31.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ವಿಟಿಯು ಮಂಗಳೂರು ವಲಯ ಕಬಡ್ಡಿ ಪಂದ್ಯಾಟಕ್ಕೆ ಚಾಲನೆ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ಆಶ್ರಯದಲ್ಲಿ ಎಸ್.ಡಿ.ಎಂ ಸ್ವಾಯತ್ತ ಕಾಲೇಜಿನ ಇಂದ್ರಪ್ರಸ್ಥ ಒಳಾಂಗಣದಲ್ಲಿ ಆಯೋಜಿಸಲಾದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಮಂಗಳೂರು ವಲಯ ಅಂತರ್ ಕಾಲೇಜುಗಳ ಪುರುಷರ ಕಬಡ್ಡಿ ಪಂದ್ಯಾಟಕ್ಕೆ ಚಾಲನೆ ನೀಡಲಾಯಿತು.

ಸಭಾ ಕಾರ್ಯಕ್ರಮದಲ್ಲಿ ಎಸ್.ಡಿ.ಎಂ ಸ್ವಾಯತ್ತ ಕಾಲೇಜಿನ ಹಿರಿಯ ವಿದ್ಯಾರ್ಥಿ, ಪ್ರೊ ಕಬಡ್ಡಿ ಖ್ಯಾತಿಯ ರಾಷ್ಟ್ರೀಯ ಕಬಡ್ಡಿ ಆಟಗಾರ ಗಗನ್ ಗೌಡ ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿದರು. ಬಳಿಕ ಮಾತನಾಡಿ, ಕ್ರೀಡೆ ದೈಹಿಕ ಆರೋಗ್ಯವನ್ನು ವೃದ್ಧಿಸುವ ಜೊತೆಗೆ ಮಾನಸಿಕ ಕ್ಷಮತೆಯನ್ನು ಹೆಚ್ಚಿಸುತ್ತದೆ. ಕ್ರೀಡಾಳುಗಳು ಪ್ರತಿಭೆ ಮತ್ತು ಕೌಶಲ್ಯದ ಜೊತೆಗೆ ಶಿಸ್ತನ್ನು ಪಾಲಿಸಬೇಕು. ಸ್ಪರ್ಧಾಳುಗಳು ಕ್ಷಣಿಕ ಜಯದ ಸಂಭ್ರಮಕ್ಕೆ ಸೀಮಿತರಾಗದೆ ನಿರಂತರ ಪ್ರಯತ್ನ ಮತ್ತು ಪರಿಶ್ರಮದಿಂದ ಹೆಜ್ಜೆ ಹಾಕಿದಾಗ ಯಶಸ್ಸು ಸಾಧ್ಯವಾಗುತ್ತದೆ. ಇದು ನಮ್ಮ ವ್ಯಕ್ತಿತ್ವ ಮತ್ತು ಭವಿಷ್ಯವನ್ನು ರೂಪಿಸುತ್ತದೆ ಎಂದು ಕ್ರೀಡಾ ಪಟುಗಳಿಗೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಅಭ್ಯಾಗತರಾಗಿ ಉಪಸ್ಥಿತರಿದ್ದ ರಾಷ್ಟ್ರೀಯ ಮಟ್ಟದ ತೀರ್ಪುಗಾರರಾದ ಕೃಷ್ಣಾನಂದ ರಾವ್ ಮಾತನಾಡಿ, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಿಂದ ಪ್ರಾಯೋಜಿಸಲ್ಪಡುವ ಕ್ರೀಡಾಕೂಟಗಳ ಪೈಕಿ ಒಂದಲ್ಲ ಒಂದು ಕ್ರೀಡೆಯನ್ನು ಎಸ್.ಡಿ.ಎಂ ಆಡಳಿತ ಮಂಡಳಿಯ ಸಹಕಾರದಿಂದ ಉಜಿರೆಯ ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯ ಆಯೋಜಿಸಿಕೊಂಡು ಬಂದಿದೆ. ಪುರುಷರ ಕಬಡ್ಡಿ ಪಂದ್ಯಾಟವನ್ನು ಎಸ್.ಡಿ.ಎಂ ಸಂಸ್ಥೆ ಎರಡನೇ ಬಾರಿ ನಡೆಸಿಕೊಡುತ್ತಿದೆ. ರಾಷ್ಟ್ರ ಮಟ್ಟದಲ್ಲಿ ಕಬ್ಬಡಿ ಕ್ರೀಡೆಗೆ ಇಂದು ವಿಶೇಷ ಮನ್ನಣೆ ದೊರೆತಿದೆ. ಒಲಿಂಪಿಕ್ಸ್ ನಂತಹ ಕ್ರೀಡಾ ಕೂಟಗಳಲ್ಲಿ ಮುಂದೊಂದು ದಿನ ಕಬ್ಬಡಿ ಪ್ರಜ್ವಲಿಸಿಬೇಕು. ಪ್ರೋ ಕಬ್ಬಡಿಯಂತ ಪಂದ್ಯಾವಳಿಗಳು ಆರಂಭಗೊಂಡು ಪ್ರೇಕ್ಷಕರಲ್ಲಿ ಹಾಗು ಕ್ರೀಡಾಪಟುಗಳಲ್ಲಿ ಕಬ್ಬಡಿ ಮೇಲಿನ ಆಸಕ್ತಿಯನ್ನು ಹೆಚ್ಚಿಸಿದೆ. ಇಂತಹ ಪ್ರೋ ಕಬ್ಬಡಿ ಕ್ರೀಡಾ ಕ್ಷೇತ್ರಕ್ಕೆ ಎಸ್.ಡಿ.ಎಂ ಸಂಸ್ಥೆಯ 6 ವಿದ್ಯಾರ್ಥಿಗಳು ಆಯ್ಕೆಗೊಂಡು ಭಾಗವಹಿಸಿದ್ದಾರೆ ಎಂಬುವುದು ಹೆಮ್ಮೆಯ ಸಂಗತಿ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಅಶೋಕ್ ಕುಮಾರ್ ಟಿ ಮಾತನಾಡಿ, ಕಬ್ಬಡಿ ಕ್ರೀಡೆ ವಿಶೇಷ ಸಾಮಾರ್ಥ್ಯ ಮತ್ತು ಕೌಶಲ್ಯದಿಂದ ಸಾಗಿಬರುವ ಆಟ. ಕ್ರೀಡೆಯ ಮೇಲಿನ ಆಸಕ್ತಿಯೇ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕ ಎಂದು ಕ್ರೀಡಾ ಪಟುಗಳಿಗೆ ಶುಭ ಹಾರೈಸಿದರು.

ಮಂಗಳೂರು ವಲಯದ ಅಂತರ್ ಕಾಲೇಜು ಪುರುಷರ ಕಬಡ್ಡಿ ಪಂದ್ಯಾವಳಿಯಲ್ಲಿ ಉಜಿರೆಯ ತಾಂತ್ರಿಕ ಮಹಾವಿದ್ಯಾಲಯ, ಮೂಡುಬಿದಿರೆಯ ಆಳ್ವಾಸ್, ಸುಳ್ಯದ ಕೆವಿಜಿ , ಮಂಗಳೂರಿನ ಕೆನರಾ , ಎಮ್ ಐಟಿ ಕುಂದಾಪುರ, ವಿವೇಕಾನಂದ ಪುತ್ತೂರು ತಾಂತ್ರಿಕ ಮಹಾವಿದ್ಯಾಲಯ ಸೇರಿದಂತೆ ಸುಮಾರು 14 ತಂಡಗಳು ಭಾಗವಹಿಸಿದ್ದವು.

ಕಾರ್ಯಕ್ರಮದ ವೇದಿಕೆಯಲ್ಲಿ ಎಸ್.ಡಿ.ಎಂ ಕ್ರೀಡಾ ಸಂಘದ ಕಾರ್ಯದರ್ಶಿ ರಮೇಶ್ ಹಾಗು ಉಜಿರೆಯ ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯ ದೈಹಿಕ ಶಿಕ್ಷಣ ನಿರ್ದೇಶಕ ಪ್ರಭಾಕರ್ ಉಪಸ್ಥಿತರಿದ್ದರು. ಉದ್ಘಾಟನಾ ಸಮಾರಂಭದಲ್ಲಿ ಜಿಲ್ಲೆಯ ವಿವಿಧ ಕಾಲೇಜಿನ ತಂಡಗಳು ಸೇರಿದಂತೆ ಉಪನ್ಯಾಸಕರು, ವಿದ್ಯಾರ್ಥಿಗಳು, ಸಿಬ್ಬಂದಿ ವರ್ಗದವರು ಭಾಗಿಯಾಗಿದ್ದರು. ಕಾರ್ಯಕ್ರಮವನ್ನು ಉಜಿರೆಯ ಎಸ್ .ಡಿ.ಎಂ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳಾದ ಕಲ್ಪಿತ ಹಾಗೂ ಅನಿಶ್ ಕಲ್ಮಾಡಿ ನಿರೂಪಿಸಿ, ವಂದಿಸಿದರು. ಪುರುಷರ ಕಬಡ್ಡಿ ಪಂದ್ಯಾಟವನ್ನು ದೈಹಿಕ ಶಿಕ್ಷಣ ಉಪನ್ಯಾಸಕ ಪ್ರಭಾಕರ್ ಸಂಯೋಜಿಸಿ, ಉಪನ್ಯಾಸಕರಾದ ಡಾ. ರಜತ, ಡಾ. ಬಸವ ಮತ್ತು ಡಾ. ನವೀನ್ ಸಹಕರಿಸಿದರು.

Related posts

ಮಚ್ಚಿನ : ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಭೇಟಿ

Suddi Udaya

ಎಸ್.ಡಿ.ಎಂ ಕಾಲೇಜಿನಲ್ಲಿ ಕಲಾನುಸಂಧಾನ ಶಿಬಿರ

Suddi Udaya

ಕಿಶೋರ್ ಕುಮಾರ್ ಬೊಟ್ಯಾಡಿ ನಿರ್ಮಾಣದಲ್ಲಿ ಮೂಡಿ ಬಂದಿರುವ “ELLA” ಚಲನಚಿತ್ರ ಬಿಡುಗಡೆ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ನಿಡ್ಲೆ ಸಹಕಾರಿ ಸಂಘದ ಅಧ್ಯಕ್ಷ ಕೆ. ರಮೇಶ್ ರಾವ್ ಬೆಂಬಲ

Suddi Udaya

ಚಾರ್ಮಾಡಿ ಜಲಾಲಿಯಾ ನಗರ ಮಸ್ಜಿದ್‌‌ನ ಆಡಳಿತ ಮಂಡಳಿಯನ್ನು ವಜಾಗೊಳಿಸಿದ ವಕ್ಫ್ ಮಂಡಳಿ: ಸರಕಾರದಿಂದ ಆಡಳಿತಾಧಿಕಾರಿ ನೇಮಕ

Suddi Udaya

ಪುಂಜಾಲಕಟ್ಟೆ-ಚಾರ್ಮಾಡಿ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಸುವ ನೌಕರರಿಗೆ 3 ತಿಂಗಳ ಸಂಬಳ ನೀಡದೆ ಸತಾಯಿಸುತ್ತಿರುವ ಡಿಪಿ ಕಂಪನಿ: ಕಾರ್ಮಿಕರ ಆಕ್ರೋಶ, ಪ್ರತಿಭಟನೆ

Suddi Udaya
error: Content is protected !!