24.8 C
ಪುತ್ತೂರು, ಬೆಳ್ತಂಗಡಿ
October 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿ ಹುದ್ದೆಯಿಂದ ಕೊಕ್ಕಡ ಕೊಲ್ಲಾಜೆ ನಿವಾಸಿ ಪವನ್ ಸಾಲ್ಯಾನ್ ಗೆ ಮುಕ್ತಿ

ಬೆಳ್ತಂಗಡಿ: ಭಾರತೀಯ ಯುವ ಕಾಂಗ್ರೆಸ್ ಹದಿನೈದು ಮಂದಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕೈಗೊಂಡಿದೆ. ರಾಜ್ಯ ಸಮಿತಿಯ ಕಾರ್ಯದರ್ಶಿ ಹುದ್ದೆಯಲ್ಲಿದ್ದ ಕೊಕ್ಕಡ ಗ್ರಾಮದ ಕೊಲ್ಲಾಜೆ ನಿವಾಸಿ ಪವನ್ ಸಾಲ್ಯಾನ್ ಕೊಲ್ಲಾಜೆ ಅವರಿಗೆ ನೀಡಿದ್ದ ಜವಾಬ್ದಾರಿಯನ್ನು ಹಿಂಪಡೆಯಲಾಗಿದೆ.

ಕರ್ತವ್ಯ ಲೋಪ, ಪಕ್ಷದ ಸಂಘಟನಾ ಚಟುವಟಿಕೆಗಳಲ್ಲಿ ನಿಷ್ಕ್ರಿಯರಾಗಿರುವುದು, ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸುವಲ್ಲಿ ವಿಫಲವಾಗಿರುವ ಕಾರಣದಿಂದ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ರಾಜ್ಯ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಸೇರಿದಂತೆ ಒಟ್ಟು 15 ಮಂದಿ ಪದಾಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅವರ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಭಾರತೀಯ ಯುವ ಕಾಂಗ್ರೆಸ್ ಮೇ.13 ರಂದು ಅಧಿಕೃತ ಆದೇಶವನ್ನು ಹೊರಡಿಸಿದೆ ಎಂದು ಹೇಳಲಾಗುತ್ತಿದೆ.

Related posts

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಪದವಿ ಪ್ರದಾನ ಸಮಾರಂಭ

Suddi Udaya

ಕುಪ್ಪೆಟ್ಟಿ ಸ.ಉ.ಹಿ.ಪ್ರಾ.ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಚಾರ್ಮಾಡಿ ಜಾರುವ ರಸ್ತೆಗೆ ಮತ್ತೆ ರಫಿಂಗ್

Suddi Udaya

ಮಾ.10: ಶಿರ್ಲಾಲು ಶ್ರೀ ಸತ್ಯಸಾರಮುಪ್ಪಣ್ಯ ದೈವಸ್ಥಾನದ ಜಾತ್ರಾ ಮಹೋತ್ಸವದ ಪ್ರಯುಕ್ತ ಕ್ರೀಡಾಕೂಟ

Suddi Udaya

ಕಕ್ಯಪದವು ಎಲ್.ಸಿ.ಆರ್ ಪದವಿಪೂರ್ವ ವಿಭಾಗದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಚಟುವಟಿಕೆಗಳ ಉದ್ಘಾಟನೆ

Suddi Udaya

ಅಂತರರಾಷ್ಟ್ರೀಯ ‘ಗ್ರೀನ್‌ ಆಸ್ಕರ್‌’ ಸೆಲ್ಕೋ ಮಡಿಲಿಗೆ ಹಸಿರು ಇಂಧನ ಕ್ಷೇತ್ರದಲ್ಲಿ ಭಾರತಕ್ಕೆ ಸಂದ ದೊಡ್ಡ ಗೌರವ; ಗ್ರಾಮೀಣ ನಾವೀನ್ಯತೆಗಾಗಿ ಸೆಲ್ಕೊ ಸೋಲಾರ್‌ ಲೈಟ್‌ ಪ್ರೈವೇಟ್‌ ಲಿಮಿಟೆಡ್‌ಗೆ ಆಶ್ಡೆನ್ ಪ್ರಶಸ್ತಿ –2025

Suddi Udaya
error: Content is protected !!