30.9 C
ಪುತ್ತೂರು, ಬೆಳ್ತಂಗಡಿ
October 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮಾಡಿ ಗರ್ಭಿಣಿ ಪ್ರಕರಣ: ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

ಬೆಳ್ತಂಗಡಿ : ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮಾಡಿ ಗರ್ಭಿಣಿ ಮಾಡಿದ ಪ್ರಕರಣ ಸಂಬಂಧ ಬೆಳ್ತಂಗಡಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ 14 ವರ್ಷದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಲಾಯಿಲದ ರಿಜ್ವಾನ್(38) ಎಂಬಾತ ನವಂಬರ್ 2025 ರ ಸಮಯದಲ್ಲಿ ಅತ್ಯಾಚಾರ ಮಾಡಿ ವಿಚಾರವನ್ನು ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದ, ಇದರಿಂದ ಬಾಲಕಿ ಭಯಗೊಂಡು ಯಾರಿಗೂ ವಿಚಾರವನ್ನು ತಿಳಿಸಿರಲಿಲ್ಲ. ಇತ್ತೀಚೆಗೆ ಬಾಲಕಿಗೆ ಹೊಟ್ಟೆ ನೋವು ಕಾಣಿಸಿಕೊಂಡಾಗ ಮನೆಯವರು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪರೀಕ್ಷಿಸಿದಾಗ ಬಾಲಕಿ ಮೂರುವರೆ ತಿಂಗಳ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿರುವುದಾಗಿ ನೊಂದ ಬಾಲಕಿಯ ತಾಯಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಮೇ.17 ರಂದು ದೂರು ನೀಡಿದ್ದಾರೆ.

ದೂರಿನ ಬಗ್ಗೆ ತನಿಖೆ ನಡೆಸಿದ ಬೆಳ್ತಂಗಡಿ ಪೊಲೀಸರು ಆರೋಪಿ ಲಾಯಿಲದ ರಿಜ್ವಾನ್(38) ಎಂಬಾತನನ್ನು ಮೇ.18 ರಂದು ಸಂಜೆ ಉಜಿರೆಯ ನೀರಚಿಲುಮೆ ಬಳಿ ಬಂಧಿಸಿ ವಿಚಾರಣೆ ನಡೆಸಿ ಮಂಗಳೂರು ಪೋಕ್ಸೋ ನ್ಯಾಯಾಲಯಕ್ಕೆ ಮೇ.19 ರಂದು ಹಾಜರುಪಡಿಸಿದ್ದು ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Related posts

ನ.5: ಬೆಳ್ತಂಗಡಿ ಧರ್ಮಪ್ರಾಂತ್ಯದ ಎರಡನೆಯ ಧರ್ಮಾಧ್ಯಕ್ಷರಾದ ಅತೀ ವಂದನೀಯ ಜೇಮ್ಸ್ ಪಟ್ಟೇರಿಲ್ ಪಟ್ಟಾಭಿಷೇಕ

Suddi Udaya

ಉಜಿರೆ: ಪೇಂಟಿಂಗ್ ಮಾಡುವಾಗ ಬಿದ್ದು ಗಾಯಗೊಂಡಿದ್ದ ಪ್ರಮೋದ್ ಗೌಡ ಚಿಕಿತ್ಸೆ ಫಲಕಾರಿಯಾಗದೆ ನಿಧನ

Suddi Udaya

ಉಜಿರೆ: ಹಳೆಪೇಟೆ ಯು.ಹೆಚ್ ಆಟೋ ಸಂಘದ ಮಹಾಸಭೆ: ಸಮಿತಿ ರಚನೆ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಭಗವಾನ್ ಶ್ರೀ ಮಹಾವೀರ ಸ್ವಾಮಿ ಜನ್ಮ ಕಲ್ಯಾಣೋತ್ಸವ ಆಚರಣೆ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯ ಸಹ ಸಂಸ್ಥೆ ಸಾಯಿ ಕೃಷ್ಣ ಹೆಲ್ತ್ ಸೆಂಟರ್ ಬಣಕಲ್ ನಲ್ಲಿ ವೈದ್ಯರ ದಿನಾಚರಣೆ: ಹಿರಿಯ ವೈದ್ಯ ಡಾ. ಅನಂತ ಕೃಷ್ಣ ಉಪಾಧ್ಯಾಯ ಪಾದೂರು ಅವರಿಗೆ ಸನ್ಮಾನ

Suddi Udaya

ಮಚ್ಚಿನ: ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳತನ

Suddi Udaya
error: Content is protected !!