32.7 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ವಿಶೇಷ ಕಾರ್ಯಾಗಾರ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ವಿಶೇಷ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಾಗಾರವು “ಸಕಾರಾತ್ಮಕ ಮಾನಸಿಕ ವರ್ತನೆ ಯ ಕುರಿತಾದ ಕಾರ್ಯಾಗಾರ ನಡೆಸಲಾಯಿತು. ಕಾರ್ಯಕ್ರಮವನ್ನು ಉಜಿರೆಯ ಮನೋವಿಜ್ಞಾನ ಉಪನ್ಯಾಸಕಿ ಡಾ. ಅಕ್ಷತಾ ಹಾಗೂ ಶಾಲೆಯ ಸಂಚಾಲಕ ಅನಂತಪದ್ಮನಾಭ ಭಟ್ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಮಾರ್ಗದರ್ಶನ ನೀಡಿದರು. ಯುವಜನರ ಜೀವನ ಕಥೆಗಳ ಮೂಲಕ ವಿಷಯವನ್ನು ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು. ಸ್ವಯಂ ಅರಿವು ಕುರಿತು ಚರ್ಚೆ ನಡೆಸಲಾಯಿತು. ವಿದ್ಯಾರ್ಥಿಗಳು 9ನೇ ತರಗತಿಯಲ್ಲಿ ಹೇಗೆ ಅಧ್ಯಯನ ಮಾಡಿದ್ದರು ಎಂಬುದನ್ನು ವಿಮರ್ಶೆ ಮಾಡಿಕೊಂಡು, ಈ ಶೈಕ್ಷಣಿಕ ವರ್ಷದಲ್ಲಿ ಪರಿಣಾಮಕಾರಿಯಾಗಿ ಹೇಗೆ ಓದಬೇಕು ಎಂಬುದರ ಬಗ್ಗೆ ಸಲಹೆಗಳನ್ನು ಪಡೆದರು.

ಅಂತಿಮವಾಗಿ, ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಮಹತ್ವಾಕಾಂಕ್ಷೆಗಳು ಮತ್ತು ಗುರಿಗಳ ಕುರಿತು ಚಿಂತನೆ ಮಾಡಿ ಅವುಗಳನ್ನು ರೂಪಿಸಿಕೊಳ್ಳುವ ಚಟುವಟಿಕೆಯಲ್ಲಿ ಭಾಗವಹಿಸಿದರು. ಬಳಿಕ ಮಧ್ಯಾಹ್ನದ ನಂತರ ವೃತ್ತಿ ಮಾರ್ಗದರ್ಶನದ ಕುರಿತು ವರ್ಚುವಲ್ ಕಾರ್ಯಾಗಾರ ನಡೆಯಿತು. ಈ ಕಾರ್ಯಾಗಾರವನ್ನು ಬೆಂಗಳೂರಿನ ಸಿಎಂಆರ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಇಲ್ಲಿನ ಸಹಪ್ರಾಧ್ಯಾಪಕ ಡಾ.ರವೀಶ್ ಕೆ. ಎಚ್ ನಡೆಸಿಕೊಟ್ಟರು. ಹಲವಾರು ಪ್ರಾತ್ಯಕ್ಷಿಕೆಗಳ ಮೂಲಕ ವಿದ್ಯಾರ್ಥಿಗಳಿಗೆ ಬದುಕಿನ ಮಹತ್ವ, ಗುರಿ ಅದಕ್ಕಾಗಿ ವಿದ್ಯಾರ್ಥಿಗಳು ಮಾಡಬೇಕಾದ ಕೆಲಸ, ಸಮಯದ ಮಹತ್ವ, ಶ್ರಮದ ಮಹತ್ವ, ಹೊಸ ವಿಷಯಗಳನ್ನು ತಿಳಿಯಲು ತಿಳಿಸಿದರು. ಹತ್ತನೇ ತರಗತಿ ಬಳಿಕ ಯಾವೆಲ್ಲ ಕೋರ್ಸುಗಳಿವೆ ಎಂಬುದನ್ನು ತಿಳಿಸಿದರು .ಯಾವ ಕೋರ್ಸುಗಳಿಗೆ ಏನು ಮಾಡಬೇಕು ಎಂಬುದನ್ನು ತಿಳಿಸಿದರು .


ಈ ಕಾರ್ಯಾಗಾರಗಳು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ಸಕಾರಾತ್ಮಕ ಚಿಂತನೆ ಹಾಗೂ ಉತ್ತಮ ಭವಿಷ್ಯ ನಿರ್ಮಾಣಕ್ಕೆ ಪ್ರೇರಣೆ ನೀಡಿತು.ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಅವರ ಮಾರ್ಗದರ್ಶನದಲ್ಲಿ ಮೂಡಿಬಂದ ಈ ಕಾರ್ಯಾಗಾರದಲ್ಲಿ ಶಾಲಾ ಹತ್ತನೇ ತರಗತಿಯ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಭಾಗವಹಿಸಿ ಮಾಹಿತಿ ಕಲೆ ಹಾಕಿದರು.

Related posts

ಅಪಘಾತದಲ್ಲಿ ಮೃತಪಟ್ಟ ಪದ್ಮುಂಜ ಸಿಎ ಬ್ಯಾಂಕ್ ಸಿಬ್ಬಂದಿ ಚಿದಾನಂದ ಗೌಡರಿಗೆ ಸಾರ್ವಜನಿಕರಿಂದ ಅಂತಿಮ ನಮನ

Suddi Udaya

ನ.26: ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಬೆಳ್ತಂಗಡಿ ಶಾಖೆಯ ಉದ್ಘಾಟನೆ

Suddi Udaya

ಉಜಿರೆ: ಅಭ್ಯಾಸ್ ಪಿ .ಯು ಕಾಲೇಜಿನಲ್ಲಿ ವಾಲ್ಮೀಕಿ ಜಯಂತಿಯ ಆಚರಣೆ

Suddi Udaya

ಬೆಳ್ತಂಗಡಿ ಸಿಎ ಬ್ಯಾಂಕ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಬಿ. ಪ್ರಮೋದ್ ಕುಮಾರ್ ನೂಜೋಡಿ ನಿಧನ

Suddi Udaya

ಬಿಜೆಪಿ ಓಡಿಲ್ನಾಳ ಶಕ್ತಿ ಕೇಂದ್ರ ಅಧ್ಯಕ್ಷರಾಗಿ ರಾಜ್ ಪ್ರಕಾಶ್ ಶೆಟ್ಟಿ ಆಯ್ಕೆ

Suddi Udaya

ಕೊಕ್ಕಡ ಮಾಯಿಲಕೋಟೆ ಸೀಮೆ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ

Suddi Udaya
error: Content is protected !!