30.9 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ರೆಖ್ಯ: ಅಶ್ವಿತ್ ಕುಮಾರ್ ನಾಪತ್ತೆ ಪ್ರಕರಣ: ಮೂರು ದಿನಗಳ ಬಳಿಕ ಶಿರಾಡಿ ಗ್ರಾಮದ ಕುಕ್ಕುಂಜ ಸಮೀಪ ಹೊಳೆ ಬದಿಯಲ್ಲಿ ಪತ್ತೆ ಹಚ್ಚಿದ “ಶೌರ್ಯ” ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ತಂಡ

ಬೆಳ್ತಂಗಡಿ: ರೆಖ್ಯ ಗ್ರಾಮದ ದೇವಸ ಎಂಬಲ್ಲಿಗೆ ಸಂಬಂಧಿಕರ ಮನೆಗೆ ಆಗಮಿಸಿದ್ದ ನೆಲ್ಯಾಡಿ ಪಾಲೇತ್ತಾಡಿ ನಿವಾಸಿ ಅಶ್ವಿತ್ ಕುಮಾರ್ (37) ಶಿರಾಡಿ ಗ್ರಾಮದ ಕುಕ್ಕುಂಜ ಸಮೀಪದ ಉದನೆ ಹೊಳೆಯ ಸಮೀಪದಲ್ಲಿ ಇಂದು ಮಧ್ಯಾಹ್ನ ಪತ್ತೆಯಾಗಿದ್ದಾರೆ.

ಅವರು ಮೇ 17 ರಂದು ಸಂಜೆ 4.15 ರ ಬಳಿಕ ಕಣ್ಮರೆಯಾಗಿದ್ದರು.ಸುತ್ತಲಿನ ಪ್ರದೇಶದಲ್ಲಿ ಹುಡುಕಾಟ ನಡೆಸಿದಾಗ ಸಿಗದೇ ಇದ್ದಾಗ ಆತಂಕಗೊಂಡ ಕುಟುಂಬದವರು ಪತ್ತೆ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ “ಶೌರ್ಯ” ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ತಂಡದ ಸಹಕಾರ ಕೇಳಿದ್ದರು. ಕೂಡಲೇ ಸ್ಪಂದಿಸಿದ ಶಿಶಿಲ ಅರಶಿನಮಕ್ಕಿ ಘಟಕದ ಸ್ವಯಂಸೇವಕರು ಹುಡುಕಾಟ ನಡೆಸಿದ್ದರು. ನಾಪತ್ತೆಯಾಗಿದ್ದ ಮಾರನೆಯ ದಿನ ಶೌರ್ಯ ತಂಡದ ಸ್ವಯಂಸೇವಕರು ಮತ್ತು ಸ್ಥಳೀಯರು ಸುತ್ತಲಿನ ಅರಣ್ಯ ಪ್ರದೇಶ, ನದಿ, ಗುಡ್ಡಗಾಡು, ಕೆರೆ ಮತ್ತಿತರ ಪ್ರದೇಶಗಳಲ್ಲಿ ಹುಡುಕಾಟ ನಡೆಸಿದ್ದರು. ಬೆಳಿಗ್ಗೆಯಿಂದ ಸಂಜೆಯವರೆಗೆ ಹುಡುಕಿದರೂ ಪತ್ತೆಯಾಗಿರಲಿಲ್ಲ.

ಇಂದು ಮೇ19 “ಶೌರ್ಯ” ತಂಡದ ಸದಸ್ಯರು, ಧರ್ಮಸ್ಥಳ ತುರ್ತು ಸ್ಪಂದನಾ ತಂಡದ ಸದಸ್ಯರು ಹಾಗೂಸ್ಥಳೀಯರು ಬೆಳಿಗ್ಗೆಯಿಂದಲೇ ಹುಡುಕುವ ಕಾರ್ಯಾಚರಣೆ ನಡೆಸಿದ್ದರು.ಶಿರಾಡಿ ಗ್ರಾಮದ ಕುಕ್ಕುಂಜ ಸಮೀಪದ ಉದನೆ ಹೊಳೆಯ ಸಮೀಪದಲ್ಲಿ ಇಂದು ಮಧ್ಯಾಹ್ನ ಸುಮಾರು 2.15 ರ ವೇಳೆಗೆ ನಿತ್ರಾಣವಾಗಿ ಕುಳಿತಿದ್ದ ಅಶ್ವಿತ್ ಕುಮಾರ್ ಅವರನ್ನು ಯುವಕರು ಪತ್ತೆಹಚ್ಚಿದ್ದಾರೆ. ಎರಡು ದಿನದ ಬಳಿಕ ದೊರೆತ ಅಶ್ವಿನ್ ಅವರು ನಿತ್ರಾಣಗೊಂಡಿದ್ದು ಅವರನ್ನು ಸ್ಥಳೀಯರು ಹಾಗೂ ಶೌರ್ಯ ತಂಡದ ಸದಸ್ಯರು ಸುರಕ್ಷಿತವಾಗಿ ಮನೆಗೆ ತಲುಪಿಸಿದ್ದಾರೆ.

ಎರಡು ದಿನಗಳ ಹುಡುಕಾಟ ನಡೆಸಲು ಶ್ರಮಿಸಿದ ಸ್ವಯಂಸೇವಕರಿಗೆ ಅಶ್ವಿನ್ ಕುಮಾರ್ ಅವರ ಕುಟುಂಬದ ಸದಸ್ಯರು ಕೃತಜ್ಞತೆ ಸಲ್ಲಿಸಿದ್ದಾರೆ.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯವರಾದ ಅನಿಲ್ ಕುಮಾರ್ ಎಸ್.ಎಸ್ ರವರು ಸ್ವಯಂಸೇವಕರ ಕಾರ್ಯಾಚರಣೆಗೆ ಮೆಚ್ಚುಗೆ ವ್ಯಕ್ತಪಡಿಸಿ ಸ್ವಯಂಸೇವಕರಿಗೆ ದೂರವಾಣಿ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ. ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಮಾಸ್ಟರ್ ಅವಿನಾಶ್ ಭಿಡೆ ಇವರ ನೇತ್ರತ್ವದಲ್ಲಿ ಶಿಶಿಲ ಅರಶಿನಮಕ್ಕಿ ಘಟಕದ ಸ್ವಯಂಸೇವಕರು ಯಶಸ್ವೀ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದರು. ಶ್ರೀ ಧರ್ಮಸ್ಥಳ ತುರ್ತು ಸ್ಪಂದನಾ ತಂಡದ ಘಟಕ ಪ್ರತಿನಿಧಿ ಸುಲೈಮಾನ್, ರವೀಂದ್ರ, ಘಟಕ ಸಂಯೋಜಕಿ ರಶ್ಮಿತಾ ಹಾಗೂ ಸದಸ್ಯರು ಭಾಗವಹಿಸಿದ್ದರು.

Related posts

ಸ್ಟಾರ್ ಲೈನ್ ಶಾಲೆ ಮಂಜೊಟ್ಟಿ : ಶಾಲೆಯ ಸಲಹಾ ಸಮಿತಿ ಪ್ರಧಾನ ಸಲಹೆಗಾರರಾಗಿ ಡಾ. ಸಯ್ಯದ್ ಅಮೀನ್ ಅಹಮದ್ ಅಧಿಕಾರ ಸ್ವೀಕಾರ

Suddi Udaya

ಕಾಡಾನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಗೌಡರ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ. ಪುಷ್ಪಗಿರಿ ಭೇಟಿ, ಆರ್ಥಿಕ ನೆರವು

Suddi Udaya

ಗಡಿಪಾರು ವಿಷಯದಲ್ಲಿ ಷಡ್ಯಂತ್ರ ಎಂದು ಸುಳ್ಳು ಸುದ್ದಿಯನ್ನು ಯುಟ್ಯೂಬ್ ನಲ್ಲಿ ಪ್ರಸಾರ ಮಾಡಿದ ಜಯಂತ್ ಟಿ ವಿರುದ್ಧ ಪ್ರಕರಣ ದಾಖಲು

Suddi Udaya

ಉರುವಾಲುಪದವು ಶ್ರೀ ಮಹಮ್ಮಾಯಿ ದೇವಸ್ಥಾನದ ಸ್ಥಳೀಯ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಗಿಡ ನೆಡುವ ಹಾಗೂ ಸಸಿ ವಿತರಣಾ ಕಾರ್ಯಕ್ರಮ

Suddi Udaya

ಮಡಿಕೇರಿಯ ಪ್ರಕೃತಿ ಮಡಿಲಲ್ಲಿ ಬೆಳ್ತಂಗಡಿ ಹೆರಾಜೆ ಕುಟುಂಬದ ಸಂಭ್ರಮದ ಕುಟುಂಬ ಮಿಲನ

Suddi Udaya

ಬೆಳ್ತಂಗಡಿ ಎಸ್ ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಪ್ರೌಢಶಾಲಾ ಪ್ರತಿಭಾ ಕಾರಂಜಿಯಲ್ಲಿ ಹಲವು ಪ್ರಶಸ್ತಿಗಳು

Suddi Udaya
error: Content is protected !!