31.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇ 17: ವೇಣೂರುನಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

ವೇಣೂರು:ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಕುಂಟಿಕಾನ, ಮಂಗಳೂರು , ಎ.ಜೆ. ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ, ಮಂಗಳೂರು ವೇಣೂರು ಗ್ರಾಮ ಪಂಚಾಯತು ಸಹಯೋಗದೊಂದಿಗೆ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವು ಮೇ 17ರಂದು ವೇಣೂರು ಗ್ರಾಮ ಪಂಚಾಯತು ಸಭಾಂಗಣದಲ್ಲಿಬೆಳಿಗ್ಗೆ 09:30 ರಿಂದ ಮಧ್ಯಾಹ್ನ 1ರವರೆಗೆ ನಡೆಯಲಿದೆ.

ಕ್ಯಾನ್ಸ‌ರ್ ತಜ್ಞರು: ಸ್ತನದಲ್ಲಿ ಗೆಡ್ಡೆ ಅಥವಾ ಕಿಬ್ಬೊಟ್ಟೆಯಲ್ಲಿ ಮಾಂಸದ ಮುದ್ದೆಯಂತಹ ಊತ. ಮುಟ್ಟಿನ ಬಳಿಕ ದೀರ್ಘಕಾಲದ ರಕ್ತಸ್ರಾವ ಮತ್ತು ಬಿಳಿ ಮುಟ್ಟು. ಆಗಾಗ ಮರುಕಳಿಸುವ ಕೆಮ್ಮು, ಒರಟು ಧ್ವನಿ, ಆಹಾರ ನುಂಗಲು ಕಷ್ಟವಾಗುವುದು ಕೆನ್ನೆ / ನಾಲಿಗೆಯಲ್ಲಿ ಗುಣವಾಗದ ಹುಣ್ಣು ಅಥವಾ ಬೆಳವಣಿಗೆ. ಅಜೀರ್ಣ, ಹಸಿವು ಕಡಿಮೆಯಾಗುವುದು, ಹೊಟ್ಟೆಯಲ್ಲಿ ಕಸಿವಿಸಿ, ದೇಹತೂಕದಲ್ಲಿ ಗಣನೀಯ ಇಳಿತ. ರಕ್ತಹೀನತೆ, ಆಗಾಗ ಕಾಣುವ ಸೋಂಕುಗಳು, ಮೊಳೆ ನೋವು, ರಕ್ತಸ್ರಾವದ ಕುರುಹುಗಳು.

ಹೃದ್ರೋಗ ತಜ್ಞರು: ಹುಟ್ಟಿನಿಂದ ಬರುವ ಹೃದಯದ ಸಮಸ್ಯೆಯಿಂದ ಬಳಲುತ್ತಿರುವವರು. ಹೃದಯದ ರುಮ್ಯಾಟಿಕ್ ಕಾಯಿಲೆಯಿಂದ ಬಳಲುತ್ತಿರುವವರು. ಹೃದಯದ ಪರಿಧಮನಿಯ ಕಾಯಿಲೆಯಿಂದ ಬಳಲುತ್ತಿರುವವರು. ಬೈಪಾಸ್ ಅಥವಾ ತೆರೆದ ಹೃದಯದ ಶಸ್ತ್ರಚಿಕಿತ್ಸೆ ಅಗತ್ಯವಿರುವ ರೋಗಿಗಳು.

ಶಿಬಿರದಲ್ಲಿ ಚರ್ಮ ರೋಗ, ಕಣ್ಣಿನ ತಪಾಸಣೆ, ಮಕ್ಕಳ ತಪಾಸಣೆ, ಕಿವಿ, ಮೂಗು ಮತ್ತು ಗಂಟಲು ತಪಾಸಣೆಯನ್ನು ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಕರೆಮಾಡಿ : 9741881399

Related posts

ಸ್ವಾತಂತ್ರ್ಯೋತ್ಸವದ ಅಂಗವಾಗಿ ನಗರ ವ್ಯಾಪ್ತಿಯ ಶಾಲೆಯ ವಿದ್ಯಾರ್ಥಿಗಳಿಗೆ ನಡೆದ ಸ್ಪರ್ಧೆಯಲ್ಲಿ ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿಗಳು

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಬಿ. ನಿರಂಜನ್ ಬಾವಂತಬೆಟ್ಟುರವರಿಗೆ ನುಡಿನಮನ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಹೊಸಂಗಡಿಯಲ್ಲಿ ಬೆಂಡೆ ಬೆಳೆಯಲ್ಲಿ ಸಮಗ್ರ ಬೆಳೆ ನಿರ್ವಹಣೆ ತರಬೇತಿ ಕಾರ್ಯಕ್ರಮ

Suddi Udaya

ನಿಡ್ಲೆ ಬಸ್ಟ್ ಸ್ಟಾಂಡ್ ಬಳಿ ಸಂಪೂರ್ಣ ಹದಗೆಟ್ಟ ರಸ್ತೆ: ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡುವಂತೆ ಗ್ರಾಮಸ್ಥರು ಒತ್ತಾಯ

Suddi Udaya

“ದಸ್ಕತ್” ಚಲನಚಿತ್ರಕ್ಕೆ RED FM ತುಳು ಫಿಲ್ಮ್ ಅವಾರ್ಡ್ಸ್‌ನಲ್ಲಿ ಹಲವು ಪ್ರಶಸ್ತಿ

Suddi Udaya
error: Content is protected !!