30.9 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳದಲ್ಲಿ ಅಸ್ವಸ್ಥರಾಗಿ ಚಿಕಿತ್ಸೆ ಪಡೆಯುತ್ತಿದ್ದ ಅಪರಿಚಿತ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು

ಬೆಳ್ತಂಗಡಿ : ಅಪರಿಚಿತ ವ್ಯಕ್ತಿ ಮೇ.3 ರಂದು ಬೆಳಿಗ್ಗೆ 10:30 ಗಂಟೆ ಸುಮಾರಿಗೆ ಧರ್ಮಸ್ಥಳ ಗ್ರಾಮದ ಧರ್ಮಸ್ಥಳ ಮುಖ್ಯದ್ವಾರದ ಬಳಿ ಯಾವುದೋ ಖಾಯಿಲೆ ಅಸ್ವಸ್ಥಗೊಂಡು ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಮೇ.18 ರಂದು ರಾತ್ರಿ 11:46 ಗಂಟೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತರ ವಯಸ್ಸು ಸುಮಾರು 55-60 ವರ್ಷ, ಎತ್ತರ 5.5 ಅಡಿ, ಸಾಧಾಹರಣ ಶರೀರ, ಎಣ್ಣೆಕಪ್ಪು ಮೈಬಣ್ಣ, ಕೋಲು ಮುಖ, ಮುಖದಲ್ಲಿ ಕಪ್ಪು-ಬಿಳಿ ಮಿಶ್ರಿತ ಗಡ್ಡ-ಮೀಸೆ, ತಲೆಯಲ್ಲಿ ಕಪ್ಪು-ಬಿಳಿ ಮಿಶ್ರಿತ ಕೂದಲು, ಎಡಕೆನ್ನೆಯಲ್ಲಿ ಕಪ್ಪು ಎಳ್ಳು ಮಚ್ಚೆ ಗುರುತು, ಬಲಕೋಲು ಕೈಯಲ್ಲಿ ಟ್ಯಾಟೋ ಮಾರ್ಕ್‌ ಇದ್ದು, ಮೃತದೇಹದ ಮೈಮೇಲೆ ಬಿಳಿ, ನೀಲಿ, ನಸುಹಸಿರು ಬಣ್ಣದಲ್ಲಿ ಚೌಕುಳಿಗಳಿರುವ ಶರ್ಟ್‌ ಮತ್ತು ಡೈಪರ್‌ ಧರಿಸಿರುತ್ತಾರೆ.

ಮೃತರ ವಾರೀಸುದಾರರು ಪತ್ತೆಯಾದಲ್ಲಿ 08256 277253, E-Mail ID [email protected] PSI DHARMASTHALA: 7795424204, 8277986449. CPI BELTHANGADY: 9480805336, Dist Control: 0824-2220500 ಗೆ ಸಂಪರ್ಕಿಸಿ ಮಾಹಿತಿ ನೀಡುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Related posts

ಇಳಂತಿಲ ಶಾಲೆಗೆ ನುಗ್ಗಿದ ಕಳ್ಳರು: ಕಪಾಟಿನಲ್ಲಿ ಇಟ್ಟಿದ್ದ ನಗದು ಕಳವು

Suddi Udaya

ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪ್ರಾರಂಭೋತ್ಸವ ‘ ಸ್ವಾಗತಮ್ ‘ ಸಮಾರಂಭ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆ: ದೇವರ ದರ್ಶನ ಬಲಿ, ಪಲ್ಲ ಪೂಜೆ

Suddi Udaya

ಗಾಯಕರಾದ ಕ್ಷಿತಿ ಕೆ.ರೈ ಮತ್ತು ಶ್ರೇಷ್ಠ ಆಳ್ವ ರಿಗೆ ಆಮಂತ್ರಣ ಸತ್ಯಶ್ರೀ ಗೌರವ ಪುರಸ್ಕಾರ

Suddi Udaya

ಕೊಯ್ಯೂರು ಕೊಯಿರೊಟ್ಟು ಗುಳಿಗ ದೈವದ ನೂತನ ಕಟ್ಟೆ, ಗಗ್ಗರ ಸೇವೆ

Suddi Udaya

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂಶೋಧನಾ ವಿಧಿ ವಿಧಾನಗಳ ಬಗ್ಗೆ ಕಾರ್ಯಾಗಾರ

Suddi Udaya
error: Content is protected !!