳಿಯ ಐತಿಹಾಸಿಕ ಜಯದ ರೂವಾರಿ ಮಡಂತ್ಯಾರಿನ ಜೋಯೇಲ್ ಮೆಂಡೋನ್ಸಾ

Suddi Udaya

ವ್ಯವಹಾರ ಆಡಳಿತ ನಿರ್ವಹಣೆ ಯಲ್ಲಿ ಕೃತಕ ಬುದ್ಧಿಮತ್ತೆ ಮತ್ತು ವೈಜ್ಞಾನಿಕ ಆವಿಷ್ಕಾರಗಳು ಅವಕಾಶಗಳನ್ನೂ ಸೃಷ್ಟಿಸುತ್ತದೆ ” ಎನ್ನುವ ವಿಚಾರದ ಕುರಿತು ಉಪನ್ಯಾಸ ಕಾರ್ಯಕ್ರಮ

Suddi Udaya

ಬದನಾಜೆ ಸರಕಾರಿ ಶಾಲೆಯಲ್ಲಿ ಸುಜ್ಞಾನ ನಿಧಿ ಯೋಜನೆಗೆ ಚಾಲನೆ

Suddi Udaya

ಕಡಿರುದ್ಯಾವರ: ರಸ್ತೆಗೆ ಬಿದ್ದ ಮರ

Suddi Udaya

ಬೆಳ್ತಂಗಡಿ : ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಆಗಿ ಕಿಶೋರ್ ಪಿ ನೇಮಕ

Suddi Udaya

ಬೆಳ್ತಂಗಡಿಗೆ ಲಗ್ಗೆ ಇಟ್ಟ ಅತ್ಯಾಧುನಿಕ ‘ಫೋರ್ಸ್ ಅರ್ಬಾನಿಯಾ’-ಐಷಾರಾಮಿ ಪ್ರಯಾಣದ ಹೊಸ ಪರ್ವ ಆರಂಭ

Suddi Udaya
error: Content is protected !!