23.7 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶುಭಾರಂಭಸಂಘ-ಸಂಸ್ಥೆಗಳು

ಹತ್ಯಡ್ಕ ಪ್ರಾ.ಕೃ.ಪ. ಸಹಕಾರ ಸಂಘದ ನೂತನ “ಮುದ್ದಿಗೆ ಶಾಖೆ” ಉದ್ಘಾಟನೆ

ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನೂತನ “ಮುದ್ದಿಗೆ ಶಾಖೆ”ಯ ಉದ್ಘಾಟನಾ ಸಮಾರಂಭವು ಮೇ 14 ರಂದು ಹತ್ಯಡ್ಕ ಮುದ್ದಿಗೆ ದಿವಾಕರ ತಾಮ್ಹನ್ ಕಾರ್‌ರವರ ಕಟ್ಟಡದಲ್ಲಿ ನಡೆಯಿತು.

ಉದ್ಘಾಟನೆಯನ್ನು ವಿಧಾನಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ನೆರವೇರಿಸಿದರು.. ಅಧ್ಯಕ್ಷತೆಯನ್ನು ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರಾಘವೇಂದ್ರ ನಾಯಕ್ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ದ. ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ , ಅರಸಿನಮಕ್ಕಿ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಸುಧೀರ್ ಕುಮಾರ್ ಎಮ್.ಎಸ್., ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮಾಜಿ ಅಧ್ಯಕ್ಷರಾದ ಶ್ರೀಕರ ಭಿಡೆ, ಎಂ. ಕೇಶವ ರಾವ್ , ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮಾಜಿ ನಿರ್ದೇಶಕರು ಹೆಚ್. ಸುಂದರ ತುಂಬೆತಡ್ಕ, ಬಾಲಕೃಷ್ಣ ರೈ ಕೃಷಿಕರು, ಮಾಜಿ ತಾಲೂಕು ಪಂಚಾಯತ್ ಸದಸ್ಯ ವಾಮನ ತಾಮ್ಹನ್‌ಕಾರ್, ದಿವಾಕರ ತಾಮ್ಹನ್‌ಕಾರ್ ಕಟ್ಟಡ ಮಾಲಕರು, ಹತ್ಯಡ್ಕ ಸಹಕಾರಿ ಸಂಘದ ಉಪಾಧ್ಯಕ್ಷ ರಾಜು ಕೆ. , ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಟಿ. ರವಿಚಂದ್ರ ರಾವ್, ಡಿಸಿಸಿ ಬ್ಯಾಂಕ್‌ ಪ್ರತಿನಿಧಿ ಸಿರಾಜುದ್ದೀನ್ ಹಾಗೂ ನಿರ್ದೇಶಕರು, ಸಿಬ್ಬಂದಿಗಳು ಭಾಗವಹಿಸಿದ್ದರು.

ನಿರ್ದೇಶಕ ರತೀಶ್‌ ಬಿ. ಸ್ವಾಗತಿಸಿದರು. ಉಪ ಕಾರ್ಯದರ್ಶಿ ಹರಿಣಾಕ್ಷಿ ಕಾರ್ಯಕ್ರಮ ನಿರೂಪಿಸಿದರು. ನಿರ್ದೇಶಕ ಬೇಬಿ ಕಿರಣ್‌ ವಂದಿಸಿದರು.

Related posts

ಕಲ್ಲೇರಿಯಲ್ಲಿ ಜನಔಷಧಿ ಕೇಂದ್ರ ಶುಭಾರಂಭ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಉತ್ತಮ ಯಂತ್ರೋಪಕರಣ ಖರೀದಿ ಪ್ರಶಸ್ತಿ

Suddi Udaya

ಪ್ರೊ. ನಾವುಜಿರೆ ನಿಧನಕ್ಕೆ ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ. ಯದುಪತಿ ಗೌಡರಿಂದ ಸಂತಾಪ

Suddi Udaya

ನಾಲ್ಕು ರೋಟರಿ ಸಮುದಾಯ ದಳಗಳ (ಆರ್. ಸಿ.ಸಿ) ಪದಗ್ರಹಣ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಯುಗಾದಿ ಹಬ್ಬದ ಸಂಭ್ರಮ

Suddi Udaya

ಬೆಳ್ತಂಗಡಿಯಲ್ಲಿ ವಿಜಯ ಸಂಕಲ್ಪ ಯಾತ್ರೆ

Suddi Udaya
error: Content is protected !!