31.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವ್ಯಸನ ಮುಕ್ತ ಅಭಿಯಾನ ಕಾರ್ಯಕ್ರಮ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿಯ ಯುವ ರೆಡ್ ಕ್ರಾಸ್ ಘಟಕ, ರೋವರ್ಸ್- ರೆಂಜರ್ಸ್ ಘಟಕ, ರಾಷ್ಟ್ರೀಯ ಸೇವಾ ಯೋಜನೆ ಘಟಕ ಇವುಗಳ ಜೊತೆಗೆ ಮಂಗಳೂರಿನ ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್, ಸೇವಾ ಭಾರತಿ ಮತ್ತು ಕೇಶವ ಸ್ಮೃತಿ ಸಂವರ್ಧನ ಸಮಿತಿ ಇವುಗಳ ಸಂಯುಕ್ತ ಆಶಯದಲ್ಲಿ ವಿಶ್ವ ರೆಡ್ ಕ್ರಾಸ್ ದಿನದ ಅಂಗವಾಗಿ ವ್ಯಸನ ಮುಕ್ತ ಅಭಿಯಾನ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮವನ್ನು ಮೂಲತಃ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಪ್ರಕಾಶ್ ಕೋಟ್ಯಾನ್ ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಸುರೇಶ್ ವಿ ಅಧ್ಯಕ್ಷತೆಯನ್ನು ವಹಿಸಿದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಮಂಗಳೂರಿನ ಡಿ ಎಡಿಕ್ಷನ್ ಕೌನ್ಸಿಲರ್ ಡಾ. ಕುಸುಮ್ ತಂತ್ರಿ ಭಾಗವಹಿಸಿ ಮಾದಕ ವಸ್ತುಗಳನ್ನು ತೆಗೆದುಕೊಳ್ಳುವುದರಿಂದ ಆಗುವ ಪರಿಣಾಮಗಳು ಮತ್ತು ಇಂದಿನ ಯುವಜನತೆ ತಮಗೆ ಗೊತ್ತಿಲ್ಲದೆ ಮಾದಕ ವಸ್ತುಗಳಿಗೆ ದಾಸರಾಗುತ್ತಿದ್ದಾರೆ ಎಂಬುದನ್ನು ಅನೇಕ ನೈಜ ಘಟನೆಗಳ ಮೂಲಕ ವಿವರಿಸಿದರು.

ಕಾರ್ಯಕ್ರಮದಲ್ಲಿ ಮಾದಕ ವ್ಯಸನ ಬಾಧೀತರಾಗಿ ಅದರಿಂದ ವಿಮುಖರಾಗಿ ಉತ್ತಮ ಪ್ರಜೆಗಳಾಗಿರುವ ವ್ಯಕ್ತಿಗಳು ತಮ್ಮ ಅನುಭವಗಳನ್ನು ಹಂಚಿಕೊಂಡರು. ಕಾರ್ಯಕ್ರಮದಲ್ಲಿ ಯುವ ರೆಡ್ ಕ್ರಾಸ್ ಘಟಕದ ಸಂಚಾಲಕರಾದ ಡಾ. ರವಿ ಎಂ ಎನ್ ಸ್ವಾಗತಿಸಿದರು. ರಾಷ್ಟ್ರೀಯ ಸೇವಾ ಯೋಜನೆ ಘಟಕದ ಕಾರ್ಯಕ್ರಮಾಧಿಕಾರಿ ಪ್ರೊ| ಕವಿತಾ ಉಪಸ್ಥಿತರಿದ್ದರು. ಕು| ಚಿತ್ರ ಕಾರ್ಯಕ್ರಮ ನಿರೂಪಿಸಿ, ಕುಮಾರಿ ಸುರಕ್ಷಿತ ವಂದಿಸಿದರು.

Related posts

ಉಜಿರೆ ಅನುಗ್ರಹದಲ್ಲಿ ಪೂರ್ವ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ವಿದ್ಯಾರ್ಥಿ ಸರ್ಕಾರದ ಪ್ರತಿಜ್ಞಾವಿಧಿ ಸ್ವೀಕಾರ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಎನ್‌ಡಿಎ ದಿಗ್ದರ್ಶನ ಕಾರ್ಯಕ್ರಮ: ಜವಾಬ್ದಾರಿಯುತ ಪ್ರಜೆಯಾಗಿ ದೇಶಸೇವೆ ಮಾಡಲು ಲೆ.ಕ. ರೋಹಿತ್ ಪ್ರಕಾಶ್ ರೈ ಕರೆ

Suddi Udaya

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಬೃಹತ್ ಉಚಿತ ಆರೋಗ್ಯ ಹಾಗೂ ಮಹಿಳೆಯರ ಕ್ಯಾನ್ಸ‌ರ್ ತಪಾಸಣಾ ಶಿಬಿರ

Suddi Udaya

ಐತಿಹಾಸಿಕ ಶೋಭಾಯಾತ್ರೆ “ಧರ್ಮಯಾನ” ಭಕ್ತಿಯ ಅಪೂರ್ವ ಯಾತ್ರೆ: ಮೋಹನ್ ಕುಮಾರ್

Suddi Udaya

ಶಿಬರಾಜೆ ಪರಪ್ಪು ಶ್ರೀ ದುರ್ಗಾ ಪರಮೇಶ್ವರಿ ಭಜನಾ ಮಂಡಳಿಯ ಮಕ್ಕಳಿಗೆ ದಾನಿಗಳಿಂದ ಶಾಲು ಮತ್ತು ತಾಳ ವಿತರಣೆ

Suddi Udaya
error: Content is protected !!