23.8 C
ಪುತ್ತೂರು, ಬೆಳ್ತಂಗಡಿ
October 8, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ: ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ವಿಜಯೇಂದ್ರ ಟಿ.ಎಚ್ ರವರಿಗೆ ಬೀಳ್ಕೊಡುಗೆ

ಬೆಳ್ತಂಗಡಿ: ಕಳೆದ ಮೂರುವರೆ ವರ್ಷಗಳಿಂದ ಬೆಳ್ತಂಗಡಿ ನ್ಯಾಯಾಲಯದಲ್ಲಿ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾಗಿ ಕಾರ್ಯನಿರ್ವಹಿಸಿ ಇದೀಗ ಬೆಂಗಳೂರಿಗೆ ವರ್ಗಾವಣೆಗೊಳ್ಳತ್ತಿರುವ ವಿಜಯೇಂದ್ರ ಟಿ.ಎಚ್ ರವರಿಗೆ ಬೀಳ್ಕೊಡುಗೆ ಸಮಾರಂಭವು ಮೇ 18ರಂದು ಬೆಳ್ತಂಗಡಿ ವಕೀಲರ ಭವನದಲ್ಲಿ ಜರುಗಿತು.

ವೇದಿಕೆಯಲ್ಲಿ ನ್ಯಾಯಾಧೀಶ ಮನು ಬಿಕೆ, ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಎಲೋಸಿಯಸ್ ಎಸ್. ಲೋಬೋ, ಉಪಾಧ್ಯಕ್ಷ ಶ್ರೀನಿವಾಸ್ ಗೌಡ, ಜೊತೆ ಕಾರ್ಯದರ್ಶಿ ಹರ್ಷಿತ್, ಕೋಶಾಧಿಕಾರಿ ಮುಮ್ತಾಜ್ ಬೇಗಂ, ಹಿರಿಯ ವಕೀಲರ ಸಂಘದ ಅಧ್ಯಕ್ಷ ಶಿವಕುಮಾರ್ ಉಪಸ್ಥಿತರಿದ್ದರು.

ಬೆಳ್ತಂಗಡಿ ನ್ಯಾಯಾಲಯದ ಎಲ್ಲಾ ವಕೀಲರುಗಳ ಸಮ್ಮುಖದಲ್ಲಿ ವಿಜಯೇಂದ್ರ ಟಿ.ಎಚ್ ರವರನ್ನು ಸನ್ಮಾನಿಸಲಾಯಿತು.

ಬೆಳ್ತಂಗಡಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ.ಸ್ವಾಗತಿಸಿದರು. ಅಪರ ಸರ್ಕಾರಿ ವಕೀಲರಾದ ಮನೋಹರ್ ಕುಮಾರ್ ನಿರೂಪಿಸಿದರು. ವಕೀಲರ ಸಂಘದ ಸದಸ್ಯರಾದ ಪ್ರತೀಕ್ಷಾ ಕೆ. ಆಚಾರ್ಯ ಮತ್ತು ಮನಿಷಾ ಕೆ.ಎಸ್ ಪ್ರಾರ್ಥಿಸಿದರು.

Related posts

ವೇಣೂರು ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya

ಮೂಡಿಗೆರೆ ಪಟ್ಟಣದಲ್ಲಿ ಮಾದಕ ವಸ್ತು ಗಾಂಜಾ ಮಾರಾಟದಲ್ಲಿ ತೊಡಗಿದ್ದ ಬೆಳ್ತಂಗಡಿಯ ಇಬ್ಬರು ಯುವಕರ ಬಂಧನ

Suddi Udaya

ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಮಕ್ಕಳ ದಿನಾಚರಣೆ

Suddi Udaya

ಮಚ್ಚಿನ ಗ್ರಾಮದ ಕುತ್ತಿನ ನಿವಾಸಿ ಧರ್ಣಪ್ಪ ಮೂಲ್ಯ ನಿಧನ

Suddi Udaya

ಇಲಂತಿಲ ಗ್ರಾ.ಪಂ. ನಲ್ಲಿ ವಿಕಲ ಚೇತನ ವಿಶೇಷ ಗ್ರಾಮ ಸಭೆ

Suddi Udaya

ಆ.15-16: ಗುರುವಾಯನಕೆರೆ ಎಕ್ಸೆಲ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ರಕ್ಷಕ ನಮನ 2025, ಶೈಕ್ಷಣಿಕ ಸಾಧಕರಿಗೆ ಅಭಿನಂದನೆ ಹಾಗೂ ವಿದ್ಯಾರ್ಥಿವೇತನ ವಿತರಣೆ

Suddi Udaya
error: Content is protected !!