31.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಿಸಿ ಕ್ಯಾಮೆರಾ ಮೂಲಕ ಸುಲಭ ಕಾರ್ಯಾಚರಣೆ: ಹೆದ್ದಾರಿ ಬದಿ ತಾತ್ಕಾಲಿಕ ಅಂಗಡಿಯನ್ನು ತೆರವುಗೊಳಿಸಿದ ಪಿಡಿಒ

ಬೆಳ್ತಂಗಡಿ: ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿಡಿಗಲ್- ಸೋಮಂತಡ್ಕ ರಸ್ತೆಯಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿರುವುದು ಸುಲಭ ಕಾರ್ಯಚರಣೆಯೊಂದಕ್ಕೆ ಸಾಕ್ಷಿಯಾಯಿತು.

ಇಂದು (ಮೇ16) ಬೆಳಗ್ಗೆ ಈ ರಾಷ್ಟ್ರೀಯ ಹೆದ್ದಾರಿ ಬದಿ ತಾತ್ಕಾಲಿಕ ಅಂಗಡಿಯೊಂದು ತಲೆ ಎತ್ತುತ್ತಿದ್ದಂತೆ ಸಿಸಿ ಕ್ಯಾಮೆರಾ ಮೂಲಕ ಈ ದೃಶ್ಯಗಳು ಸೆರೆಯಾದವು. ತಮ್ಮ ಮೊಬೈಲ್ ನಲ್ಲಿ ಇದನ್ನು ಗಮನಿಸಿದ ಪಿಡಿಒ ತಕ್ಷಣ ಅಂಗಡಿಯನ್ನು ತೆರವುಗೊಳಿಸುವ ಕಾರ್ಯಚರಣೆ ನಡೆಸಿದರು. ಜನ ವಾಹನ ದಟ್ಟಣೆ ಹೆಚ್ಚುವ ಮೊದಲೇ ಪಂಚಾಯಿತಿ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಅಂಗಡಿಯನ್ನು ತೆರವುಗೊಳಿಸುವ ಕ್ರಮಕೈಗೊಂಡರು. ಹೆದ್ದಾರಿ ಬದಿ ತಾತ್ಕಾಲಿಕ ಅಂಗಡಿಗಳನ್ನು ನಿರ್ಮಿಸಲು ಪಂಚಾಯಿತಿ ಯಾವುದೇ ಅವಕಾಶ ನೀಡುವುದಿಲ್ಲ. ಇಂತಹ ಅಂಗಡಿಗಳು ಗ್ರಾಮ ಪಂಚಾಯತಿ ವ್ಯಾಪ್ತಿಯ ರಸ್ತೆ ಬದಿ ಕಂಡು ಬಂದರೆ ತಕ್ಷಣ ಮಾಹಿತಿ ನೀಡುವಂತೆ ಪಿಡಿಒ ಗಾಯತ್ರಿ ತಿಳಿಸಿದ್ದಾರೆ.

ನಿಡಿಗಲ್-ಸೋಮಂತಡ್ಕ ಪ್ರದೇಶದ 4 ಕಿ.ಮೀ. ರಸ್ತೆ ವ್ಯಾಪ್ತಿಯಲ್ಲಿ 5 ಸಿಸಿ ಕ್ಯಾಮರಾಗಳು ಕಾರ್ಯನಿರ್ವಹಿಸುತ್ತಿದ್ದು ಇದು ಅನಗತ್ಯ ಚಟುವಟಿಕೆಗಳಿಗೆ ಕಡಿವಾಣ ಹಾಕಲು ತ್ಯಾಜ್ಯ ತಂದು ಹಾಕುವವರನ್ನು ಗಮನಿಸಲು ಸುಲಭವಾಗಿದೆ ಕಳೆದ ಮೂರು ದಿನಗಳ ಹಿಂದೆ ಅರಣ್ಯ ಪ್ರದೇಶದ ಮೂಲಕ ಹಾದು ಹೋಗುವ ಈ ರಸ್ತೆಯ 3 ಕಡೆಗಳಲ್ಲಿ ಹೊಸದಾಗಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ.

Related posts

ಬೆಳ್ತಂಗಡಿ : ಸಂಸದ ಕ್ಯಾ.ಬ್ರಿಜೇಶ್ ಚೌಟರವರಿಂದ ಪ್ರಧಾನಮಂತ್ರಿ ಭಾರತೀಯ ಜನ ಔಷಧಿ ಕೇಂದ್ರದ ಉದ್ಘಾಟನೆ, ವಿವಿಧ ಕ್ಷೇತ್ರದ ಸಾಧಕರಿಗೆ ಅಭಿನಂದನೆ ಹಾಗೂ ಉಚಿತ ಮಧುಮೇಹ ಪರೀಕ್ಷಾ ಶಿಬಿರ

Suddi Udaya

ಸೆ.17: ಬೆಳ್ತಂಗಡಿ, ಉಜಿರೆ, ಧಮಸ್ಥಳ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಆರಂಬೊಡಿ: ಮಿಲಾದ್ ಕಾರ್ಯಕ್ರಮ ಪ್ರಯುಕ್ತ ಮೌಲೂದ್ ಪಾರಾಯಣ ನವೀಕೃತ ನೂತನ ಮದರಸ ಕಟ್ಟಡ ಉದ್ಘಾಟನೆ

Suddi Udaya

ಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ತಿಮರೋಡಿ ನಿರೀಕ್ಷಣಾ ಜಾಮೀನು ಆದೇಶ ಮುಂದೂಡಿಕೆ

Suddi Udaya

ಕನ್ಯಾಡಿ : ಶ್ರೀ ರಾಮ ಕ್ಷೇತ್ರದಲ್ಲಿ ಚಂದ್ರಮಂಡಲ ರಥೋತ್ಸವ

Suddi Udaya

ನಿಟ್ಟಡೆ ಕುಂಭ ಶ್ರೀ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!