25.6 C
ಪುತ್ತೂರು, ಬೆಳ್ತಂಗಡಿ
October 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯಲ್ಲಿ ರಾತ್ರೋರಾತ್ರಿ ಕಳ್ಳರ ಕೈಚಳಕ: ವಕೀಲರ ಕಚೇರಿ, ಹೋಟೆಲ್, ಅಂಗಡಿಗಳಿಗೆ ನುಗ್ಗಿದ ಕಳ್ಳರು ನಗದು ದೋಚಿ ಪರಾರಿ

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ರಾತ್ರೋರಾತ್ರಿ ಹತ್ತು ಅಂಗಡಿಗಳಿಗೆ ನುಗ್ಗಿದ ಕಳ್ಳರು ನಗದು ದೋಚಿ ಪರಾರಿಯಾದ ಘಟನೆ ಮೇ.18ರಂದು ರಾತ್ರಿ ನಡೆದಿದೆ.

ಕೋರ್ಟ್ ರಸ್ತೆಯ ಧರ್ಮಶ್ರೀ ಬಿಲ್ಡಿಂಗ್ ನ ಸಮೃದ್ಧಿ ಎಂಟರ್ಪ್ರೈಸಸ್ ನಿಂದ ಸುಮಾರು 1.50 ಲಕ್ಷ ನಗದು ಹಾಗೂ ಸಿಸಿ ಕ್ಯಾಮೆರಾ ಹಾಗೂ ಮೆಮೊರಿ ಕಾರ್ಡ್ ನನ್ನು ಹಾನಿಗೊಳಿಸಿ ಪರಾರಿಯಾಗಿದ್ದಾರೆ. ಹಾಗೂ ಅದೇ ಕಟ್ಟಡದ ಮಹಮ್ಮದ್ ಹನೀಫ್ ರವರ ಟಿ.ಎಚ್ ರಿಯಲ್ ಎಸ್ಟೇಟ್ ಕಚೇರಿ, ಕಟ್ಟಡ ಮಾಲಕರ ಕಚೇರಿ ಸೇರಿದಂತೆ ವಕೀಲರುಗಳಾದ ರಾಧಾಕೃಷ್ಣ , ಉಷಾ ಎನ್.ಜಿ, ಯತೀಶ್ ಶೆಟ್ಟಿ ಪಿ ಕಚೇರಿಗಳಿಗೆ ನುಗ್ಗಿದ್ದಾರೆ.

ಮೂರು ಮಾರ್ಗದ ಬಳಿ ಇರುವ ಮಾತೃಶ್ರೀ ಹೋಟೆಲ್ ನಿಂದ ಡಬ್ಬಿಯಿಂದ ರೂ.5000 ಹಾಗೂ ಡ್ರಾವರ್ ನಿಂದ ರೂ.2000ಸಾವಿರ, ಶಬರಿ ಎಂಟರ್ಪ್ರೈಸಸ್ ಸುಮಾರು ರೂ. 2ಸಾವಿರ, ಜಯರಾಮ ಮಣಿಯಾಣಿ ವಕೀಲರ ಕಚೇರಿ, ಮೆ| ಹಿಮಾಲಯ ಫೈನಾನ್ಸ್ ಮತ್ತು ಇನ್ವೆಸ್ಟ್ಮೆಂಟ್ , ಜಿತೇಶ್ ಕೆ ವಕೀಲರ ಕಚೇರಿಗೆ ನುಗ್ಗಿದ್ದಾರೆ. ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಅಣಬೆ ಬೇಸಾಯ ತರಬೇತಿ ಕಾರ್ಯಾಗಾರ

Suddi Udaya

ಎಸ್.ಡಿ.ಎಂ. ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆ ವಿದ್ಯಾರ್ಥಿಗಳು ಚದುರಂಗ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ವಾಣಿಜ್ಯ ಸಂಘ ಮತ್ತು ಪ್ಲೇಸ್ಮೆಂಟ್ ಸೆಲ್ ಸಹಯೋಗದಲ್ಲಿ “ಲೈಫ್ ಆನ್ ರಿಗ್” ವಿಶೇಷ ಉಪನ್ಯಾಸ

Suddi Udaya

ಫೆ.3: ಬೆಳ್ತಂಗಡಿ ಆರ್.ಜೆ. ಫ್ರೆಂಡ್ಸ್ ಕ್ಲಬ್ ಕಲ್ಲಗುಡ್ಡೆ ಆಶ್ರಯದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಕುಪೆಟ್ಟಿ-ಉಪ್ಪಿನಂಗಡಿ ರಸ್ತೆ ಅಭಿವೃದ್ಧಿಗೊಳಿಸುವಂತೆ ಬಿಜೆಪಿ ಪ್ರತಿಭಟನೆ

Suddi Udaya

ಕೊಕ್ಕಡ: ಶ್ರೀಮತಿ ಮೋನಕ್ಕ ನಿಧನ

Suddi Udaya
error: Content is protected !!