23.9 C
ಪುತ್ತೂರು, ಬೆಳ್ತಂಗಡಿ
September 30, 2026
ಚಿತ್ರ ವರದಿವರದಿಶಿಕ್ಷಣ ಸಂಸ್ಥೆ

ಎಲ್ ಸಿ ಆರ್ ಇಂಡಿಯನ್ ಪದವಿ ವಿಭಾಗದಲ್ಲಿ ಸಾಂಪ್ರದಾಯಿಕ ದಿನಾಚರಣೆ

ಕಕ್ಯಪದವು : ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ ನಡೆಸುತ್ತಿರುವ ಎಲ್.ಸಿ.ಆರ್ ಇಂಡಿಯನ್ ಪದವಿ ಕಾಲೇಜಿನಲ್ಲಿ ಮೇ 14ರಂದು ವಿದ್ಯಾರ್ಥಿಗಳಿಗಾಗಿ ಸಾಂಪ್ರದಾಯಿಕ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಕಾರ್ಯಕ್ರಮವು ದೀಪ ಬೆಳಗಿಸುವುದರ ಮೂಲಕ ಆರಂಭವಾಯಿತು. ವಿದ್ಯಾರ್ಥಿಗಳಲ್ಲಿ ಭಾರತೀಯ ಸಂಸ್ಕೃತಿ, ಸಂಪ್ರದಾಯ, ಐಕ್ಯತೆ ಹಾಗೂ ಸೃಜನಾತ್ಮಕತೆಯನ್ನು ಬೆಳೆಸುವ ಉದ್ದೇಶದಿಂದ ಅಂತಿಮ ವಿಭಾಗದ “ಪವರ್ ಸ್ಟ್ರೈಕರ್ಸ್” ವಿದ್ಯಾರ್ಥಿ ತಂಡವು ವಿವಿಧ ಚಟುವಟಿಕೆಗಳನ್ನು ನಡೆಸಿಕೊಟ್ಟು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿತು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸಾಂಪ್ರದಾಯಿಕ ಉಡುಪು ಧರಿಸಿ ಭಾರತೀಯ ಪರಂಪರೆಯ ವೈಭವವನ್ನು ಅನಾವರಣಗೊಳಿಸಿದರು. ವಿವಿಧ ಮನರಂಜನಾ ಚಟುವಟಿಕೆಗಳು ಹಾಗೂ ಆಟಗಳು ವಿದ್ಯಾರ್ಥಿಗಳಲ್ಲಿ ಉತ್ಸಾಹ ಮತ್ತು ಸಂಭ್ರಮವನ್ನು ಹೆಚ್ಚಿಸಿತು.

ವಿದ್ಯಾರ್ಥಿಗಳು ಉತ್ಸಾಹದಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿ ದಿನಾಚರಣೆಯನ್ನು ನೆನಪಿನ ಕ್ಷಣವನ್ನಾಗಿ ಮಾಡಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೊ, ಸಂಯೋಜಕರಾದ ಯಶವಂತ್ ಜಿ ನಾಯಕ್ ವಿಭಾಗದ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿ ದಿನಾಚರಣೆಯನ್ನು ಇನ್ನಷ್ಟು ವಿಶೇಷಗೊಳಿಸಿದರು.
ಪ್ರಥಮ ಬಿ.ಕಾಂ ವಿದ್ಯಾರ್ಥಿನಿ ರಫೀದಾ ಸ್ವಾಗತಿಸಿ,ಅಪೇಕ್ಷಾ ದ್ವಿತೀಯ ಬಿ.ಕಾಂ ವಂದಿಸಿದರು. ಸುಪ್ರಿಯಾ ತೃತೀಯ ಬಿಕಾಂ ಕಾರ್ಯಕ್ರಮ ನಿರೂಪಿಸಿದರು.

Related posts

ಹಿರಿಯ ಪತ್ರಕರ್ತ ಪ್ರೊ. ನಾ ’ವುಜಿರೆ’ಯವರಿಗೆ ಬೆಳ್ತಂಗಡಿ ಪತ್ರಕರ್ತರ ಸಂಘದಿಂದ ನುಡಿ ನಮನ

Suddi Udaya

ರಾಜ್ಯಮಟ್ಟದ ಶೈಕ್ಷಣಿಕ ಅರ್ಹತಾ ಪರೀಕ್ಷೆಯಲ್ಲಿ ಎಸ್ ಡಿ ಎಂ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ಭಾರಿ ಸಾಧನೆ

Suddi Udaya

ಜಿಲ್ಲಾ ಕಾರಾಗೃಹದಲ್ಲಿ ಯೋಗ ಬೋಧನೆ

Suddi Udaya

ಬಂಗೇರ ನಿಧನಕ್ಕೆ ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಹರೀಶ್ ಪೂಜಾರಿ ಸಂತಾಪ

Suddi Udaya

ಎಸ್.ಡಿ.ಎಮ್.ಪದವಿ ಪೂರ್ವ ಕಾಲೇಜು: ಸ್ಕಾರ್ಫ್ ಡೇ ಆಚರಣೆ

Suddi Udaya

ನಾರಾವಿ ಕಾಲೇಜಿನಲ್ಲಿ ಅಂತರ್ ತರಗತಿ ಕ್ವಿಜ್ ಸ್ಪರ್ಧೆ

Suddi Udaya
error: Content is protected !!