25.6 C
ಪುತ್ತೂರು, ಬೆಳ್ತಂಗಡಿ
October 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2025-26 ನೇ ಸಾಲಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮವನ್ನು ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ಇಲ್ಲಿನ ಪ್ರಾಂಶುಪಾಲರಾದ ಪ್ರೊ. ಮಾಧವ ಎಂ ಇವರು ಉದ್ಘಾಟಿಸಿ ಕಾಲೇಜಿನ ವಿದ್ಯಾರ್ಥಿಗಳಿಗೆ ಅತ್ಯಂತ ಉತ್ಸಾಹದ ದಿನ ಪ್ರತಿಭಾ ಪುರಸ್ಕಾರ ದಿನ. ಈ ಶೈಕ್ಷಣಿಕ ಸಾಲಿನ ತಮ್ಮ ಪ್ರತಿಭೆಗಳನ್ನು ಇಂದು ಪುರಸ್ಕರಿಸಲಾಗಿದೆ. ನೀವು ಭವಿಷ್ಯದಲ್ಲಿಯೂ ಸಹ ಈ ರೀತಿ ಅನೇಕ ಪುರಸ್ಕಾರಗಳಿಗೆ ಪಾತ್ರರಾಗಬೇಕು. ಹೆಜ್ಜೆ ಮುಂದಿಟ್ಟ ಹಿಂದೆ ನೋಡದೆ ಜೀವನದಲ್ಲಿ ಮುಂದುವರಿಯಬೇಕು ಎಂದು ಉದಾಹರಣೆಗಳ ಮೂಲಕ ವಿದ್ಯಾರ್ಥಿಗಳ ಸಾಧನೆಯನ್ನು ಅಭಿನಂದಿಸುತ್ತಾ ಕಿವಿಮಾತು ಹೇಳಿದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸುರೇಶ್ ವಿ. ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಇನ್ಸೈಟ್ ಎಂಬ ಸಪ್ತಾಹಿಕ ಪತ್ರಿಕೆಯ 27ನೇ ಸಂಚಿಕೆಯನ್ನು ಬಿಡುಗಡೆ ಮಾಡಲಾಯಿತು. ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಪ್ರೊ. ಪದ್ಮನಾಭ ಕೆ., ಸಾಂಸ್ಕೃತಿಕ ಸಂಚಾಲಕರಾದ ಪ್ರೊ. ಮಾರುತಿ, ಐಕ್ಯುಎಸಿ ಸಹ ಸಂಚಾಲಕರಾದ ಡಾ. ರವಿ ಎಂ. ಎನ್. ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ರಾಧಾಕೃಷ್ಣ ಹೆಚ್ ಬಿ ಹಾಗೂ ವಿದ್ಯಾರ್ಥಿ ಪ್ರತಿಭಾ ವೇದಿಕೆಯ ಪದಾಧಿಕಾರಿಗಳಾದ ಕುಮಾರಿ ವೀಕ್ಷಿತ, ಸಂತೋಷ್, ನಿತಿನ್ ಶೆಟ್ಟಿ, ವೈಷ್ಣವಿ, ರಕ್ಷಿತಾ, ಸುಭಾಷ, ಹೇಮಂತ್, ಮಂಜುಳಾ, ಸಂಗೀತ ಅಂಕಿತ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ನಿರ್ವಹಣಾ ವಿಭಾಗದ ಪ್ರೊ. ರಶ್ಮಿ ಸಾಂಸ್ಕೃತಿಕ ಸ್ಪರ್ಧೆಗಳ ವಿಜೇತರ ಪಟ್ಟಿಯನ್ನು, ಡಾ. ರಾಧಾಕೃಷ್ಣ ಹೆಚ್.ಬಿ. ಕ್ರೀಡಾ ವಿಭಾಗದ ವಿಜೇತರ ಪಟ್ಟಿಯನ್ನು ಮತ್ತು ಪ್ರೊ| ಮಾರುತಿ ಇವರು ರಾಜ್ಯ ಮತ್ತು ರಾಷ್ಟ್ರಮಟ್ಟದ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳ ಪಟ್ಟಿಯನ್ನು ಓದಿದರು. ರಾಜ್ಯಶಾಸ್ತ್ರ ಮುಖ್ಯಸ್ಥರಾದ ಪ್ರೊ. ರೊನಾಲ್ಡ್ ಪ್ರವೀಣ್ ಕೊರಾಯ ಸ್ವಾಗತಿಸಿ, ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಪುರುಷೋತ್ತಮ್ ಭಟ್ ವಂದಿಸಿದರು.

Related posts

ಗುರುವಾಯನಕೆರೆ ಗೆಳೆಯರ ಬಳಗ: 36ನೇ ವಷ೯ದ ಸಾವ೯ಜನಿಕ ಶ್ರೀ ಶಾರದೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಾಹಬ್ಬ 2026

Suddi Udaya

ನಿಡ್ಲೆ: ಬೂಡುಜಾಲು ನಾಡ ದೈವ ಮತ್ತು ಉಳ್ಳಾಲ್ತಿ ಅಮ್ಮನವರ ವರ್ಷಾವಧಿ ಸೋಣ ನಡಾವಳಿ ದೊಂಪದ ಬಲಿ ಜಾತ್ರಾ ಮಹೋತ್ಸವ

Suddi Udaya

ನವೋದಯ ವಿದ್ಯಾಲಯ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರವೇಶ ಪರೀಕ್ಷೆಯ ತರಬೇತಿ ಪ್ರಾರಂಭ

Suddi Udaya

ಎಸ್ ಬಿಐ ಲೈಫ್‌ ಕಾರ್ಕಳ ಬ್ರಾಂಚ್ ಬೆಳ್ತಂಗಡಿಯ ಘಟಕದ ಮಂಜುನಾಥ್ ಗುಡಿಗಾರ್ ರವರಿಗೆ ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್

Suddi Udaya

ಅಳದಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಡಗಕಾರಂದೂರು ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya
error: Content is protected !!