23.9 C
ಪುತ್ತೂರು, ಬೆಳ್ತಂಗಡಿ
September 30, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಸಾಧಕರು

ಅಶಕ್ತರ ಪಾಲಿನ ಆಶಾಕಿರಣ ದೀಪಕ್ ಜಿ. ಮಂಗಳೂರು ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿಗೆ ಆಯ್ಕೆ

ಬೆಳ್ತಂಗಡಿ : ಅನಾರೋಗ್ಯ ಪೀಡಿತ ಬಡವರ ಚಿಕಿತ್ಸೆಗೆ ನೆರವು, ಸೂರಿಲ್ಲದ ಬಡ ಕುಟುಂಬಗಳಿಗೆ ಮನೆ ನಿರ್ಮಾಣ, ಉಚಿತ ಆರೋಗ್ಯ ಶಿಬಿರ, ರಕ್ತದಾನ ಶಿಬಿರ, ಸರ್ಕಾರಿ ಶಾಲೆಗಳ ಶೌಚಾಲಯ ಸ್ವಚ್ಛತಾ ಅಭಿಯಾನ ಹೀಗೆ ಹತ್ತು ಹಲವು ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಬೆಳ್ತಂಗಡಿಯ ಸಮಾಜ ಸೇವಕ ದೀಪಕ್ ಜಿ. ಅವರು ಮಂಗಳೂರು ಪ್ರೆಸ್ ಕ್ಲಬ್‌ನ 2025-26ನೇ ಸಾಲಿನ ವಾರ್ಷಿಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ನೇತೃತ್ವದ ಸಮಿತಿ ಆಯ್ಕೆ ನಡೆಸಿದ್ದು, ಪ್ರಶಸ್ತಿಯು 10,001 ರೂ.ನಗದು, ಪ್ರಶಸ್ತಿ ಫಲಕ , ಸ್ಮರಣಿಕೆ ಒಳಗೊಂಡಿದೆ. ಮೇ 24ರಂದು ಮಂಗಳೂರಿನ ರೆಡ್ ಕ್ರಾಸ್ ಶತಮಾನೋತ್ಸವ ಭವನದಲ್ಲಿ ನಡೆಯಲಿರುವ ಮಂಗಳೂರು ಪ್ರೆಸ್ ಕ್ಲಬ್ ದಿನಾಚರಣೆಯಲ್ಲಿ ದೀಪಕ್ ಜಿ. ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರೆಸ್ ಕ್ಲಬ್ ನ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಸೋಣಂದೂರು: ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿ

Suddi Udaya

ಮೇ 28: ಮಿತ್ತಬಾಗಿಲು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶಿಲಾಮಯ ಧ್ವಜಸ್ತಂಭ

Suddi Udaya

ಬೆಳ್ತಂಗಡಿಯ ಯುವ ನ್ಯಾಯವಾದಿ ಪ್ರಜ್ವಲ್ ನಿಧನ

Suddi Udaya

ಕುವೆಟ್ಟು: ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಹರಿದ ಮಳೆ ನೀರು

Suddi Udaya

ಕುಕ್ಕೇಡಿ ಡಾ. ಬಿ. ಆರ್ ಅಂಬೇಡ್ಕರ್ ಭವನದ ಮುಂದುವರಿದ ಕಾಮಗಾರಿ ಗೆ ಹೆಚ್ಚುವರಿ ರೂ.50 ಲಕ್ಷ ಅನುದಾನ ಮಂಜೂರು: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya

ಪದ್ಮುಂಜ ಸ.ಪ್ರೌ. ಶಾಲೆಯಲ್ಲಿ ಸಮಾಜ ವಿಜ್ಞಾನ ವಿಷಯ ವೇದಿಕೆಯ ಸಮಾಲೋಚನಾ ಸಭೆ

Suddi Udaya
error: Content is protected !!