24.8 C
ಪುತ್ತೂರು, ಬೆಳ್ತಂಗಡಿ
October 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಮುಂಡಾಜೆ ಕೀರ್ತನಾ ಕಲಾ ತಂಡದ ಸದಸ್ಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

ಮುಂಡಾಜೆ: ಕೀರ್ತನಾ ಕಲಾ ತಂಡ ಮುಂಡಾಜೆ ಇದರ ವತಿಯಿಂದ ತಂಡದ ವಿದ್ಯಾರ್ಥಿ ಸದಸ್ಯರಿಗೆ ಉಚಿತ ಪುಸ್ತಕಗಳನ್ನು ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಧು ಶೆಟ್ಟಿ ಹುರ್ತಾಜೆ ಇವರು ವಹಿಸಿ ಅಧ್ಯಕ್ಷೀಯ ಮಾತುಗಳನ್ನಾಡಿದರು.

ಕಾರ್ಯಕ್ರಮದಲ್ಲಿ ಪುಸ್ತಕದ ಪ್ರಾಯೋಜಕರಾದ ಹರೀಶ್ ಪೂಜಾರಿಯವರು ಮಕ್ಕಳಿಗೆ ಪುಸ್ತಕ ವಿತರಿಸಿದರು. ಮುಖ್ಯ ಅತಿಥಿ ನಂದೀಶ್ ಭಂಡಾರಿ ಕೆ ಮಕ್ಕಳಿಗೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಪುಸ್ತಕವನ್ನು ನೀಡಿದ ಹರೀಶ್ ಪೂಜಾರಿ ಹಾಗೂ ನಂದೀಶ್ ಭಂಡಾರಿ ಕೆ ಇವರನ್ನು ಗೌರವ ಸ್ಮರಣಿಕೆ ನೀಡಿ ಅಭಿನಂದಿಸಲಾಯಿತು. ಈ ವೇಳೆ ಗ್ರಾಮದಲ್ಲಿ ನಿಧನರಾದ ವಿಠಲ್ ರಾವ್ ಸಂಪಿಗೆ ಹಾಗೂ ಬಾಬು ಶೆಟ್ಟಿ ಭಾವಂತಬೆಟ್ಟು ಇವರ ಸ್ಮರಿಸಿ ಮೌನ ಪ್ರಾರ್ಥನೆಯನ್ನು ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ತಂಡದ ಉಪಾಧ್ಯಕ್ಷ ಪ್ರದೀಪ್ ಶೆಟ್ಟಿ ನಾಗಂಡ, ನಾರಾಯಣ ಶೆಟ್ಟಿ ಮಂಜುಶ್ರೀ ನಗರ, ಪುರಂದರ ಗೌಡ, ತಂಡದ ಸದಸ್ಯರು ಹಾಗೂ ಪೋಷಕರು ಉಪಸ್ಥಿತರಿದ್ದರು.

ತಂಡದ ಅಧ್ಯಕ್ಷ ಸದಾನಂದ ಬಿ ಮುಂಡಾಜೆ ಸ್ವಾಗತಿಸಿ, ಕೇಶವ ಪೂಜಾರಿ ವಂದಿಸಿದರು. ಜಿತಿಕ್ಷಾ ನಿರೂಪಿಸಿದರು.

Related posts

ಗ್ರಾಮೀಣ ಸರಕಾರಿ ಪ್ರೌಢಶಾಲೆಯಲ್ಲಿ ಹೀಗೊಂದು ವಿನೂತನ ಶೌಚಾಲಯ

Suddi Udaya

ಗುರುವಾಯನಕೆರೆ ಅಂಗನವಾಡಿ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

Suddi Udaya

ಇಂದಬೆಟ್ಟು: ಕಲ್ಲಾಜೆ ಗಂಪದಕೋಡಿ ನಿವಾಸಿ ವಜ್ರಾಕ್ಷ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಮರಾಠಿ ಸಂಘದಿಂದ ತಿಮ್ಮಣಬೆಟ್ಟು ಸ.ಉ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕ ವಿತರಣೆ

Suddi Udaya

ಜು.29ರಿಂದ ಸೆ.14ರವರೆಗೆ ಮಹಾಮಂಡಲೇಶ್ವರ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತಾಚರಣೆ: ಬಿಳಿಶಿಲೆ ವಿನಾಯಕ ದೇವಸ್ಥಾನದಲ್ಲಿ ಚಾತುರ್ಮಾಸ್ಯ ವ್ರತಾಚರಣೆ: ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸಿರಿ ಕೇಂದ್ರ ಕಛೇರಿಯಲ್ಲಿ ಮಹಿಳಾ ದಿನಾಚರಣೆ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!