32.7 C
ಪುತ್ತೂರು, ಬೆಳ್ತಂಗಡಿ
October 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಪಜಿರಡ್ಕ: ನದಿಯಲ್ಲಿ ಮುಳುಗಿ ವಿದ್ಯಾರ್ಥಿ ನೀರುಪಾಲು

ಬೆಳ್ತಂಗಡಿ: ಏಳು ಜನರ ವಿದ್ಯಾರ್ಥಿಗಳ ತಂಡ ನದಿಯಲ್ಲಿ ಈಜಲು ಹೋಗಿ ಓರ್ವ ಇಂಜಿನಿಯರಿಂಗ್ ವಿದ್ಯಾರ್ಥಿ ನದಿಯಲ್ಲಿ ಮುಳುಗಿ ನೀರುಪಾಲದ ಘಟನೆ ಬೆಳ್ತಂಗಡಿಯ ಪಜಿರಡ್ಕದ ನೇತ್ರಾವತಿ ನದಿಯಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಪಜಿರಡ್ಕದ ನೇತ್ರಾವತಿ ನದಿಯಲ್ಲಿ ಮೇ.19 ರಂದು ಸಂಜೆ 4 ಗಂಟೆ ಸುಮಾರಿಗೆ ಏಳು ಸ್ನೇಹಿತರ ತಂಡ ಈಜಲು ಹೋಗಿ ಓರ್ವ ಬೆಳ್ತಂಗಡಿ ತಾಲೂಕಿನ ಉಜಿರೆ ಖಾಸಗಿ ಕಾಲೇಜಿನ ಅಂತಿಮ ವರ್ಷದ ಇಂಜಿನಿಯರಿಂಗ್(ಈಸಿಎ) ವಿದ್ಯಾರ್ಥಿ ಮೂಲತಃ ಬೆಳಗಾವಿ ಜಿಲ್ಲೆಯ ಗೋಕಾಕ್ ನಿವಾಸಿ ಶ್ರೀಪೂರ್ಣ(21) ಎಂಬಾತ ನೀರುಪಾಲಾಗಿದ್ದಾನೆ ಎನ್ನಲಾಗಿದೆ. ನದಿಯಲ್ಲಿ ಯುವಕನ ಮೃತದೇಹ ಪತ್ತೆಗಾಗಿ ಹುಡುಕಾಟ ನಡೆಸಿದ್ರೂ ಈವರೆಗೂ ಪತ್ತೆಯಾಗಿಲ್ಲ. ನಾಳೆಗೆ ಕಾರ್ಯಾಚರಣೆ ಮುಂದೂಡಲಾಗಿದೆ.

ಘಟನಾ ಸ್ಥಳಕ್ಕೆ ಸ್ಥಳೀಯರು,ಅಗ್ನಿಶಾಮಕ ದಳ, ಶೌರ್ಯ ವಿಪತ್ತು ಪಡೆ ಆಗಮಿಸಿ ಮೃತದೇಹವನ್ನು ರಾತ್ರಿ 9:25 ರವೆರ ಗಂಟೆ ವರೆಗೂ ಹುಡುಕಾಟ ನಡೆಸಿದ್ರೂ ಪತ್ತೆಯಾಗಿಲ್ಲ. ಇಂದಿನ ಕಾರ್ಯಾಚರಣೆ ಸ್ಥಗಿತಗೊಳಿಸಿ ನಾಳೆ ಮತ್ತೆ ಹುಡುಕಾಟಕ್ಕಾಗಿ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಸಮರ್ಥ ಆರ್ ಗಾಣಿಗೇರ ಮತ್ತು ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿ ಕಾರ್ಯಾಚರಣೆಗೆ ಸಹಕಾರ ನೀಡಿದ್ದಾರೆ.

Related posts

ಮಚ್ಚಿನ: ಕಲ್ಲಗುಡ್ಡೆ ರಸ್ತೆಯಲ್ಲಿ ತುಂಬಿದ ನೀರು

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಮುಂಡಾಜೆ: ವಿವೇಕಾನಂದ ಶಿಕ್ಷಣ ಸಂಸ್ಥೆಗಳಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಆ. 10 ರವರೆಗೆ ಇ-ಖಾತಾ ಅಭಿಯಾನದ ವಿಸ್ತರಣೆ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಕುಣಿತ ಭಜನೆಯ ತರಬೇತಿ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya
error: Content is protected !!