30.9 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ

ಬೆಳ್ತಂಗಡಿ :ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2025-26ನೇ ಶೈಕ್ಷಣಿಕ ಸಾಲಿನ ಕಾಲೇಜು ವಾರ್ಷಿಕೋತ್ಸವವನ್ನು ಮೇ 19ರಂದು ಆಯೋಜಿಸಲಾಯಿತು.

ಮುಖ್ಯ ಅತಿಥಿಗಳಾಗಿ ಕಾರ್ಕಳದ ಶ್ರೀ ಭುವನೇಂದ್ರ ಕಾಲೇಜಿನ ಪ್ರಾಂಶುಪಾಲರಾದ ಡಾ. ಮಂಜುನಾಥ್ ಕೋಟ್ಯಾನ್ ಭಾಗವಹಿಸಿ ಮಾತನಾಡಿ ವಿದ್ಯಾರ್ಥಿಗಳಿಗೆ ಅಂಕಗಳಷ್ಟೇ ಮುಖ್ಯವಲ್ಲ ಅದೇ ಮಾನದಂಡವಲ್ಲ ಅದರ ಜೊತೆಗೆ ಪಠ್ಯೇತರ ಚಟುವಟಿಕೆಗಳು ಪ್ರಮುಖವಾದ ಭಾಗ ಹಾಗಾಗಿ ವಿದ್ಯಾರ್ಥಿಗಳು ಅಂಕಗಳ ಹಿಂದೆ ಕೊಡದೆ ತಮ್ಮ ಸಮಗ್ರ ಅಭಿವೃದ್ಧಿಗೆ ಕಾಲೇಜಿನ ಎಲ್ಲಾ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ಭಾಗವಹಿಸಬೇಕು ಎಂದು ತಿಳಿಸಿದರು. ನೀವು ಇಂದು ಈ ಕಾಲೇಜಿನಲ್ಲಿ ಕಲಿಯುತ್ತಿದ್ದೀರಿ ಮುಂದೊಂದು ದಿನ ನೀವು ಉತ್ತಮ ಸ್ಥಾನಕ್ಕೆ ಹೋದಾಗ ನೀವು ಕಲಿತ ಕಾಲೇಜನ್ನು ನೆನೆಸಿಕೊಂಡು ಆ ಸಂದರ್ಭದಲ್ಲಿ ಕಾಲೇಜಿನಲ್ಲಿ ಅಭ್ಯಾಸ ಮಾಡುವ ಬಡ ವಿದ್ಯಾರ್ಥಿಗಳಿಗೆ ನಿಮ್ಮ ಸಹಾಯಸ್ತವನ್ನು ಚಾಚಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ಸುರೇಶ್ ವಿ ವಹಿಸಿದ್ದರು. ಕಾಲೇಜಿನ ಐಕ್ಯುಎಸಿ ಸಂಚಾಲಕರಾದ ಡಾ. ಕುಶಾಲಪ್ಪ ಎಸ್ ಇವರು ಕಾಲೇಜಿನ ಸಮಗ್ರ ಚಟುವಟಿಕೆಗಳ ವರದಿಯನ್ನು ವಾಚಿಸಿದರು. ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಪ್ರೊ. ಪದ್ಮನಾಭ ಕೆ. ಅತಿಥಿಗಳನ್ನು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತೆ ಪರೀಕ್ಷೆಯಲ್ಲಿ ಉತ್ತೀರ್ಣರಾದ ನಿತಿನ್ ಮತ್ತು ಶಮೀರ್ ಇವರನ್ನು ಹಾಗೂ ಮಂಗಳೂರು ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದ ಗ್ರಂಥಪಾಲಕರಾದ ಡಾ. ಜಗದೀಶ್ ಇವರನ್ನು ಸನ್ಮಾನಿಸಲಾಯಿತು.

ಕಾಲೇಜಿನ ಚಟುವಟಿಕೆಗಳಲ್ಲಿ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡ ವಿದ್ಯಾರ್ಥಿಗಳ ಪಟ್ಟಿಯನ್ನು ನಿರ್ವಹಣೆ ವಿಭಾಗದ ಡಾ. ದಿವ್ಯ ಪ್ರಭು ವಾಚಿಸಿದರು. ಪ್ರೊ| ಮಾರುತಿ ಕಳೆದ ಸಾಲಿನಲ್ಲಿ ಅತ್ಯುನ್ನತ ಅಂಕಗಳನ್ನು ಪಡೆದ ವಿದ್ಯಾರ್ಥಿಗಳ ಪಟ್ಟಿಯನ್ನು ವಾಚಿಸಿದರೆ, ಪ್ರೊ| ರೊನಾಲ್ಡ್ ಪ್ರವೀಣ್ ಕೊರಾಯ ಕಳೆದ ವರ್ಷದ ಅತ್ಯುತ್ತಮ ರಾಷ್ಟ್ರೀಯ ಸೇವ ಯೋಜನೆ ಸ್ವಯಂಸೇವಕರಾದ ಜಗದೀಶ್, ಕವನ ಮತ್ತು ಸಂದೇಶವನ್ನು ಪುರಸ್ಕರಿಸಿದರು. ಸ್ನಾತ್ತಕೋತ್ತರ ವಿಭಾಗದ ಸಂಚಾಲಕರಾದ ಡಾ. ರವಿ ಎಂ ಎನ್ ಅತಿಥಿಗಳನ್ನು ಪರಿಚಯಿಸಿದರು. ಡಾ. ಕೃಷ್ಣಾನಂದ ಪಿ. ಎಂ., ಡಾ. ರಾಜೇಶ್ವರಿ ಎಚ್.ಎಸ್., ಮತ್ತು ಡಾ. ಶ್ರೀಲಾವತಿ ಸನ್ಮಾನಿತರ ಪರಿಚಯ ಮಾಡಿದರು. ಇದೇ ಸಂದರ್ಭದಲ್ಲಿ ರಾಷ್ಟ್ರಮಟ್ಟದಲ್ಲಿ ಕ್ರೀಡೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಶಿಕ್ಷಕರಕ್ಷಕ ಸಂಘದ ಕಾರ್ಯದರ್ಶಿಗಳಾದ ಶ್ರೀಮತಿ ಪ್ರಮೀಳಾ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ರಾಧಾಕೃಷ್ಣ ಹೆಚ್‍.ಬಿ., ವಿದ್ಯಾರ್ಥಿ ಪ್ರತಿಭಾ ವೇದಿಕೆಯ ಅಧ್ಯಕ್ಷರಾದ ವೀಕ್ಷಿತ, ಉಪಾಧ್ಯಕ್ಷರಾದ ಸಂತೋಷ್, ಸ್ನಾತಕೋತ್ತರ ವಿಭಾಗದ ಪ್ರತಿನಿಧಿಗಳಾದ ನಿತಿನ್ ಶೆಟ್ಟಿ ಮತ್ತು ವೈಷ್ಣವಿ, ಕಾರ್ಯದರ್ಶಿ ರಕ್ಷಿತಾ, ಸಹ ಕಾರ್ಯದರ್ಶಿ ಸುಭಾಷ್, ಕ್ರೀಡಾ ಕಾರ್ಯದರ್ಶಿಗಳಾದ ಹೇಮಂತ್ ಮತ್ತು ಮಂಜುಳಾ ಹಾಗೂ ಸಾಂಸ್ಕೃತಿಕ ಕಾರ್ಯದರ್ಶಿಗಳಾದ ಅಂಕಿತ ಮತ್ತು ಸಂಗೀತ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಅಂತಿಮ ಎಂಕಾಂ ನ ವಾಣಿ, ಪೂರ್ಣಿಮಾ ಮತ್ತು ವನಿತಾ ಪ್ರಾರ್ಥಿಸಿದರು. ಕುಮಾರಿ ವೀಕ್ಷಿತ ವಂದನಾರ್ಪಣೆಗೈದರು.

Related posts

ಫೆ 8:ಬಳಂಜ ಯುವ ಬಿಲ್ಲವ ವೇದಿಕೆಯಿಂದ ವಾರ್ಷಿಕ ಕ್ರೀಡಾಕೂಟ ಬ್ರಹ್ಮಶ್ರೀ-2026: ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಹಾಗೂ ವಿವಿಧ ಸ್ಪರ್ಧೆಗಳು

Suddi Udaya

ನ್ಯಾಯವಾದಿಯಾಗಿ 25 ವರ್ಷ ಪೂರೈಸಿದ ಬಿ.ಕೆ. ಧನಂಜಯ ರಾವ್ ರವರಿಗೆ ಶಿಷ್ಯ ವೃಂದದಿಂದ ಸನ್ಮಾನ

Suddi Udaya

ಲಾಯಿಲ: ಕರ್ನೋಡಿ ಸ.ಉ.ಹಿ.ಪ್ರಾ. ಶಾಲೆಯ ಹಳೆ ವಿದ್ಯಾರ್ಥಿ ಸಂಘದಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ “ಗುರುವಂದನಾ” ಕಾರ್ಯಕ್ರಮ

Suddi Udaya

ಬುರುಡೆ ಪ್ರಕರಣ: ಸುಜಾತ ಭಟ್ ಗೆ ವಿಚಾರಣೆಗೆ ನೋಟಿಸ್ ಜಾರಿ

Suddi Udaya

ಬೆಳ್ತಂಗಡಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಘಟಕದ ವತಿಯಿಂದ ವಿಶ್ವ ಮಹಿಳಾ ದಿನದ ಅಂಗವಾಗಿ ಆರ್ಥಿಕ ನೆರವು

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಕೊಯ್ಯೂರು, ಕಳಿಯ, ನ್ಯಾಯತರ್ಪು, ಮತ್ತು ನಾಳ ಭಕ್ತಾದಿಗಳಿಂದ ಹಸಿರು ವಾಣಿ ಸಮರ್ಪಣೆ

Suddi Udaya
error: Content is protected !!