23.7 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕುತ್ಲೂರು ಸರಕಾರಿ ಶಾಲಾ ಮಕ್ಕಳಿಗೆ ಬಿಎಎಸ್ಎಫ್ ಸಂಸ್ಥೆಯಿಂದ ಪುಸ್ತಕ ಸಾಮಾಗ್ರಿ ಕೊಡುಗೆ

ಬೆಳ್ತಂಗಡಿ: ಕುತ್ಲೂರು ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಬಿಎಎಸ್ಎಫ್ ಸಿಎಸ್ ಆರ್ ನಿಧಿಯಿಂದ ನೀಡಲಾದ 50 ಸಾವಿರ ರೂಪಾಯಿ ಮೌಲ್ಯದ ಪುಸ್ತಕ ಸಾಮಾಗ್ರಿಗಳನ್ನು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ವಿನಾಯಕ ನರ್ವಾಡೆ ಶಾಲಾ ಮಕ್ಕಳಿಗೆ ಹಸ್ತಾಂತರಿಸಿದರು.

ಈ ವೇಳೆ ಮಾತನಾಡಿದ ಅವರು ಸರಕಾರಿ ಶಾಲೆಯ ಅಭಿವೃದ್ಧಿಗೆ ಸಂಘ ಸಂಸ್ಥೆಗಳ ಸಹಕಾರ ಅತೀ ಅಗತ್ಯವಾಗಿದೆ. ಕುತ್ಲೂರು ಸರಕಾರಿ ಶಾಲೆಯಲ್ಲಿ ಎಲ್ ಕೆ ಜಿ ಹಾಗೂ ಯು ಕೆ ಜಿ ತರಗತಿ ಆರಂಭಿಸಲು ಅಗತ್ಯವಿರುವ ಕೊಠಡಿ ನಿರ್ಮಾಣ ಸೇರಿದಂತೆ ಈ ಶಾಲೆಯ ಅಭಿವೃದ್ಧಿಗೆ ಜಿಲ್ಲಾ ಪಂಚಾಯತ್ ವತಿಯಿಂದ ಎಲ್ಲಾ ಸಹಕಾರ ನೀಡುವುದಾಗಿ ತಿಳಿಸಿದರು.
ಇದೇ ವೇಳೆ ವಿದ್ಯಾರ್ಥಿಗಳೊಂದಿಗೆ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು ಸಂವಾದ ನಡೆಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ವಾರ್ತಾಧಿಕಾರಿ ಖಾದರ್ ಷಾ, ಬಿಎಎಸ್ಎಫ್ ಸಂಸ್ಥೆಯ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಸಂತೋಷ್ ಪೈ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ್ ನಾಯಕ್ ಇಂದಾಜೆ, ಎಸ್‌ಡಿಎಂಸಿ ಅಧ್ಯಕ್ಷ ಕನಕವರ್ಮ ಜೈನ್, ಉಪಾಧ್ಯಕ್ಷೆ ಶ್ವೇತಾ ಜಗದೀಶ್, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಸಂತೋಷ ಮಾರ್ದೊಟ್ಟು, ಮಾಜಿ ಅಧ್ಯಕ್ಷೆ ಆಶಾಲತಾ, ಗಾಯತ್ರಿ, ಹರ್ಷಿತ್, ಅಮೃತ್ ಕುಮಾರ್ ಪುಟಾಣಿಗಳಾದ ಸಾಹಿತ್ಯ, ಹೃಷಿಕ್, ಹರ್ಷ್, ಅಧ್ವಿನ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಖ್ಯಾತ ವಕೀಲ ನಾರಾಯಣ ಸ್ವಾಮಿ ಭೇಟಿ

Suddi Udaya

ತಣ್ಣೀರುಪಂತ ಗ್ರಾ.ಪಂ. ಅಧ್ಯಕ್ಷರಾಗಿ ಹೇಮಾವತಿ, ಉಪಾಧ್ಯಕ್ಷರಾಗಿ ಪ್ರಿಯಾ ಆಯ್ಕೆ

Suddi Udaya

ನಾವೂರು : ಕೈಕಂಬ ಬಳಿ ರಸ್ತೆಗೆ ಬಿದ್ದ ಮರ: ನಾವೂರು ಗ್ರಾ.ಪಂ. ಹಾಗೂ ಸ್ಥಳೀಯರಿಂದ ತೆರವು ಕಾರ್ಯ

Suddi Udaya

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ಕರಾಟೆ ಸ್ಪರ್ಧೆ : ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜು ವಿದ್ಯಾರ್ಥಿಗೆ ಚಿನ್ನದ ಪದಕ

Suddi Udaya
error: Content is protected !!