31.2 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಟಿ.ವಿ ಟೆಕ್ನಿಷಿಯನ್ ತರಬೇತಿ ಸಮಾರೋಪ ಸಮಾರಂಭ

ಉಜಿರೆ: ಇಂದಿನ ಮತ್ತು ಮುಂದಿನ ದಿನಗಳಲ್ಲಿ ಕೌಶಲ್ಯಕ್ಕೆ ಹೆಚ್ಚಿನ ಮಹತ್ವ ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ನಡೆದ ಟಿ.ವಿ ಟೆಕ್ನಿಷಿಯನ್ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭವು ಉತ್ಸಾಹಭರಿತ ವಾತಾವರಣದಲ್ಲಿ ನೆರವೇರಿತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಶ್ರೀಮತಿ ಕರ್ಪಗಮ್, ಭಾರತೀಯ ರಿಸರ್ವ್ ಬ್ಯಾಂಕ್, ಮುಂಬೈಯ ವಿಭಾಗೀಯ ಮಹಾ ಪ್ರಬಂಧಕರಾದ ಭಾಗವಹಿಸಿ ಮಾತನಾಡಿದರು. ಇಂದಿನ ಹಾಗೂ ಮುಂದಿನ ದಿನಗಳಲ್ಲಿ ಕೌಶಲ್ಯಕ್ಕೆ ಹೆಚ್ಚಿನ ಮಹತ್ವವಿದ್ದು, ತಾಂತ್ರಿಕ ಜ್ಞಾನ ಹೊಂದಿದ ಯುವಕರಿಗೆ ಉತ್ತಮ ಅವಕಾಶಗಳು ಲಭ್ಯವಿವೆ ಎಂದು ಹೇಳಿದರು. ತರಬೇತಿಗಾರರು ತಮ್ಮ ಕೌಶಲ್ಯವನ್ನು ನಿರಂತರವಾಗಿ ನವೀಕರಿಸಿಕೊಂಡು ಪ್ರಾಮಾಣಿಕತೆ ಮತ್ತು ಶಿಸ್ತಿನೊಂದಿಗೆ ಕಾರ್ಯನಿರ್ವಹಿಸಿದರೆ ಜೀವನದಲ್ಲಿ ಯಶಸ್ಸು ಸಾಧಿಸಬಹುದು ಎಂದು ತಿಳಿಸಿದರು. ಬಳಿಕ ತರಬೇತಿಗಾರರಿಗೆ ಪ್ರಮಾಣಪತ್ರಗಳನ್ನು ವಿತರಿಸಿ ಶುಭ ಹಾರೈಸಿದರು.

RUDSETI ಸಂಸ್ಥೆಯ ನಿರ್ದೇಶಕ ಅಜಯ್ ಅತಿಥಿಗಳನ್ನು ಸ್ವಾಗತಿಸಿ, ತರಬೇತಿ ಕಾರ್ಯಕ್ರಮದ ಸಂಕ್ಷಿಪ್ತ ಅವಲೋಕನವನ್ನು ನೀಡಿದರು ಹಾಗೂ ತರಬೇತಿಯ ಮಹತ್ವವನ್ನು ವಿವರಿಸಿದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕಿ ಶ್ರೀಮತಿ ಮಧುರಿ ಉಪಸ್ಥಿತರಿದ್ದರು.
ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್ ಪಿ.ವಿ. ಕಾರ್ಯಕ್ರಮ ನಿರ್ವಹಿಸಿದರು. ಹಿರಿಯ ಉಪನ್ಯಾಸಕ ಕೆ. ಕರುಣಾಕರ ಜೈನ್ ಧನ್ಯವಾದವಿತ್ತರು.

ಕಾರ್ಯಕ್ರಮದಲ್ಲಿ ಪ್ರಭಾ ಹಾಗೂ ಪೂಜಾ ಪ್ರಾರ್ಥನೆ ನೆರವೇರಿಸಿದರು. ತರಬೇತಿಗಾರರಾದ ಬಸಯ್ಯ ಮತ್ತು ಸಾಂಡ್ರ ಡಿ’ಸೋಜಾ ತಮ್ಮ ತರಬೇತಿ ಅನುಭವಗಳನ್ನು ಹಂಚಿಕೊಂಡು ಸಂಸ್ಥೆಯತ್ತ ಕೃತಜ್ಞತೆ ಸಲ್ಲಿಸಿದರು.

Related posts

ಭಾರಿ ಮಳೆಗೆ ಸುಲ್ಕೇರಿ ಅಣ್ಣು ಪೂಜಾರಿ ರವರ ಮನೆ ಸಂಪೂರ್ಣ ಹಾನಿ: ಸ್ಥಳಕ್ಕೆ ರಕ್ಷಿತ್ ಶಿವಾರಂ ಭೇಟಿ

Suddi Udaya

ಗುರುವಾಯನಕೆರೆ: ಸುಧಾಕರ ನಾಯಕ್ ನಿಧನ

Suddi Udaya

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಶಿಕ್ಷಣದಲ್ಲಿ ತಂತ್ರಜ್ಞಾನ” ಕಾರ್ಯಾಗಾರ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿಆಂತರಿಕ ಗುಣಮಟ್ಟದ ಭರವಸೆ ಕೋಶ ವಾಣಿಜ್ಯ ಮತ್ತು ಹೂಡಿಕೆದಾರರ ಜಾಗೃತಿ ಕಾರ್ಯಾಗಾರ

Suddi Udaya

ಕೆಪಿಎಸ್ ಪುಂಜಾಲಕಟ್ಟೆ ಪದವಿಪೂರ್ವ ವಿಭಾಗದ ಕಾಲೇಜು ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಗೆ ಎಂಟು ಮಂದಿ ನಾಮನಿರ್ದೇಶಿತ ಸದಸ್ಯರ ನೇಮಕ

Suddi Udaya
error: Content is protected !!