31.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿಶ್ರುತಿ 2k26’ ಕಾರ್ಯಕ್ರಮ

ಬೆಳ್ತಂಗಡಿ: ಕಾಲೇಜಿನ ಐಕ್ಯುಎಸಿ ಮತ್ತು ಮಾನವಿಕ ಸಂಘ ಇವುಗಳ ಆಶ್ರಯದಲ್ಲಿ ಕಲಾವಿದ ವಿದ್ಯಾರ್ಥಿಗಳಿಗಾಗಿ ವಿಶೃತಿ 2k26 ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಉದ್ಘಾಟನೆಯನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಕಲಾ ವಿಭಾಗದ ಡೀನ್ ಹಾಗೂ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಡಾ. ಭಾಸ್ಕರ್ ಹೆಗಡೆ ಉದ್ಘಾಟಿಸಿ ಮಾತನಾಡಿ ಕಲಾವಿಭಾಗದ ವಿದ್ಯಾರ್ಥಿಗಳಿಗೆ ಉತ್ತೇಜನವನ್ನು ನೀಡಲು ಹಾಗೂ ಅವರ ಪ್ರತಿಭೆಗಳಿಗೆ ರಚನಾತ್ಮಕ ದೃಷ್ಟಿಕೋನವನ್ನು ನೀಡಲು ಈ ರೀತಿಯ ಕಾರ್ಯಕ್ರಮಗಳು ಅತ್ಯಂತ ಉಪಕಾರಿ. ಕಲಾವಿಭಾಗದ ವಿದ್ಯಾರ್ಥಿಗಳು ವಾಣಿಜ್ಯ ಮತ್ತು ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗಿಂತಲೂ ಹೆಚ್ಚಿನ ಅವಕಾಶಗಳನ್ನು ಹೊಂದಿದ್ದಾರೆ ಅವುಗಳನ್ನು ಸದುಪಯೋಗಪಡಿಸಿಕೊಳ್ಳಲು ಈ ರೀತಿಯ ಕಾರ್ಯಕ್ರಮ ಸಹಕಾರಿಯಾಗಿದೆ ಎಂಬುದನ್ನು ಅನೇಕ ಉದಾಹರಣೆಗಳ ಮುಖಾಂತರ ತಿಳಿಸಿದರು.

ಮಾನವಿಕ ಸಂಘದ ಸಂಯೋಜಕರಾದ ಪ್ರೊ. ರೊನಾಲ್ಡ್ ಪ್ರವೀಣ್ ಕೊರಾಯ ಇವರು ಪ್ರಾಸ್ತಾವಿಕವಾಗಿ ಮಾತನಾಡುತ್ತಾ ನಾವು ವಿದ್ಯಾರ್ಥಿಗಳಿಗೆ ಉತ್ತಮವಾದ ಶೈಕ್ಷಣಿಕ ವಾತಾವರಣವನ್ನು ನಿರ್ಮಿಸಿದಾಗ ಅವರು ಉತ್ತಮ ಸಾಧನೆಗಳನ್ನು ಮಾಡಲು ಅನುಕೂಲವಾಗುತ್ತದೆ ಹಾಗಾಗಿ ಈ ರೀತಿಯ ಕಾರ್ಯಕ್ರಮಗಳ ಮುಖಾಂತರ ವಿದ್ಯಾರ್ಥಿಗಳಿಗೆ ಉತ್ತಮವಾದ ಕಲಿಕೆಯ ವಾತಾವರಣವನ್ನು ನಿರ್ಮಾಣ ಮಾಡಲು ಸಾಧ್ಯ ಎಂದು ತಿಳಿಸಿದರು.

ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನ ಅಧಿಕಾರಿ ಪ್ರೊ. ಪದ್ಮನಾಭ ಕೆ., ಅಧ್ಯಕ್ಷತೆಯನ್ನು ವಹಿಸಿ ಇಂದಿನ ಅನೇಕ ಅಧಿಕಾರಿ ವರ್ಗದವರು ಐಎಎಸ್ ಮತ್ತು ಕೆಎಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗುವವರು ಕಲಾವಿಭಾಗದ ವಿದ್ಯಾರ್ಥಿಗಳು ಹೆಚ್ಚು. ಹಾಗಾಗಿ ಕಲಾವಿಭಾಗದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ಮಾಡಲು ಈ ರೀತಿಯ ಕಾರ್ಯಕ್ರಮಗಳು ಅನುಕೂಲಕರ ಎಂದು ತಿಳಿಸಿದರು.

ವೇದಿಕೆಯಲ್ಲಿ ಇತಿಹಾಸ ವಿಭಾಗದ ಮುಖ್ಯಸ್ಥರಾದ ಪ್ರೊ. ಕವಿತಾ ಹಾಗೂ ಸ್ನಾತ್ತಕೋತ್ತರ ವಿಭಾಗದ ಸಂಚಾಲಕರಾದ ಡಾ. ರವಿ ಎಂ ಎನ್. ಉಪಸ್ಥಿತರಿದ್ದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಪ್ರೊ. ಮಾರುತಿ ಅತಿಥಿಗಳನ್ನು ಸ್ವಾಗತಿಸಿ ಉದ್ಘಾಟಕರ ಪರಿಚಯ ಮಾಡಿದರು. ಅಂತಿಮ ಬಿಎ ವಿದ್ಯಾರ್ಥಿ ಜಗದೀಶ್ ಹಾಗೂ ದ್ವಿತೀಯ ಬಿಎ ವಿದ್ಯಾರ್ಥಿನಿ ನಸೀಬಾ ಕಾರ್ಯಕ್ರಮವನ್ನು ನಿರೂಪಿಸಿದರು. ಮಾನವಿಕ ಸಂಘದ ಪದಾಧಿಕಾರಿಗಳಾದ ಚೇತನ್ ಹಾಗೂ ಅರ್ಪಿತ ವೇದಿಕೆಯಲ್ಲಿದ್ದರು. ಅರ್ಪಿತ ವಂದಿಸಿದರು.
ಕಾರ್ಯಕ್ರಮದಲ್ಲಿ ಅಂತರ್ತರಗತಿ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ದ್ವಿತೀಯ ಬಿಕಾಂನ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಯನ್ನು ತಮ್ಮ ಮುಡಿಗೇರಿಸಿಕೊಂಡು, ದ್ವಿತೀಯ ಬಿಎ ವಿದ್ಯಾರ್ಥಿಗಳು ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ಪಡೆದರು.

Related posts

ತಾಲೂಕು ಮಟ್ಟದ ಚೆಸ್ ಪಂದ್ಯಾಟ: ಬೆಳ್ತಂಗಡಿ ಎಸ್.ಡಿ .ಎಮ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಕುಕ್ಕೇಡಿ: ಫಂಡಿಜೆ ಸ.ಹಿ. ಪ್ರಾಥಮಿಕ ಶಾಲೆಯಲ್ಲಿ ಅಜ್ಜ-ಅಜ್ಜಿಯಂದಿರ ದಿನ ಆಚರಣೆ

Suddi Udaya

ಉಜಿರೆ: ಚರ್ಮಗಂಟು ಲಸಿಕೆ ಕಾರ್ಯಕ್ರಮ

Suddi Udaya

ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಮೆಣಸಿನ ವ್ಯಾಪಾರಿಯ ಬೈಕ್ ಕಳವು

Suddi Udaya

ಮಚ್ಚಿನ ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಸಂಪೂರ್ಣ ಸುರಕ್ಷ ಕಾರ್ಡ್ ವಿತರಣೆ

Suddi Udaya
error: Content is protected !!