November 21, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮಾಡಿ ಗರ್ಭಿಣಿ ಪ್ರಕರಣ: ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

ಬೆಳ್ತಂಗಡಿ : ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮಾಡಿ ಗರ್ಭಿಣಿ ಮಾಡಿದ ಪ್ರಕರಣ ಸಂಬಂಧ ಬೆಳ್ತಂಗಡಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ 14 ವರ್ಷದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಲಾಯಿಲದ ರಿಜ್ವಾನ್(38) ಎಂಬಾತ ನವಂಬರ್ 2025 ರ ಸಮಯದಲ್ಲಿ ಅತ್ಯಾಚಾರ ಮಾಡಿ ವಿಚಾರವನ್ನು ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದ, ಇದರಿಂದ ಬಾಲಕಿ ಭಯಗೊಂಡು ಯಾರಿಗೂ ವಿಚಾರವನ್ನು ತಿಳಿಸಿರಲಿಲ್ಲ. ಇತ್ತೀಚೆಗೆ ಬಾಲಕಿಗೆ ಹೊಟ್ಟೆ ನೋವು ಕಾಣಿಸಿಕೊಂಡಾಗ ಮನೆಯವರು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪರೀಕ್ಷಿಸಿದಾಗ ಬಾಲಕಿ ಮೂರುವರೆ ತಿಂಗಳ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿರುವುದಾಗಿ ನೊಂದ ಬಾಲಕಿಯ ತಾಯಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಮೇ.17 ರಂದು ದೂರು ನೀಡಿದ್ದಾರೆ.

ದೂರಿನ ಬಗ್ಗೆ ತನಿಖೆ ನಡೆಸಿದ ಬೆಳ್ತಂಗಡಿ ಪೊಲೀಸರು ಆರೋಪಿ ಲಾಯಿಲದ ರಿಜ್ವಾನ್(38) ಎಂಬಾತನನ್ನು ಮೇ.18 ರಂದು ಸಂಜೆ ಉಜಿರೆಯ ನೀರಚಿಲುಮೆ ಬಳಿ ಬಂಧಿಸಿ ವಿಚಾರಣೆ ನಡೆಸಿ ಮಂಗಳೂರು ಪೋಕ್ಸೋ ನ್ಯಾಯಾಲಯಕ್ಕೆ ಮೇ.19 ರಂದು ಹಾಜರುಪಡಿಸಿದ್ದು ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Related posts

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ ಯಶಸ್ವಿ-ಬಾಲಕರ ವಿಭಾಗದಲ್ಲಿ ಎಸ್.ಡಿ.ಎಂ. ಉಜಿರೆಗೆ ಪ್ರಥಮ, ವಾಣಿ ಕಾಲೇಜಿಗೆ ದ್ವಿತೀಯ | ಬಾಲಕಿಯರ ವಿಭಾಗದಲ್ಲಿ ಮುಂಡಾಜೆ ಕಾಲೇಜಿಗೆ ಪ್ರಥಮ ಸ್ಥಾನ

Suddi Udaya

ಮಾಚಾರ್‌ ಖಿದ್ಮತ್ ಗ್ರೂಪ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮಾಜಿ ಶಾಸಕ ಕೆ.ವಸಂತ ಬಂಗೇರ ಅವರಿಗೆ ಅಂತಿಮ ನಮನ ಸಲ್ಲಿಸಿದ ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟಿ ಯು.ಸಿ ಪೌಲೋಸ್ ಹಾಗೂ ಕಲ್ಲಡ್ಕ ಪ್ರಭಾಕರ ಭಟ್

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ನೀರು ನೈರ್ಮಲ್ಯ ಸ್ವಚ್ಛ ಗ್ರಾಮ ಚಿತ್ರ ಪ್ರದರ್ಶನ ಮತ್ತು ಮಾಹಿತಿ ಕಾರ್ಯಾಗಾರ

Suddi Udaya

ಕಡಿರುದ್ಯಾವರ ನಿವಾಸಿ ಅನಿಲ್‌ ಪೂಜಾರಿಯವರ 3 ತಿಂಗಳ ಪುಟ್ಟ ಕಂದನ ಶಸ್ತ್ರಚಿಕಿತ್ಸೆಗೆ ನೆರವಾಗಿ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿ ಪ್ರತಿಭಾ ವೇದಿಕೆ ಉದ್ಘಾಟನಾ ಸಮಾರಂಭ

Suddi Udaya
error: Content is protected !!