23.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ – ಮಾಹಿತಿ

ಬೆಳ್ತಂಗಡಿ: ರಾಜ್ಯ ಸರಕಾರದ ಆದೇಶದಂತೆ ರಾಜ್ಯದ ಎಲ್ಲ ಕಡೆಗಳಲ್ಲಿ ವ್ಯಾಪಾರ ವ್ಯವಹಾರ ಮಳಿಗೆಗಳಲ್ಲಿ ಅಳವಡಿಸಲಾಗುವ ನಾಮಫಲಕಗಳಲ್ಲಿ 60% ಕನ್ನಡ ಬರಹ ಇರಬೇಕಾಗಿದ್ದು; ಈ ಆದೇಶದ ಅನುಷ್ಠಾನಕ್ಕೆ ಆಡಳಿತ ವ್ಯವಸ್ಥೆಯನ್ನು ಸ್ಥಳೀಯವಾಗಿ ಸಜ್ಜುಗೊಳಿಸಲು ಬೆಳ್ತಂಗಡಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಮೇ 15ರಂದು ನಡೆದ ತಾಲೂಕಿನ ಗ್ರಾಮ ಪಂಚಾಯತ್‌ಗಳ ಅಭಿವೃದ್ಧಿ ಅಧಿಕಾರಿಗಳ ಸಭೆಯಲ್ಲಿ ಅಗತ್ಯ ಮಾಹಿತಿ ನೀಡಲಾಯಿತು.

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಜಾಗೃತಿ ಸಮಿತಿಯ ಸದಸ್ಯರಾದ ಜೈಕನ್ನಡಮ್ಮ ಪತ್ರಿಕೆಯ ಸಂಪಾದಕ ದೇವಿಪ್ರಸಾದ್ ಸವಿವರವಾಗಿ ಮಾಹಿತಿ ನೀಡುತ್ತಾ ಬೆಳ್ತಂಗಡಿ ತಾಲೂಕಿನಲ್ಲಿ ಎಲ್ಲಕಡೆ ಕನ್ನಡ ನಾಮಫಲಕಗಳ ಕಡ್ಡಾಯ ಅಳವಡಿಕೆಗೆ ಎಲ್ಲ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಸಹಕಾರ ಕೋರಿದರಲ್ಲದೇ, ಗ್ರಾಮ ಪಂಚಾಯತ್ ಮಟ್ಟದಲ್ಲಿ ಈ ವಿಚಾರವಾಗಿ ಜಾಗೃತಿ ಮೂಡಿಸಲು ಅಗತ್ಯ ಕ್ರಮ ಕೈಗೊಳ್ಳೋಣ ಎಂದರು.


ಮುಂದಿನ ದಿನಗಳಲ್ಲಿ ಅಗತ್ಯ ಇರುವ ಗ್ರಾಮ ಪಂಚಾಯತ್ ವ್ಯಾಪ್ತಿಗೆ ವ್ಯಾಪಾರಸ್ಥರಿಗೆ ನಾಮಫಲಕಗಳಲ್ಲಿ ಕನ್ನಡ ಭಾಷೆ ಅಳವಡಿಕೆ ಬಗ್ಗೆ ತಿಳುವಳಿಕೆ ನೀಡಿ ಜಾಗೃತಿ ಮೂಡಿಸಲು ನೀವು ತಿಳಿಸಿದ ದಿನದಂದು ಬಂದು ಜೊತೆ ಸೇರಲು ನಾನು ಸಿದ್ಧ ಎಂದ ದೇವಿಪ್ರಸಾದ್; ಎಲ್ಲರೂ ಒಟ್ಟು ಸೇರಿ ನಮ್ಮ ರಾಜ್ಯದ ಮಾತೃಭಾಷೆ ಕನ್ನಡವನ್ನು ನಮ್ಮ ದೈನಂದಿನ ವ್ಯವಹಾರದಲ್ಲಿ ಬಳಸಲು ನಮ್ಮಿಂದಾದ ಪ್ರಯತ್ನ ಮಾಡುವ ಮೂಲಕ‌ ಮಾತೃಭಾಷೆ ಋಣವನ್ನು ಕಿಂಚಿತ್ತಾದರೂ ತೀರಿಸೋಣ ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್ ಸ್ವಾಗತಿಸಿ, ವಂದಿಸಿದರು.

Related posts

ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜದಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಉಜಿರೆ: ಎಸ್. ಡಿ. ಎಂ ಅಂತರ್ ಕಾಲೇಜು ಗೂಡುದೀಪ ಸ್ಪರ್ಧೆ

Suddi Udaya

ನಯನಾಡು: ಪಿಲಾತಬೆಟ್ಟು ಸಂತ ಜೋಸೆಫರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಲಾಯಿಲ: ಚಾಲಕನ ನಿಯಂತ್ರಣ ತಪ್ಪಿದ ಕಾರು ಕಾಲೇಜಿನ ಕಂಪೌಂಡಿಗೆ ಡಿಕ್ಕಿ

Suddi Udaya

ಎ.07 -17: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವ: ಇಂದು ಮತ್ತು ನಾಳೆ ದೇವಸ್ಥಾನದಲ್ಲಿ ವಿವಿಧ ವೈದಿಕ ಕಾರ್ಯಕ್ರಮ

Suddi Udaya

ಮಚ್ಚಿನ: ಪೆರ್ನೆಡ್ಕ ನಿವಾಸಿ ಜನಾರ್ದನ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

Suddi Udaya
error: Content is protected !!